Kukke Subrahmanya; 95 ಭಕ್ತರಿಂದ ಎಡೆಸ್ನಾನ ಸೇವೆ
ಇಂದು ಪಂಚಮಿ, ನಾಳೆ ಮಹಾರಥೋತ್ಸವ
Team Udayavani, Dec 17, 2023, 12:04 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಶನಿವಾರ ಸುಮಾರು 95 ಭಕ್ತರು ಗೋವು ಸೇವಿಸಿದ ಎಲೆಯ ಮೇಲೆ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಸೇವೆ ನೆರವೇರಲಿದೆ.
ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಬಳಿಕ ದೇಗುಲದ ಹೊರಾಂಗಣದ ಸುತ್ತ ಬಾಳೆ ಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯಗಳನ್ನು ಬಡಿಸಲಾಯಿತು. ದೇಗುಲದ ಗೋವುಗಳು ಎಲೆಗಳಲ್ಲಿದ್ದ ಅನ್ನಪ್ರಸಾದವನ್ನು ತಿಂದ ಬಳಿಕ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಭಕ್ತರು ಉರುಳು ಸೇವೆ ಕೈಗೊಂಡರು.
ಉರುಳು ಸೇವೆ ಮಾಡುತ್ತ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ಪ್ರಸಾದ ಮತ್ತು ಪ್ರಸಾದ ಭೋಜನ ಸ್ವೀಕರಿಸಿದರು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.
ಇಂದು ಪಂಚಮಿ ರಥೋತ್ಸವ
ಕ್ಷೇತ್ರದಲ್ಲಿ ಡಿ.17ರಂದು ರಾತ್ರಿ ಪಂಚಮಿ ರಥೋತ್ಸವ ಜರಗಲಿದೆ. ಶ್ರೀ ದೇವರಿಗೆ ಮಹಾಪೂಜೆ, ಉತ್ಸವ, ತೈಲಾಭ್ಯಂಜನ ಜರಗಲಿದೆ. ಡಿ.18ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ ಜರಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ