ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವ: ಎಲ್‌ಐಸಿಯಿಂದ 300 ವಿಮಾ ಗ್ರಾಮಗಳ ಘೋಷಣೆ

Team Udayavani, Apr 13, 2023, 6:20 AM IST

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವ: ಎಲ್‌ಐಸಿಯಿಂದ 300 ವಿಮಾ ಗ್ರಾಮಗಳ ಘೋಷಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಗಳಿಗೆ ವಿಮಾ ಭದ್ರತೆ ನೀಡುವ ಕೆಲಸವನ್ನು ಕಳೆದ ಎರಡು ದಶಕಗಳಿಂದ ಮಾಡುತ್ತ ಬಂದಿದ್ದು, ರಾಜ್ಯದ ಸುಮಾರು 20,09,650 ರಷ್ಟು ಮಂದಿ ಇದರ ಪ್ರಯೋಜನೆ ಪಡೆದಿದ್ದಾರೆ ಎಂದು ಸಿಇಒ ಡಾ| ಎಲ್‌. ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಯೋಜನೆಯ ಸಂಘಗಳ ಸದಸ್ಯರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ 2007ರಿಂದ ಗ್ರಾಮಾಭಿವೃದ್ಧಿ ಯೋಜ ನೆಯು ಭಾರತೀಯ ಜೀವ ವಿಮಾ ನಿಗಮದೊಂದಿಗೆ ಒಪ್ಪಂದವನ್ನು ಮಾಡಿಕೊಂಡು ಕಡಿಮೆ ಪ್ರೀಮಿಯಂನ ವಿಶೇಷ ಪಾಲಿಸಿಗಳನ್ನು ಪರಿ ಚಯಿಸಲಾಗುತ್ತಿದೆ. ಪ್ರಸ್ತುತ ಮೈಕ್ರೋಬಚತ್‌ ಮತ್ತು ಭಿಮಾ ಜ್ಯೋತಿ ಪಾಲಿಸಿಗಳ ಪ್ರಯೋಜನ ವನ್ನು ಸದಸ್ಯರು ಪಡೆಯುತ್ತಿದ್ದಾರೆ.

ಮೈಕ್ರೋಬಚತ್‌ ಪಾಲಿಸಿಯಡಿ ವಿಮಾಗ್ರಾಮ ಗುರುತಿಸುವ ವಿಶೇಷ ಕಾರ್ಯ ಭಾರತೀಯ ಜೀವ ವಿಮಾ ನಿಗಮವು ಮಾಡುತ್ತಿದೆ. ಈಗಾಗಲೇ ರಾಜ್ಯದಾದ್ಯಂತ 11,93,000 ಮಂದಿ ಮೈಕ್ರೋಬಚತ್‌ ಪಾಲಿಸಿ ಮಾಡಿಸಿರುತ್ತಾರೆ.

ಏನಿದು ವಿಮಾಗ್ರಾಮ ?
ಪ್ರತಿ ಗ್ರಾಮದ ಜನಸಂಖ್ಯೆ ಮತ್ತು ಅಲ್ಲಿ ಮಾಡಲಾದ ಮೈಕ್ರೋಬಚತ್‌ ಪಾಲಿಸಿಯ ಆಧಾರದಲ್ಲಿ ವಿಮಾ ಗ್ರಾಮ ಗುರುತಿಸುವ ಕೆಲಸ ಭಾರತೀಯಜೀವ ವಿಮಾ ನಿಗಮವು ಮಾಡುತ್ತದೆ. ಈಗಾಗಲೇ 2019ರಿಂದ ರಾಜ್ಯದಾದ್ಯಂತ 300 ವಿಮಾ ಗ್ರಾಮ ಗುರುತಿಸಲಾಗಿದೆ. ಆಯ್ಕೆಯಾದ ಗ್ರಾಮಗಳಿಗೆ ಒಂದು ಘಟಕಕ್ಕೆ 35,000 ರೂ. ವೆಚ್ಚದಲ್ಲಿ ಈ ಕೆಳಗಿನ ಯಾವುದಾದರೂ ಒಂದು ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಯಡಿ ಶಾಲೆ, ಗ್ರಾ.ಪಂ., ದೇವಸ್ಥಾನಗಳಿಗೆ ಕುಡಿಯುವ ನೀರಿನ ವ್ಯವಸ್ಥೆ (ನೀರಿನ ಟ್ಯಾಂಕ್‌, ಶುದ್ಧಕುಡಿಯುವ ನೀರಿನ ಘಟಕ), ಶಾಲೆಗಳಿಗೆ ಶೌಚಾಲಯ, ಸೋಲಾರ್‌ ದಾರಿದೀಪ ಮತ್ತು ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಒಳಗೊಂಡಿರುತ್ತದೆ.

ಈಗಾಗಲೇ ಗ್ರಾಮಾಭಿವೃದ್ಧಿ ಯೋಜ ನೆಯ ಸಹಕಾರದಲ್ಲಿ ರಾಜ್ಯ ದಾದ್ಯಂತ 300 ವಿಮಾ ಗ್ರಾಮಗಳನ್ನು ಗುರುತಿಸಿ 1,02,90,000 ರೂ. ವೆಚ್ಚದ ಸೌಲಭ್ಯ ಒದಗಿಸಲಾಗಿದೆ. ದಾವಣ ಗೆರೆ ಪ್ರೌಢ ಶಾಲೆಯಲ್ಲಿ 168 ವಿದ್ಯಾರ್ಥಿ ಗಳಿದ್ದು, ಇದುವರೆಗೆ ತಮ್ಮ ಮನೆಗಳಿಂದ ಕುಡಿಯುವ ನೀರು ತರುತ್ತಿದ್ದರು. ಪ್ರಸ್ತುತ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯಿಂದಾಗಿ ಎಲ್ಲರಿಗೂ ಕುಡಿಯಲು ಶುದ್ಧ ನೀರು ದೊರಕುತ್ತಿದ್ದು ತುಂಬಾ ಪ್ರಯೋಜನವಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಸೌಲಭ್ಯಕ್ಕೆ ಮಾನದಂಡಗಳು
2000 ಜನರಿರುವ ಗ್ರಾಮದಲ್ಲಿ ಕನಿಷ್ಠ 75 ಮಂದಿ ಹಾಗೂ 5000 ಮಂದಿ ಇರುವಲ್ಲಿ ಕನಿಷ್ಠ 100 ಮಂದಿ ವಿಮಾ ಯೋಜನೆಗೆ ನೊಂದಾಯಿಸಿರಬೇಕು. ಜನಸಂಖ್ಯೆ 5001 ರಿಂದ 10,000 ಇರುವಲ್ಲಿ ಕನಿಷ್ಠ 150 ವಿಮೆ ನೊಂದಾಯಿಸಿರಬೇಕು. ಗ್ರಾ.ಪಂ. ವತಿಯಿಂದ ಗ್ರಾಮದ ಜನಸಂಖ್ಯೆ ಕುರಿತು ದೃಢೀಕರಣ ನೀಡುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.