ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಲಾರಿ: ಅಪಾರ ನಷ್ಟ
Team Udayavani, Jun 5, 2020, 12:20 PM IST
ಬಂಟ್ವಾಳ: ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.
ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದಿದೆ ನಂತರ ರಸ್ತೆಯ ಬದುಗೆ ಮಗುಚಿ ಬಿದ್ದಿದೆ. ಲಾರಿ ಮಗುಚಿ ಬಿದ್ದ ವೇಳೆ ಲಾರಿ ಚಾಲಕ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ. ಪಾರಾಗಿದ್ದಾನೆ.
ವಿದ್ಯುತ್ ಕಂಬಗಳು ತುಂಡಾಗಿ ಬಿದ್ದ ಪರಿಣಾಮ ಈ ಭಾಗದ ಜನರಿಗೆ ವಿದ್ಯುತ್ ಕಡಿತಗೊಂಡಿದೆ. ಇನ್ನು ಮೆಸ್ಕಾಂ ಇಲಾಖೆಯವರು ವಿದ್ಯುತ್ ಕಂಬಗಳನ್ನು ಹಾಕಿದ ಬಳಿಕವೇ ಈ ಭಾಗದ ಜನರಿಗೆ ವಿದ್ಯುತ್ ಸಂಪರ್ಕ ಸಿಗಲಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್. ಐ ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ