ಡಾ| ಹೆಗ್ಗಡೆ ಅವರಿಗೆ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ
Team Udayavani, Aug 17, 2021, 6:49 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಆ. 18ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು.