ಮೆಲ್ಕಾರ್: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Jul 30, 2023, 11:29 PM IST
ಬಂಟ್ವಾಳ: ಮೆಲ್ಕಾರಿನಲ್ಲಿ ದಿನಸಿ ಸಾಮಗ್ರಿ ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ರವಿವಾರ ನಡೆದಿದೆ.
ಬೋಳಂಗಡಿ ನಿವಾಸಿ ಮ್ಯಾಕ್ಸಿಂ ಲೋಬೊ (56) ಮೃತರು. ಅವರು ಮನೆಯಿಂದ ನಡೆದುಕೊಂಡು ಮೆಲ್ಕಾರಿಗೆ ಆಗಮಿಸಿ ಮತ್ತೆ ಮನೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತತ್ಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ತುಂಬೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಸ್ವಯಂನಿವೃತ್ತಿ ಪಡೆದಿದ್ದ ಅವರು ವಿದೇಶದಲ್ಲಿ ಉದ್ಯೋಗದಲ್ಲಿರುವ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.