ಬೆಳ್ತಂಗಡಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
Team Udayavani, Jul 21, 2022, 6:48 PM IST
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂಬುವವರು ಮಂಗಳವಾರ ರಾತ್ರಿ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಕೃಷ್ಣಪ್ಪ ಪೂಜಾರಿಯವರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಸುಮಾರು ಎಂಟು ಗಂಟೆಯ ಸಮಯಕ್ಕೆ ಕಾಣೆಯಾಗಿದ್ದರು. ಅವರು ನಾಪತ್ತೆಯಾಗಿದ್ದ ಬಗ್ಗೆ ಮನೆ ಮಂದಿ ಸುತ್ತಮುತ್ತ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ.
ಆದರೆ ಪತ್ತೆಯಾಗಿರಲಿಲ್ಲ. ಬುಧವಾರ ಸಂಜೆ ಮೃತ ದೇಹವು ಬಾವಿಯಲ್ಲಿ ತೇಲಾಡುತ್ತಿರುವುದು ಮನೆಯವರಿಗೆ ಕಂಡಿದೆ. ತಕ್ಷಣ ಬಾವಿಯಿಂದ ಮೃತದೇಹ ತೆಗೆಯಲಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಸಾವನ್ನಪ್ಪಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು