Sullia ಮಂಡೆಕೋಲು: ಕೃಷಿ ತೋಟಕ್ಕೆ ಲಗ್ಗೆ, ಹಾನಿ; ಮತ್ತೆ ಮುಂದುವರಿದ ಕಾಡಾನೆ ಹಾವಳಿ


Team Udayavani, Sep 10, 2023, 10:56 PM IST

Sullia ಮಂಡೆಕೋಲು: ಕೃಷಿ ತೋಟಕ್ಕೆ ಲಗ್ಗೆ, ಹಾನಿ; ಮತ್ತೆ ಮುಂದುವರಿದ ಕಾಡಾನೆ ಹಾವಳಿ

ಸುಳ್ಯ: ಕರ್ನಾಟಕದ ಗಡಿ ಗ್ರಾಮ ಮಂಡೆಕೋಲು ಭಾಗದಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರಿದಿದ್ದು, ಕೃಷಿ ತೋಟಕ್ಕೆ ಲಗ್ಗೆ ಇಡುವ ಕಾಡಾನೆಗಳ ಹಿಂಡು ಅಪಾರ ಪ್ರಮಾಣದ ಕೃಷಿ ನಾಶಪಡಿಸುತ್ತಿದೆ.

ಮಂಡೆಕೋಲು ಗ್ರಾಮದ ಮಾರ್ಗ ಬಳಿಯ ಹಮೀದ್‌ ಮಾವಜಿ ಎಂಬವರ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟಿರುವ ಕಾಡಾನೆಗಳ ಹಿಂಡು ಸುಮಾರು 20ಕ್ಕೂ ಅಧಿಕ ತೆಂಗಿನ ಗಿಡಗಳನ್ನು ನಾಶ ಮಾಡಿದೆ. ಬಾಳೆ ಗಿಡಗಳನ್ನು ಹಾನಿ ಮಾಡಿದೆ. ದೇವರಗುಂಡದ ಹಲವು ಕೃಷಿಕರ ತೋಟಗಳಿಗೆ ಕಾಡಾನೆ ನಿರಂತರ ಲಗ್ಗೆ ಇಟ್ಟು ಬಾಳೆ, ತೆಂಗು, ಅಡಿಕೆ ಕೃಷಿ ನಾಶಪಡಿಸುತ್ತಿವೆ.

ರಾತ್ರಿ ವೇಳೆ ತೋಟಕ್ಕೆ ಕಾಡಾನೆ ದಾಳಿ ಇಟ್ಟಿರುವ ವೇಳೆ ಅರಣ್ಯ ಇಲಾಖೆ ಯವರಿಗೆ ಮಾಹಿತಿ ನೀಡಿ ಎರಡೂ ದಿನವೂ ರಾತ್ರಿ ಬಂದು ಆನೆಗಳನ್ನು ಕಾಡಿಗೆ ಅಟ್ಟಲಾಗಿದೆ. ಆದರೆ ಹಗಲು ಹೊತ್ತಿನಲ್ಲಿ ಹೊಳೆಯಿಂದ ಆಚೆ ಕೇನಾಜೆ ಕಾಡಿನಲ್ಲಿ ಬೀಡುಬಿಟ್ಟು ಸಂಜೆಯಾಗುತ್ತಲೇ ಹೊಳೆ ದಾಟಿ ತೋಟಕ್ಕೆ ದಾಂಗುಡಿಯಿಡುತ್ತಿವೆ ಎಂದು ಕೃಷಿಕರು ತಿಳಿಸಿದ್ದಾರೆ.

ಪಥ ಬದಲಿಸುವ ಕಾಡಾನೆ
ಮಂಡೆಕೋಲು, ಅಜ್ಜಾವರ ಗ್ರಾಮದಲ್ಲಿ ಕಾಡಾನೆಗಳು ಬರದಂತೆ ಆನೆ ಕಂದಕ, ಸೋಲಾರ್‌ ಬೇಲಿ, ನೇತಾಡುವ ಸೋಲಾರ್‌ ಬೇಲಿ ಅಳವಡಿಸಲಾಗಿದ್ದರೂ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಬಂದಿಲ್ಲ. ಆನೆ ಹಾವಳಿ ನಿಯಂತ್ರಣಕ್ಕೆ ದೇವರಗುಂಡ ಭಾಗದಲ್ಲಿ ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನು ಅಡ್ಡಲಾಗಿ ಒಂದಕ್ಕೊಂದು ಜೋಡಣೆ ಮಾಡಿ ಸಾಲಾಗಿ ಇರಿಸಲಾಗಿತ್ತು. ಇದರಿಂದ ಯಶಸ್ಸನ್ನೂ ಕಂಡರು. ಆ ನಂತರ ಆನೆಗಳು ಆ ದಾರಿ ಮೂಲಕ ಬಂದು ತೋಟಕ್ಕೆ ದಾಳಿ ಮಾಡಿರಲಿಲ್ಲ. ಇದೀಗ ಪಥ ಬದಲಿಸಿ ಬೇರೆ ದಾರಿಯಿಂದ ಸತತವಾಗಿ ಎರಡು ದಿನಗಳಿಂದ ದಾಳಿ ಮಾಡಲು ಪ್ರಾರಂಭಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಡಾನೆ ದಾಳಿಯಿಂದ ಅಡಿಕೆ ತೋಟ ನಾಶ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನೆಲ್ಲಿಗುಡ್ಡೆ ಮಾರಂಗಾಯಿ ಎಂಬಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾತ್ರಿ ಶಿಬಾಜೆ ಪತ್ತಿಮಾರು ಸಮೀಪ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಅಡಿಕೆ ಹಾಗೂ ತೆಂಗಿನ ಗಿಡಗಳು ನಾಶವಾಗಿವೆ.

ಚಾರ್ಮಾಡಿ ಸಮೀಪದ ಲೀಲಾವತಿ ಲೋಕಯ್ಯ ಗೌಡ ಎಂಬವರ ತೋಟಕ್ಕೆ ಶುಕ್ರವಾರ ತಡರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು 125ಕ್ಕಿಂತ ಅಧಿಕ ಅಡಿಕೆ ಗಿಡಗಳನ್ನು ಸಂಪೂರ್ಣ ನಾಶ ಮಾಡಿದೆ.
ಆನೆಗಳ ಹಿಂಡು ತೋಟದ ಒಂದು ಭಾಗದಲ್ಲಿ ದಾಳಿ ಮಾಡಿದ್ದು, ಅಲ್ಲಿದ್ದ ಅಡಿಕೆ ತೋಟ ಸಂಪೂರ್ಣ ನೆಲಕ್ಕುರುಳಿದೆ. ಕಳೆದ ಮೂರು ವರ್ಷಗಳ ಹಿಂದೆ 240 ಅಡಿಕೆ ಗಿಡಗಳನ್ನು ನಾಟಿ ಮಾಡಿದ್ದು ಅದರಲ್ಲಿ ಈಗ ಅರ್ಧಕ್ಕಿಂತ ಹೆಚ್ಚು ಗಿಡಗಳು ಆನೆ ದಾಳಿಗೆ ಬಲಿಯಾಗಿವೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದ್ದಾರೆ.

ಶನಿವಾರ ರಾತ್ರಿ ಶಿಬಾಜೆ ಗ್ರಾಮದ ಪತ್ತಿಮಾರು ರಾಘವೇಂದ್ರ ಅಭ್ಯಂಕರ್‌ ಅವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಫಸಲು ಬರುತ್ತಿದ್ದ 10ಕ್ಕೂ ಅಧಿಕ ತೆಂಗಿನ ಮರ, 40ಕ್ಕೂ ಅಧಿಕ ಅಡಿಕೆ ಮರ ಹಾಗೂ ಬಾಳೆಗಿಡಗಳು ನಾಶಗೊಂಡಿದೆ. ಒಂದು ವರ್ಷಗಳ ಹಿಂದೆ ಇದೇ ರೀತಿ ದಾಳಿ ಮಾಡಿ ಕೃಷಿ ನಾಶಮಾಡಿತ್ತು ಎಂದು ಮನೆ ಮಂದಿ ತಿಳಿಸಿದ್ದಾರೆ. ಶಿಬಾಜೆ ಸುತ್ತಮುತ್ತ ನಿರಂತರವಾಗಿ ಕಾಡಾನೆಗಳು ದಾಳಿ ನಡೆಸುತ್ತಿರುವುದರಿಂದ ಕೃಷಿಕರು ಆತಂಕಕ್ಕೀಡಾಗಿದ್ದಾರೆ. ಕಳೆದ ಎರಡು ವಾರಗಳ ಹಿಂದೆ ಇಲ್ಲಿನ ಪತ್ರಿಕಾ ವಿತರಕರು ಮುಂಜಾನೆ ತೆರಳುತ್ತಿದ್ದಾಗ, ದಾರಿಯಲ್ಲೇ ಕಾಡಾನೆ ಪ್ರತ್ಯಕ್ಷವಾಗಿತ್ತು.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.