ತಿಂಗಳು ಕಳೆದರೂ ಜಾರಿಯಾಗದ ನೂತನ ಮರಳು ನೀತಿ


Team Udayavani, Dec 27, 2021, 3:40 AM IST

ತಿಂಗಳು ಕಳೆದರೂ ಜಾರಿಯಾಗದ ನೂತನ ಮರಳು ನೀತಿ

ತನ ಮರಳು ನೀತಿಗೆ ಸಚಿವ ಸಂಪುಟದ ಒಪ್ಪಿಗೆ ದೊರೆತು ಒಂದು ತಿಂಗಳು ಕಳೆದರೂ ಜಾರಿಯಾಗದ ಕಾರಣ ಅತಂತ್ರ ಪರಿಸ್ಥಿತಿ ಮುಂದುವರಿದಿದೆ. ಮರಳು ಸಾಗಾಟ ನೀತಿಯಲ್ಲಿ ಹಲವು ಬದಲಾವಣೆ ಹಾಗೂ ಸರಳತೆಯ ಕುರಿತು ನವೆಂಬರ್‌ 8ರಂದು ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಇದರ ಪ್ರಕಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಳ್ಳ, ತೊರೆ, ಹೊಳೆ, ನದಿಗಳಿಂದ ತೆಗೆದ ಮರಳನ್ನು ಸ್ಥಳೀಯವಾಗಿ ಬಳಸಲು ಅವಕಾಶ ನೀಡಲಾಗಿತ್ತು. ತಾಲೂಕನ್ನು ಒಂದು ಘಟಕವಾಗಿ ಗುರುತಿಸಿ, ದಿನಕ್ಕೆ ಗರಿಷ್ಠ ಮೂರು ಟನ್‌ ಮರಳು ಸಾಗಾಟಕ್ಕೆ ಅವಕಾಶ, ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಸಮಿತಿಯಿಂದ ಮರಳು ನಿಕ್ಷೇಪ ಗುರುತಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಇದನ್ನು ಅಂತಿಮಗೊಳಿಸುವುದು. ಪ್ರತಿ ಲೋಡ್‌ ಮರಳಿಗೆ 300 ರೂ. ಸ್ಥಳೀಯ ಗ್ರಾ.ಪಂ.ಗೆ ರಾಜಸ್ವ ಪಾವತಿ ಇತ್ಯಾದಿಗಳನ್ನು ನಿಯಮಗಳಲ್ಲಿ ಅಳವಡಿಸಲಾಗಿದೆ. ಇದರಿಂದ ಸ್ಥಳೀಯ ಗ್ರಾ.ಪಂ.ಗೂ ಒಂದಿಷ್ಟು ಆದಾಯ ಬರಲಿದೆ ಹಾಗೂ ಅಕ್ರಮ ಸಾಗಾಟಕ್ಕೆ ಕಡಿವಾಣ ಬೀಳಲಿದೆ. ಈಗಾಗಲೇ ಹಲವು ಕಡೆ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಪಂಚಾಯತ್‌ಗಳಿಗೆ ಒಂದಿಷ್ಟು ಬಲ ನೀಡುವ ನಿರೀಕ್ಷೆ ಹೊಂದಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರವ ನೇತ್ರಾವತಿ, ಮೃತ್ಯುಂಜಯ, ನೆರಿಯ, ಅಣಿಯೂರು, ಕಪಿಲ ಮೊದಲಾದವುಗಳ ನದಿ, ಹೊಳೆ ಹಾಗೂ ಇವುಗಳ ಸಂಪರ್ಕ ಹಳ್ಳಗಳಲ್ಲಿ ಭಾರೀ ಮಟ್ಟದ ಮರಳು ಸಂಗ್ರಹವಾಗಿದೆ. ಇದನ್ನು ಶೀಘ್ರ ತೆರವುಗೊಳಿಸುವುದು ಅಗತ್ಯವಿದೆ. ಈ ನದಿ, ಹೊಳೆ, ಹಳ್ಳಗಳಿಗಿರುವ ಹಲವಾರು ಕಿಂಡಿ ಅಣೆಕಟ್ಟು, ಸಾಂಪ್ರದಾಯಿಕ ಕಟ್ಟಗಳನ್ನು ಕಟ್ಟುವ ಪ್ರದೇಶದಲ್ಲಿ ಮರಳ ದಿಬ್ಬಗಳು ಸಂಗ್ರಹವಾಗಿರುವರಿಂದ ಈ ಪ್ರದೇಶದಲ್ಲಿ ನೀರು ಸಂಗ್ರಹಿಸಲು ಸಮಸ್ಯೆ ಎದುರಾಗಿದೆ. ನದಿ ಪ್ರದೇಶಗಳಲ್ಲಿ ಮರಳು ತುಂಬಿರುವುದು ಅಂತರ್ಜಲ ಮಟ್ಟಕ್ಕೂ ಮಾರಕವಾಗಲಿದೆ. ಮರಳು ತುಂಬಿರುವ ಕಾರಣ ನದಿ ಪಾತ್ರಗಳು ಕೆಲವು ಅಡಿ ಎತ್ತರದಲ್ಲಿ ನೀರು ಮೇಲ್ಭಾಗದಲ್ಲಿ ಹರಿಯುವುದರಿಂದ ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯ ಮಳೆ ಸುರಿದರೂ ಈ ನದಿಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗುತ್ತದೆ.

ಸಂಪುಟ ಒಪ್ಪಿಗೆ ನೀಡಿರುವ ಮರಳು ನೀತಿ ಶೀಘ್ರ ಜಾರಿಯಾಗಿ ಮರಳು ತೆರವು ನಡೆಯಬೇಕಿದೆ. ಈಗ ಮನೆ ಸಹಿತ ವಿವಿಧ ರೀತಿಯ ನಿರ್ಮಾಣ ಕಾಮಗಾರಿಗಳೂ ವೇಗ ಪಡೆದಿರುವುದರಿಂದ ಮರಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ. ಮಾತ್ರವಲ್ಲದೆ ಈಗ ಮಳೆ ಕಡಿಮೆಯಾಗಿದ್ದು ನದಿಗಳ ನೀರಿನ ಮಟ್ಟ ಇಳಿಕೆಯಾಗಿದೆ.  ಇದರಿಂದ ಮರಳು ತೆರವು ಸುಲಭವಾಗಲಿದೆ. ಕೃಷಿಕರಿಗೂ ಸಾಕಷ್ಟು ಅನುಕೂಲ ದೊರೆಯಲಿದೆ. ಎಂಎಲ್ಸಿ ಚುನಾವಣೆ ನೀತಿ ಸಂಹಿತೆಯ ಕಾರಣ ಕಳೆದ ವಾರದವರೆಗೆ ಇತ್ತಾದರೂ ಈಗ ಅವೆಲ್ಲವೂ ಮುಗಿದಿದೆ. ಮರಳು ನೀತಿ ಜಾರಿಯಾಗಿ ಸುಲಭವಾಗಿ ಜನರಿಗೆ ಮರಳು ದೊರೆಯದಿದ್ದಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ಸಾಗುವ ಸಾಧ್ಯತೆ ಇದೆ. ಜನರು ದುಬಾರಿ ಬೆಲೆ ತೆತ್ತು ಖರೀದಿಸುವುದು ಅನಿವಾರ್ಯವಾಗುತ್ತದೆ. ಇದರಿಂದ ಜನರಿಗೂ ಸರಕಾರಕ್ಕೂ ನಷ್ಟವಾಗಲಿದೆ. ಆದುದರಿಂದ ಸರಕಾರ ಕೂಡಲೇ ಈ ಕುರಿತು ಗಮನ ಹರಿಸುವುದು ತುರ್ತು ಅಗತ್ಯವಾಗಿದೆ.

ಸಂ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.