
ಸುಳ್ಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟಿಸ್
Team Udayavani, Mar 26, 2023, 6:10 AM IST

ಸುಳ್ಯ: ಸುಳ್ಯದಲ್ಲಿರುವ ಪಿಎಫ್‌ಐ ಕಚೇರಿ ಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಜನರಲ್ಲಿ ಭಯೋತ್ಪಾದನೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಮತ್ತು ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಆರೋಪದಡಿಯಲ್ಲಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ಎನ್‌ಐಎ ನೋಟಿಸ್ ಜಾರಿ ಮಾಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧಿಸಿದಂತೆ ಈ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯದ ಪಿಎಫ್‌ಐ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಮಹಜರು ನಡೆಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
