ಪುತ್ತೂರು: ನಗರಸಭೆ ಹೊಸ ಕಟ್ಟಡ ರೂಪುರೇಷೆ ಪೂರ್ಣ

 7 ಕೋಟಿ ರೂಪಾಯಿ ವೆಚ್ಚ; ಭೂಮಿಪೂಜೆಗೆ ಸಿದ್ಧತೆ

Team Udayavani, Aug 19, 2020, 4:59 AM IST

ಪುತ್ತೂರು: ನಗರಸಭೆ ಹೊಸ ಕಟ್ಟಡ ರೂಪುರೇಷೆ ಪೂರ್ಣ

ಪುತ್ತೂರು: ಹೊಸ ಕಟ್ಟಡ ನಿರ್ಮಾಣಗೊಳ್ಳಲಿರುವ ಸ್ಥಳ.

ಪುತ್ತೂರು: ನಗರಸಭೆ ಕಚೇರಿಗೆ ಏಳು ಕೋಟಿ ರೂಪಾಯಿ ವೆಚ್ಚದ ಕಟ್ಟಡ ನಿರ್ಮಾಣಕ್ಕೆ ರೂಪು ರೇಷೆ ಪೂರ್ಣಗೊಂಡಿದ್ದು, ಭೂಮಿ ಪೂಜೆಗೆ ಸಿದ್ಧತೆ ನಡೆದಿದೆ.

ಈ ಹಿಂದೆ ಪ.ಪಂ., ಪುರಸಭೆ ಅವಧಿಯಲ್ಲಿನ ಕಾರ್ಯ ನಿರ್ವಹಣೆಗೆ ಬಳಸಿದ ಹಳೆ ಕಟ್ಟಡ ತೆರವು ಮಾಡಿ ಆ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಾಣ ವಾಗಲಿದೆ. ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ಅಜೇಯ ಕೃಷ್ಣ ಉಪ್ಪಂಗಳ ಅವರು ಪ್ರಸ್ತಾವಿತ ಕಟ್ಟಡ ನೀಲನಕಾಶೆ ತಯಾರಿಸಿದ್ದಾರೆ. ಹೊಸ ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಹಳೆ ಕಟ್ಟಡ ತೆರವು ಕಾರ್ಯ ಆರಂಭಗೊಂಡಿದೆ.

ಸಂತೆ ಕಟ್ಟಡದಲ್ಲಿ ನಗರಸಭೆ ಕಚೇರಿ
ಪ.ಪಂ. ಕಾಲದಿಂದ ಪುರಸಭೆ ಅವಧಿಯ ಕೆಲವು ವರ್ಷಗಳ ತನಕ ಮಿನಿ ವಿಧಾನಸೌಧದ ಬಳಿಯ ಕಟ್ಟಡದಲ್ಲಿ ಕಾರ್ಯನಿರ್ವಹಿಸಿ ಬಳಿಕ 16 ವರ್ಷಗಳ ಹಿಂದೆ ಗ್ರಾಮ ಛಾವಡಿ ಸಮೀಪದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಈ ಕಟ್ಟಡ ನೆಲ ಮಹಡಿಯಲ್ಲಿ ಸಂತೆಗೆಂದೇ ವ್ಯಾಪಾರಿ ವಿಭಾಗಗಳನ್ನು ನಿರ್ಮಿಸಲಾಗಿತ್ತು. ಮೇಲಿನ ಮಹಡಿಯಲ್ಲಿ ಆಡಳಿತ ಕಚೇರಿ, ಕಾರ್ಯಾಲಯ ನಿರ್ಮಿಸಲಾಗಿತ್ತು. ಕಟ್ಟಡ ಪೂರ್ಣಗೊಂಡ ಬಳಿಕ ಸಂತೆಗೆ ಮೀಸಲಿಟ್ಟ ಜಾಗವನ್ನು ನಗರಸಭೆ ಆವರಿಸಿಕೊಂಡ ಕಾರಣ ಸಂತೆ ವ್ಯವಹಾರ ಕಿಲ್ಲೆ ಮೈದಾನದಲ್ಲೇ ಮುಂದುವರಿದಿತ್ತು.

ಸಂತೆ ಕಟ್ಟೆ ಕೈಬಿಟ್ಟು ನಗರಸಭೆ ಕಟ್ಟಡ
ನಗರಸಭಾ ಆಡಳಿತ ಕಚೇರಿಯ ಹೊಸ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ 7 ಕೋ. ರೂ. ಯೋಜನೆ ಹಾಕಿ ಕೊಳ್ಳಲಾಗಿದೆ. ಶಾಸಕರ, ನಗರೋತ್ಥಾನ ಅನುದಾನ ಇರಿಸಲಾಗಿದೆ. ಎರಡು ವರ್ಷಗಳ ಹಿಂದೆ ಕಿಲ್ಲೆ ಮೈದಾನದ ಪುತ್ತೂರು ಸೋಮವಾರದ ಸಂತೆ ಯನ್ನು ಸಂಚಾರ ದಟ್ಟಣೆ ನಿಯಂತ್ರಣ ಸಲು ವಾಗಿ ಎಪಿಎಂಸಿಗೆ ಸ್ಥಳಾಂತರ ಮಾಡ ಲಾಗಿತ್ತು. ಆದರೆ ಅದಕ್ಕೆ ಆಕ್ಷೇಪ ವ್ಯಕ್ತವಾದ ಕಾರಣ ಮರಳಿ ಕಿಲ್ಲೆ ಮೈದಾನಕ್ಕೆ ಸ್ಥಳಾಂತರ ಗೊಳಿಸಲಾಗಿತ್ತು. ಇದೇ ಸಂದರ್ಭ ಆಗಿನ ನಗರಸಭೆ ಆಡಳಿತವು ಸಂತೆ ವ್ಯಾಪಾರಕ್ಕೆ ಪ್ರತ್ಯೇಕ ಸಂತೆಕಟ್ಟೆ ನಿರ್ಮಿಸುವ ಭರವಸೆ ನೀಡಿ ಹಿಂದಿನ ಪುರಸಭೆ ಕಾರ್ಯನಿರ್ವಹಿಸುತ್ತಿದ್ದ ಜಾಗದಲ್ಲಿ ಸಂತೆ ಕಟ್ಟೆ ನಿರ್ಮಿಸಲು 1 ಕೋ. ರೂ. ಅನುದಾನವನ್ನೂ ನಿಗದಿ ಪಡಿಸಿತ್ತು. ಈಗ ಅದೇ ಜಾಗದಲ್ಲಿ ಸಂತೆ ಕಟ್ಟೆ ಕೈಬಿಟ್ಟು ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ಹಾಕಿ ಕೊಳ್ಳಲಾಗಿದೆ. ಈಗಿರುವ ನಗರಸಭೆ ಕಟ್ಟಡವನ್ನು ವಾಣಿಜ್ಯ ಸಂಕೀರ್ಣ, ದಿನವಹಿ ಮಾರುಕಟ್ಟೆ ಉದ್ದೇಶಕ್ಕೆ ಬಳಸುವ ಸಾಧ್ಯತೆ ಇದೆ.

ಆ. 26: ಭೂಮಿಪೂಜೆ
ಏಳು ಕೋಟಿ ರೂ. ವೆಚ್ಚದಲ್ಲಿ ನಗರಸಭೆಯ ಹೊಸ ಕಚೇರಿ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಶಾಸಕರ ಉಪಸ್ಥಿತಿಯಲ್ಲಿ ಆ. 26ರಂದು ಭೂಮಿಪೂಜೆ ನೆರವೇರಿಸಲಾಗುವುದು.
-ರೂಪಾ ಟಿ. ಶೆಟ್ಟಿ , ಪೌರಾಯುಕ್ತೆ, ನಗರಸಭೆ, ಪುತ್ತೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.