ಪುತ್ತೂರು ಪೊಲೀಸ್ ಠಾಣೆಯ ಎದುರಿನಲ್ಲೆ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ
Team Udayavani, Sep 4, 2019, 8:31 AM IST
ಪುತ್ತೂರು: ಸಂಪ್ಯ ಪೊಲೀಸ್ ಠಾಣೆಯ ಎದುರಿನಲ್ಲೆ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸಂಪ್ಯ ಠಾಣೆಯ ಎದುರಿನಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಈ ಹತ್ಯೆ ಮಾಡಲಾಗಿದೆ.
ಕೊಲೆಯಾದವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಿವೃತ್ತ ಅಧಿಕಾರಿ ಸಂಪ್ಯ ಸಮೀಪದ ಮೇರ್ಲ ರಮೇಶ್ ಸುವರ್ಣ ರ ಪುತ್ರ ಕಾರ್ತಿಕ್ ಸುವರ್ಣ (27) ಎಂದು ಗುರುತಿಸಲಾಗಿದೆ.
ಸೆ.3 ರ ರಾತ್ರಿ 11;30 ಗಂಟೆಯ ಸುಮಾರಿಗೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆರೋಪಿಗಳಾದ ಸಂಪ್ಯದ ಚರಣ್ರಾಜ್, ಕಿರಣ್ ಮತ್ತು ವಾಹನ ಚಾಲಕನಾದ ಪ್ರೀತೇಶ್ ಎಂಬವರು ಬಂದು ಕಾರ್ತಿಕ್ ಗೆ, ಅವ್ಯಾಚ ಶಬ್ಧಗಳಿಂದ ನಿಂದಿಸಿ ಹರಿತವಾದ ಆಯುಧವೊಂದರಿಂದ ಕಾರ್ತಿ ಎದೆಯ ಕೆಳಭಾಗಕ್ಕೆ ತಿವಿದಿದ್ದಾರೆ. ಇದರಿಂದ ಅಧಿಕ ರಕ್ತ ಸ್ರಾವವಾಗಿ ಕಾರ್ತಿಕ್ ಕುಸಿದು ಬಿದ್ದಿದ್ದಾರೆ. ಆ ವೇಳೆ ಸಾರ್ವಜನಿಕರು ಸೇರಿದಾಗ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಚೂರಿಯೊಂದಿಗೆ KA 21 Z 234 ನಂಬರ್ ನ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಕಾರ್ತಿಕ್ ರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಮೃತರಾಗಿದ್ದರು.
ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ.
ಮೃತನ ಸಂಬಂಧಿ ಕೇಶವ ಸುವರ್ಣ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 504,341,302 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ತಂಡ ರಚಿಸಲಾಗಿದೆ ಎಂದು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ