ಗ್ರಾಮೀಣ ರೂಟ್‌ಗಳಲ್ಲಿ ಸರಕಾರಿ ಬಸ್‌ ಸಂಚರಿಸಲಿ


Team Udayavani, Aug 2, 2021, 3:00 AM IST

Untitled-1

ಕೋವಿಡ್‌ ನಿರ್ಬಂಧಗಳಿಂದಾಗಿ ಎಲ್ಲ ಕ್ಷೇತ್ರಗಳಂತೆ ಸಾರಿಗೆ ಉದ್ಯಮ ಕೂಡ ದೊಡ್ಡ ಹೊಡೆತವನ್ನು ಅನುಭವಿಸಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ. ಸರಕಾರಿ ಹಾಗೂ ಖಾಸಗಿ ಬಸ್‌ಗಳೆರಡೂ ಓಡಾಟವನ್ನು ಆರಂಭಿಸಿದ್ದರೂ ಕೇವಲ ಸೀಮಿತ ಸಂಖ್ಯೆಯಲ್ಲಿ ಬಸ್‌ಗಳು ಸಂಚರಿಸುತ್ತಿವೆ. ಗ್ರಾಮೀಣ ರೂಟ್‌ಗಳಲ್ಲಿ ಬಸ್‌ಗಳಿಲ್ಲದೆ ಜನರು ಸಂಚಾರಕ್ಕಾಗಿ ಅನಿವಾರ್ಯವಾಗಿ ಖಾಸಗಿ ವಾಹನ ಅವಲಂಬಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳ ಓಡಾಟ ಇನ್ನೂ ಪೂರ್ಣವಾಗಿ ಆರಂಭಗೊಂಡಿಲ್ಲ, ಹೀಗಾಗಿ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ತೆರಳುವವರು ಆಟೋ ರಿಕ್ಷಾ, ಜೀಪ್‌, ಮ್ಯಾಕ್ಸಿಕ್ಯಾಬ್‌ ಸಹಿತ ಇತರ ವಾಹನಗಳನ್ನು ಅವಲಂಬಿಸಿದ್ದಾರೆ. ಈ ವಾಹನಗಳು ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ತುಂಬಿಸಿಕೊಂಡು ಸಂಚರಿಸುತ್ತಿರುವ ದೃಶ್ಯಗಳು ಈಗ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿವೆ.

ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್‌ ಸಹಿತ ಮತ್ತಿತರ ಖಾಸಗಿ ಟೂರಿಸ್ಟ್‌ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ತುಂಬಿಸಿ ಅಪಘಾತಗಳು ಸಂಭವಿಸಿ ಜೀವಹಾನಿಯಾದ ಘಟನೆಗಳೂ ಹಿಂದೆ ಸಂಭವಿಸಿವೆ. ದುರಂತಗಳು ಸಂಭವಿಸಿದಾಗ ಪರ್ಯಾಯ ವ್ಯವಸ್ಥೆಗಳ ಬಗೆಗೆ ಚರ್ಚೆಗಳು ನಡೆಯುತ್ತವೆಯೇ ಹೊರತಾಗಿ ಬಳಿಕ ಇವೆಲ್ಲವೂ ಮೂಲೆಗೆ ಸರಿದು ಮಾಮೂಲಿನಂತೆ ಜನರು ಇದೇ ರೀತಿ ಟೂರಿಸ್ಟ್‌ ವಾಹನಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ.

ಹೀಗಾಗಿ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಬಸ್‌ಗಳೇ ಇಲ್ಲದ  ಗ್ರಾಮೀಣ ರೂಟ್‌ಗಳು ಹಾಗೂ ಅಗತ್ಯ ಸಮಯದಲ್ಲಿ ಬಸ್‌ಗಳಿಲ್ಲದ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಓಡಾಟದ ವ್ಯವಸ್ಥೆ ಮಾಡಬೇಕಿದೆ. ಸಾರಿಗೆ ಸೇವಾ ಕ್ಷೇತ್ರವಾಗಿದ್ದು ಎಲ್ಲ ಸಂದರ್ಭಗಳಲ್ಲಿಯೂ ಕೇವಲ ಲಾಭ-ನಷ್ಟದ ಲೆಕ್ಕಾಚಾರಕ್ಕೆ ಸೀಮಿತವಾಗದೆ ಗ್ರಾಮೀಣ ಜನರ ಕಷ್ಟಕ್ಕೆ ಸರಕಾರಿ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್‌ಟಿಸಿ ಸ್ಪಂದಿಸಬೇಕಿದೆ.

ಪ್ರಯಾಣಿಕರು ಹೆಚ್ಚಿರುವ ರೂಟ್‌ಗಳಲ್ಲಿ ಸರಕಾರಿ ಹಾಗೂ ಖಾಸಗಿ ಹೀಗೆ  ಎರಡೂ ಬಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುತ್ತವೆ. ಆದರೆ  ಪ್ರಯಾಣಿಕರು ವಿರಳವಾಗಿರುವ ಗ್ರಾಮೀಣ ರೂಟ್‌ಗಳು ಈ ಹಿಂದಿನಿಂದಲೂ ನಿರ್ಲಕ್ಷéಕ್ಕೆ ಒಳಗಾಗಿವೆ. ಈ ವಿಚಾರದಲ್ಲಿ ಖಾಸಗಿ ಬಸ್‌ಗಳ ಮಾಲಕರೂ ಒಂದಿಷ್ಟು ಜನಹಿತದತ್ತ ದೃಷ್ಟಿಹರಿಸಲೇಬೇಕು.

ನಗರ ಪ್ರದೇಶದಲ್ಲಿನ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು, ತಮ್ಮ ದೈನಂದಿನ ಕೆಲಸಕಾರ್ಯ, ವ್ಯವಹಾರ, ವೃತ್ತಿ ಮತ್ತಿತರ ಕಾರಣಗಳಿಂದಾಗಿ ಗ್ರಾಮೀಣ ಪ್ರದೇಶದ ಜನರು ನಗರಗಳನ್ನೇ ಅವಲಂಬಿಸಿದ್ದಾರೆ. ಸಹಜವಾಗಿ ಬೆಳಗ್ಗೆ ಮತ್ತು ಸಂಜೆಯ ವೇಳೆ ಗ್ರಾಮೀಣ ರೂಟ್‌ಗಳಲ್ಲಿ ಬಸ್‌ಗಳನ್ನು ಓಡಿಸಿದರೆ ಜನರಿಗೆ ಮತ್ತು ವಿದ್ಯಾರ್ಥಿಗಳಿಗೂ ಬಹಳಷ್ಟು ಅನುಕೂಲವಾಗಲಿದೆ. ಶಾಲಾ-ಕಾಲೇಜು ಆರಂಭದ ಬಳಿಕ ಎಲ್ಲ ಬಸ್‌ಗಳನ್ನು ಓಡಿಸುವುದಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಭರವಸೆ ನೀಡುತ್ತಿರುವರಾದರೂ ಅಲ್ಲಿಯ ತನಕ ನಿಯಮಿತ ಸಂಖ್ಯೆಯ ಬಸ್‌ಗಳನ್ನಾದರೂ ಗ್ರಾಮೀಣ ರೂಟ್‌ಗಳಲ್ಲಿ ಓಡಿಸಿ ಜನರಿಗೆ ನೆರವಾಗಬೇಕಿದೆ.

  

-ಸಂ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.