ಪುತ್ತೂರಿನಲ್ಲಿ ಎರಡು ಕೋವಿಡ್ ಪ್ರಕರಣಗಳು ಪತ್ತೆ
Team Udayavani, Jul 9, 2020, 5:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ 1 ಮತ್ತು ಗ್ರಾಮಾಂತರ ಪ್ರದೇಶದಲ್ಲಿ 1 ಪ್ರಕರಣ ಸೇರಿದಂತೆ ಗುರುವಾರದಂದು ಪುತ್ತೂರಿನಲ್ಲಿ 2 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ನಗರಸಭಾ ವ್ಯಾಪ್ತಿಯ ಬೊಳುವಾರು ಮಿಷನ್ ಗುಡ್ಡೆ ನಿವಾಸಿ 56 ವರ್ಷದ ಮಹಿಳೆ ಅನಾರೋಗ್ಯದ ಕಾರಣದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಕೋವಿಡ್ ದೃಢಪಟ್ಟಿದೆ. ಈಶ್ವರಮಂಗಲ ನಿವಾಸಿ 55 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜ್ವರದ ಹಿನ್ನೆಲೆಯಲ್ಲಿ ದಾಖಲಾಗಿದ್ದರು. ಇವರ ಗಂಟಲು ದ್ರವ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಕೋವಿಡ್ ದೃಢಪಟ್ಟ ಇಬ್ಬರ ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೂ ಕೋವಿಡ್ ವಾರ್ಡ್ ತೆರೆಯಲಾಗಿದ್ದು, ಇಬ್ಬರು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಯ ಅಡುಗೆ ತಯಾರಿಕ ಕೊಡಿಪ್ಪಾಡಿ ಗ್ರಾಮದ ಶಾಂತಿನಗರ ನಿವಾಸಿ ಕೋವಿಡ್ ನೆಗೆಟಿವ್ ವರದಿಯಾದ ಹಿನ್ನೆಲೆಯಲ್ಲಿ ಮಂಗಳೂರು ಕೋವಿಡ್ ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.