ಹತ್ತು ವರ್ಷಗಳ ಬೇಡಿಕೆ ಈ ಬಾರಿ ಈಡೇರಲಿ

ಜನಾಗ್ರಹಕ್ಕೆ ಇದು ಸಕಾಲ; ಜನಪ್ರತಿನಿಧಿಗಳಿಗೂ ಒಳ್ಳೆಯ ಅವಕಾಶ

Team Udayavani, Feb 20, 2021, 4:20 AM IST

ಹತ್ತು ವರ್ಷಗಳ ಬೇಡಿಕೆ ಈ ಬಾರಿ ಈಡೇರಲಿ

ಪುತ್ತೂರು ಪ್ರಮುಖ ವಾಣಿಜ್ಯ ಕೇಂದ್ರ. ಉಪವಿಭಾಗವಾಗಿ ಬೆಳೆದ ಊರು ಜಿಲ್ಲೆಯಾಗಿ ರೂಪುಗೊಳ್ಳಬೇಕೆಂಬುದು 10 ವರ್ಷಗಳ ಹಳೆಯ ಬೇಡಿಕೆ. ಪ್ರತಿ ಬಾರಿ ಯಾವುದೋ ಕಾರಣಕ್ಕೆ ಪ್ರಸ್ತಾವ ಬದಿಗೆ ಸರಿಯುತ್ತಿತ್ತು. ಬಾರಿ ಪುತ್ತೂರು ಜಿಲ್ಲೆ ಅಸ್ತಿತ್ವಕ್ಕೆ ಬರಬೇಕೆಂಬುದು ಜನಾಗ್ರಹ. ಜನರ ಆಗ್ರಹಕ್ಕೆ ಇಂದಿನಿಂದ ದನಿಯಾಗುತ್ತಿದೆ ಉದಯವಾಣಿ ಸುದಿನದ ಅಭಿಯಾನ “ಪುತ್ತೂರು ಜಿಲ್ಲೆಯಾಗಲಿ-ಇದು ಜನಾಗ್ರಹ’.

 

ಪುತ್ತೂರು: ವಿಜಯನಗರ ಹೊಸ ಜಿಲ್ಲೆಯಾಗಿ ಘೋಷಣೆ ಆಗಿರುವುದು ಹಾಗೂ ಹೊಸ ಬಜೆಟ್‌ ಮಂಡನೆಗೆ ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಬೆನ್ನಲ್ಲೇ, ಪುತ್ತೂರು ಜಿಲ್ಲೆಯಾಗಬೇಕೆಂಬ ಆಗ್ರಹ ಜೋರಾಗತೊಡಗಿದೆ.

ಸಾರ್ವಜನಿಕ ಚರ್ಚೆ ಆರಂಭವಾಗಿದ್ದು, ಹತ್ತು ವರ್ಷಗಳಿಂದ ಕೇಳಿಬರುತ್ತಿದ್ದ ಆಗ್ರಹ ಈಗ ಮತ್ತಷ್ಟು ಬಲಗೊಂಡಿದೆ.  ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ಹಾಗೂ ಮಂಗಳೂರು ಉಪ ವಿಭಾಗದ ಬಂಟ್ವಾಳ ತಾಲೂಕುಗಳನ್ನು ಹೊಸ ಜಿಲ್ಲೆಗೆ ಸೇರಿಸಬಹುದೆಂಬ ಲೆಕ್ಕಾಚಾರವಿದೆ. ಅರ್ಹತೆ, ಅಗತ್ಯತೆ ಆಧಾರದಲ್ಲೇ ಗ್ರಾಮಾಂತರ ಜಿಲ್ಲೆಯಾಗಬೇಕೆಂಬ ಬೇಡಿಕೆಯನ್ನು ಜನಪ್ರತಿನಿಧಿಗಳ ಮೂಲಕ ಸರಕಾರದ ಮುಂದೆ ಸಲ್ಲಿಸಲಾಗಿದೆ. ಬಹಿರಂಗ ಹೋರಾಟ ಮಾತ್ರ ಬಾಕಿ ಇದೆ. ಅಪೇಕ್ಷಿತ ಬೇಡಿಕೆಗೆ ಈ ಬಾರಿಯ ಬಜೆಟಿನಲ್ಲಿ ಮನ್ನಣೆ ಸಿಗಲಿದೆ ಎಂಬ ನಿರೀಕ್ಷೆ ನಾಗರಿಕರದ್ದು.

ಪುತ್ತೂರು ತಾಲೂಕು ಕೇಂದ್ರ :

ಬ್ರಿಟಿಷ್‌ ಕಾಲದ ಸೌತ್‌ ಕೆನರಾ ಜಿಲ್ಲೆಯಲ್ಲಿ ಉಪ್ಪಿನಂಗಡಿ ತಾಲೂಕು ಕೇಂದ್ರವಾಗಿತ್ತು. ನೆರೆ ಭೀತಿ ಕಾರಣದಿಂದ 1927ರಲ್ಲಿ ಉಪ್ಪಿನಂಗಡಿ ತಾಲೂಕು ಕೇಂದ್ರವನ್ನು ಪುತ್ತೂರಿಗೆ ವರ್ಗಾ ಯಿಸಲಾಗಿತ್ತು. ಅಲ್ಲಿಂದ ಪುತ್ತೂರು ತಾಲೂಕು ಕೇಂದ್ರವಾಗಿ ಇಂದಿಗೆ 93 ವರ್ಷಗಳು ತುಂಬಿವೆ. ಈಗ ಪುತ್ತೂರು ನಗರ ಹತ್ತೂರಿನ ಕೇಂದ್ರವಾಗಿದೆ. ಅನೇಕ ಗ್ರಾಮಗಳು ನಗರಗಳಾಗಿ ಬೆಳೆಯುವ ಹಂತದಲ್ಲಿವೆ. ಒಂದು ಜಿಲ್ಲೆಗೆ ಅಗತ್ಯವಿರುವ ಪೂರಕ ಬೆಳವಣಿಗೆಗಳು ಆಗಿವೆ. ಹಾಗಾಗಿ ಪುತ್ತೂರು ಉಪವಿಭಾಗದ ನಾಗರಿಕರು ಜಿಲ್ಲೆಯ ಬೇಡಿಕೆಯನ್ನು ಮಂಡಿಸತೊಡಗಿದ್ದಾರೆ.

ರಾಮನಗರಕ್ಕಿಂತ ಪುತ್ತೂರು ಹಿರಿದು :

ಈ ಹಿಂದೆ ರಚಿಸಲಾದ ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಿಂತ ಅಧಿಕ ವಿಸ್ತೀರ್ಣ, ಜನಸಂಖ್ಯೆಯನ್ನು ಪ್ರಸ್ತಾವಿತ ಪುತ್ತೂರು ಜಿಲ್ಲಾ ವ್ಯಾಪ್ತಿ ಒಳಗೊಂಡಿದೆ ಹೊಂದಿದೆ ಎನ್ನುವುದು ಜಿಲ್ಲಾ ಕೇಂದ್ರದ ಬೇಡಿಕೆಗೆ ಇರುವ ಮುಖ್ಯ ಸಂಗತಿ. ರಾಮನಗರ ಜಿಲ್ಲೆಯ ಜನಸಂಖ್ಯೆ 10.5 ಲಕ್ಷ ಇದೆ. ಚಿಕ್ಕಬಳ್ಳಾಪುರ ಜಿಲ್ಲೆ 10 ಲಕ್ಷ ಜನಸಂಖ್ಯೆ ಹೊಂದಿದೆ. 2011ರ ಜನಗಣತಿ ಪ್ರಕಾರ ಪುತ್ತೂರು ಜಿಲ್ಲಾ ವ್ಯಾಪ್ತಿಗೆ ಸೇರಬಹುದಾದ ಐದು ತಾಲೂಕುಗಳ ಒಟ್ಟು ಜನಸಂಖ್ಯೆ 10.15 ಲಕ್ಷ ಇದೆ. 3,979 ಚದರ ಕಿ. ಮೀ. ವಿಸ್ತೀರ್ಣ ಹೊಂದಿದೆ. ಈ ಅಂಕಿ-ಅಂಶವನ್ನು ಪರಿಗಣಿಸಿದರೆ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಿಂತ ಪ್ರಸ್ತಾವಿತ ಪುತ್ತೂರು ಜಿಲ್ಲೆ ದೊಡ್ಡದಿದೆ. ಪುತ್ತೂರು ತಾಲೂಕನ್ನು ಆವರಿಸಿರುವ ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳವನ್ನು ಸೇರಿಸಿ ಪುತ್ತೂರನ್ನು ಜಿಲ್ಲಾ ಕೇಂದ್ರವನ್ನಾಗಿ ರೂಪಿಸಬಹುದು.

ದ.ಕ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 56 ಕಿ.ಮೀ. ದೂರದಲ್ಲಿರುವ ಪುತ್ತೂರು ಸಾಹಿತ್ಯಿಕ, ಸಾಂಸ್ಕೃತಿಕ, ರಾಜಕೀಯ, ಕೃಷಿ, ಶಿಕ್ಷಣ, ಕ್ರೀಡೆ ಕ್ಷೇತ್ರಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ. ಆಸ್ಪತ್ರೆಗಳು, ಶೈಕ್ಷಣಿಕ ಕೇಂದ್ರಗಳು, ಬ್ಯಾಂಕ್‌, ಉಪವಿಭಾಗ ಕಚೇರಿ, ನ್ಯಾಯಾಲಯ ಸೇರಿದಂತೆ ಹಲವು ಸರಕಾರಿ, ಖಾಸಗಿ ಸಂಸ್ಥೆಗಳು ಹೊಂದಿರುವ ಪುತ್ತೂರು ಮಂಗಳೂರಿನ ಅನಂತರದ ಅತಿ ದೊಡ್ಡ ವಾಣಿಜ್ಯ ಪಟ್ಟಣವಾಗಿದೆ.

ಕೇಂದ್ರ ಸ್ಥಾನ :

ಕೇರಳದ ಗಡಿ, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಅಂಟಿಕೊಂಡಿರುವ ಪುತ್ತೂರು ತಾಲೂಕು ಮಾಣಿ- ಮೈಸೂರು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ. ತನ್ನ ಗಡಿ ವ್ಯಾಪ್ತಿಯ ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನವಾಗಲು ಅರ್ಹತೆ ಹೊಂದಿದೆ. ಪ್ರಗತಿ ಹಾಗೂ ಸಂಪರ್ಕದ ದೃಷ್ಟಿಯಲ್ಲಿ ಮಂಗಳೂರು ಅನಂತರದ ಸ್ಥಾನದಲ್ಲಿರುವ ಪುತ್ತೂರು ಗ್ರಾಮಾಂತರ ಜಿಲ್ಲೆಯಾಗಲು ಎಲ್ಲ ಅರ್ಹತೆ ಹೊಂದಿದೆ.

ಜಿಲ್ಲೆಯ ಎರಡನೆ ಮಹಿಳಾ ಠಾಣೆ, ಪುತ್ತೂರು ಸುಳ್ಯ, ಕಡಬ, ಬೆಳ್ತಂಗಡಿಯನ್ನು ಒಳಗೊಂಡ ಸಹಾಯಕ ಆಯುಕ್ತರ ಉಪವಿಭಾಗ ಕಚೇರಿ, 3 ತಾಲೂಕು ವ್ಯಾಪ್ತಿಗೆ ಸೇರಿರುವ ಆರ್‌ಟಿಓ ಕಚೇರಿ, ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರ್‌ ತನಕ ವ್ಯಾಸಾಂಗದ ಶಿಕ್ಷಣ ಸಂಸ್ಥೆಗಳು ಇಲ್ಲಿವೆ. ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ವಿವಿಧ ವ್ಯವಹಾರಗಳಿಗಾಗಿ ನಗರಕ್ಕೆ ಪ್ರವೇಶಿಸುತ್ತಾರೆ. ಕಾಸರಗೋಡು, ಕೊಡಗು ಜಿಲ್ಲೆಯಿಂದಲೂ ವಾಣಿಜ್ಯ, ಶಿಕ್ಷಣ, ವೈದ್ಯಕೀಯ ನೆಲೆಯಲ್ಲಿ ಪುತ್ತೂರನ್ನು ಆಶ್ರಯಿಸುವವರ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದೆ.

ಐದು ತಾಲೂಕಿನ ವ್ಯಾಪ್ತಿ :

ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳನ್ನು ಒಳಗೊಂಡ ಪುತ್ತೂರು ಗ್ರಾಮಾಂತರ ಜಿಲ್ಲೆ ರಚಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕೆ ಪೂರಕವಾಗಿ ಆಗಬೇಕಾದ ಅಗತ್ಯತೆಗಳನ್ನು ಈಡೇರಿಸಲು ಆದ್ಯತೆ ನೀಡಲಾಗಿದೆ.ಸಂಜೀವ ಮಠಂದೂರು, ಶಾಸಕರು, ಪುತ್ತೂರು

 

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.