ಪುತ್ತೂರು:ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಬೇಕಿದೆ !

ನೂರಾರು ಕ್ರೀಡಾಪಟುಗಳಿದ್ದರೂ ತರಬೇತಿಗೆ ಸುಸಜ್ಜಿತ ಕ್ರೀಡಾಂಗಣದ ಕೊರತೆ ಇದೆ.

Team Udayavani, Apr 3, 2023, 6:05 PM IST

ಪುತ್ತೂರು:ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಬೇಕಿದೆ !

ಪುತ್ತೂರು: ಜಿಲ್ಲಾ ಕೇಂದ್ರದ ಕನಸಿನಲ್ಲಿರುವ ಪುತ್ತೂರಿನಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕಾಗಿ ಜಾಗ ಹುಡುಕಾಟದ ಅಲೆದಾಟಕ್ಕೆ ಇನ್ನೂ ಕೊನೆ ಬಿದ್ದಿಲ್ಲ..! ಕೊಂಬೆಟ್ಟು, ಕೆಮ್ಮಿಂಜೆ ಎಂದು ನಗರದ ಸರಹದ್ದಿನ ಹತ್ತಾರು ಕಡೆ ಸುತ್ತಾಡಿ ಕೊನೆಗೆ ತೆಂಕಿಲದಲ್ಲಿ ಜಾಗ ಇದೆ ಎಂದು ಹೇಳಲಾಗಿತ್ತಾದರೂ ಅದಿನ್ನೂ ಅಂತಿಮವಾಗಿಲ್ಲ.

ಹೀಗಾಗಿ ಕ್ರೀಡೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪುತ್ತೂರನ್ನು ಬೆಳಗಿದ ನೂರಾರು ಕ್ರೀಡಾಪಟುಗಳಿದ್ದರೂ ತರಬೇತಿಗೆ ಸುಸಜ್ಜಿತ ಕ್ರೀಡಾಂಗಣದ ಕೊರತೆ ಇದೆ.

ಕೊಂಬೆಟ್ಟು ಕ್ರೀಡಾಂಗಣ
1991-92ರ ಅನಂತರ ಕೊಂಬೆಟ್ಟು ಡಿಸ್ಟ್ರಿಕ್‌ ಶಾಲಾ ಆವರಣದಲ್ಲಿದ್ದ ಕ್ರೀಡಾಂಗಣ ತಾಲೂಕು ಕ್ರೀಡಾಂಗಣವಾಗಿ ಯುವಜನ ಸೇವಾ ಇಲಾಖೆಯ ವ್ಯಾಪ್ತಿಗೆ ಸೇರ್ಪಡೆಗೊಂಡಿತ್ತು. 400 ಮೀಟರ್‌ ಮಣ್ಣಿನ ಟ್ರಾಫಿಕ್‌ ಇರುವ ಕ್ರೀಡಾಂಗಣ ದಲ್ಲಿ ತಾಲೂಕು, ಜಿಲ್ಲಾ, ರಾಜ್ಯಮಟ್ಟದ ಕ್ರೀಡಾ ಕೂಟಗಳೂ ನಡೆಯುತ್ತಿವೆ. ಹಿಂದೊಮ್ಮೆ ಸಿಂಥೆಟಿಕ್‌ ಟ್ರಾಫಿಕ್‌ ನಿರ್ಮಾಣ ಸೇರಿದಂತೆ ಕ್ರೀಡಾಂಗಣದ ಅಭಿವೃದ್ಧಿಗಾಗಿ 14.5 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಲ್ಲಿ ಮೊದಲ ಹಂತದಲ್ಲಿ ಮೂರು ಕೋಟಿ ರೂ. ಮಂಜೂರಾತಿಗೆ ಸರಕಾರ ತಾತ್ವಿಕ ಒಪ್ಪಿಗೆ ನೀಡಿತ್ತು. ಮೊದಲ ಹಂತದ 3 ಕೋಟಿ ರೂ. ಅನುದಾನದ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಕ್ರಿಯಾಯೋಜನೆ ಆಡಳಿತಾತ್ಮಕ ಮಂಜೂರಾತಿಗೆ ಲೋಕೋಪಯೋಗಿ ಇಲಾಖೆ ಮೂಲಕ ಸರಕಾರಕ್ಕೆ ಸಲ್ಲಿಕೆಯಾಗಿತ್ತು.

ಹೊಸ ಕ್ರೀಡಾಂಗಣ
2018ರಲ್ಲಿ ಕೊಂಬೆಟ್ಟು ಕ್ರೀಡಾಂಗಣವನ್ನು ತಾಲೂಕು ಕ್ರೀಡಾಂಗಣವನ್ನಾಗಿ ಪರಿವರ್ತಿಸುವ ಬದಲು ತಾಲೂಕು ಕ್ರೀಡಾಂಗಣಕ್ಕೆ ಪ್ರತ್ಯೇಕ ಜಾಗ ಗುರುತಿಸುವ ಯೋಜನೆ ರೂಪಿಸಲಾಯಿತು. ಈ ಹಿಂದಿನಂತೆ ಕೊಂಬೆಟ್ಟು ಕ್ರೀಡಾಂಗಣವನ್ನು ಶಾಲಾ ವಿದ್ಯಾರ್ಥಿಗಳ ಬಳಕೆಗೆ ನೀಡುವ ಉದ್ದೇಶ ಹೊಂದಲಾಗಿತ್ತು. ಅದರಂತೆ ಜಾಗ ಗುರುತಿಸುವ ಪ್ರಯತ್ನ ನಡೆದರೂ ವಿವಿಧ ಕಾರಣಗಳಿಂದ ಅಂತಿಮಗೊಂಡಿಲ್ಲ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಪ್ರತ್ಯೇಕವಾಗಿ ತಾಲೂಕು ಕ್ರೀಡಾಂಗಣವನ್ನು ನಿರ್ಮಿಸಲು 5 ಕೋಟಿ ರೂ. ವಿಶೇಷ ಅನುದಾನಕ್ಕೆ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅನುದಾನ ಲಭ್ಯ ಇದ್ದರೂ ಈ ಅವಧಿಯೊಳಗೆ ಜಾಗ ಗುರುತಿಸುವಿಕೆ ಅಂತಿಮಗೊಂಡು ಕಾಮಗಾರಿ ಆರಂಭಗೊಳ್ಳುವುದು ಬಹುತೇಕ ಅನುಮಾನ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.