Puttur ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು
Team Udayavani, Nov 27, 2023, 12:03 AM IST
ಪುತ್ತೂರು: ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರತಿಭಾವಂತ ಕ್ರೀಡಾಪಟು, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನ. 25ರಂದು ಸಂಭವಿಸಿದೆ.
ಕುರಿಯ ಗ್ರಾಮದ ಸಂಪ್ಯ ಮಂಜಪ್ಪ ಗೌಡರ ಪುತ್ರಿ ನಿಶಾ ಬಿ.ಎಂ. (17) ಆತ್ಮಹತ್ಯೆ ಮಾಡಿಕೊಂಡವರು. ಅವರು ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಅಲ್ಲಿ ಯಾವುದೇ ಬಹುಮಾನ ದೊರೆಯದ ಕಾರಣ ಬೇಸರದಲ್ಲಿದ್ದಳು. ನ. 14ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ತಾನು ನ. 13ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಳು.
ಪುತ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ