ಪುತ್ತೂರು; ಪತ್ನಿಯ ಮನೆಗೆ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ
Team Udayavani, Jun 24, 2020, 1:01 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ಬನ್ನೂರಿನಲ್ಲಿರುವ ಪತ್ನಿಯ ಮನೆಗೆ ಬಂದ ಕಲ್ಲಂದಡ್ಕ ನಿವಾಸಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಇದೀಗ ನಗರಸಭಾ ವ್ಯಾಪ್ತಿಯಲ್ಲೇ 2ನೇ ಪ್ರಕರಣ ದಾಖಲಾಗಿರುವುದು ಆತಂಕ ಹೆಚ್ಚಾಗಿದೆ.
ಕಲ್ಲಂದಡ್ಕದ ಸುಮರು 42 ವರ್ಷ ಪ್ರಾಯದ ಪೈಂಟರ್ ಒಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಅವರು ಬನ್ನೂರಿನಲ್ಲಿರುವ ಚೆಲುವಮ್ಮನ ಕಟ್ಟೆ ಬಳಿಯ ಪತ್ನಿಯ ತವರು ಮನೆಗೆ ಬಂದಿದ್ದರು. ಪತ್ನಿ ಮನೆಗೆ ಬಂದಿದ್ದ ಗಂಡನಿಗೆ ಜ್ವರ ಶೀತ ಬಾಧೆಯೆಂದು 2 ದಿನಗಳ ಹಿಂದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದ್ದರು. ಅಲ್ಲಿ ಅವರ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವ ವರದಿ ಬಂದಿದ್ದು, ವ್ಯಕ್ತಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಕ್ತಿಯ ಪತ್ನಿ ಮತ್ತು ಆಕೆಯ 10 ದಿನದ ಮಗು ಮನೆಯಲ್ಲೇ ಹೋಮ್ ಕೊರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ