ರಾಮಕುಂಜ: ರುದ್ರಭೂಮಿ ಕಾಮಗಾರಿಗೆ ಮತ್ತೆ ವೇಗ

ಅನುದಾನ ಕೊರತೆಯಿಂದ ಸ್ಥಗಿತವಾಗಿತ್ತು; ಪಕ್ಕದ ಗ್ರಾಮದವರಿಗೂ ಅವಕಾಶ

Team Udayavani, Mar 5, 2020, 4:15 AM IST

rudrabhoomi

ಕಡಬ: ರಾಮಕುಂಜ ಗ್ರಾ.ಪಂ. ವ್ಯಾಪ್ತಿಯ ಕಾಜರೊಕ್ಕು ಎಂಬಲ್ಲಿ ಹಿಂದೂ ರುದ್ರಭೂಮಿಯ ನಿರ್ಮಾಣ ಕಾಮಗಾರಿಗಳು ಭರದಿಂದ ನಡೆಯುತ್ತಿವೆ. ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಮತ್ತೆ ಆರಂಭಗೊಂಡು ಪ್ರಗತಿಯಲ್ಲಿದೆ. ಗ್ರಾ.ಪಂ. ಆಡಳಿತವು ಮಾರ್ಚ್‌ ತಿಂಗಳ ಕೊನೆಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಶ್ಮಶಾನವನ್ನು ಲೋಕಾರ್ಪಣೆಗೊಳಿಸಬೇಕೆಂಬ ಗುರಿ ಇರಿಸಿಕೊಂಡಿದೆ.

ರಾಮಕುಂಜ ಪರಿಸರದಲ್ಲಿ ಸಮರ್ಪಕ ವ್ಯವಸ್ಥೆಯ ಸಾರ್ವಜನಿಕ ಶ್ಮಶಾನ ಇಲ್ಲದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು. ಸಾಕಷ್ಟು ಜಮೀನು ಇದ್ದವರು ತಮ್ಮ ಜಮೀನಿನಲ್ಲಿಯೇ ಶವ ಸಂಸ್ಕಾರ ನಡೆಸಿದರೆ ಉಳಿದವರು ಪರದಾಡುವ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾ.ಪಂ. ಆಡಳಿತ ಮಂಡಳಿ ಕಾಜರೊಕ್ಕು ಎಂಬಲ್ಲಿ ಅರಣ್ಯ ಇಲಾಖೆಯ ಜಾಗದ ಮಧ್ಯದಲ್ಲಿ ಸುಮಾರು 2 ಎಕ್ರೆ ಜಾಗ ಕಾದಿರಿಸಿ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶ್ಮಶಾನ ನಿರ್ಮಾಣ ಮಾಡುತ್ತಿದೆ. ಎಂಟು ತಿಂಗಳ ಹಿಂದೆ ಶ್ಮಶಾನಕ್ಕೆ ಸಂಬಂಧಿಸಿದ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಸುಮಾರು 3.20 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ಹಾಗೂ ಆವರಣ ಗೋಡೆ ನಿರ್ಮಾಣ ಮಾಡುವಷ್ಟರಲ್ಲಿ ಅನುದಾನ ಕೊರತೆ ಉಂಟಾಯಿತು. ಕೆಲಕಾಲ ಕೆಲಸ ಸ್ಥಗಿತವಾಗಿತ್ತು. ಆದರೂ ಅನಿವಾರ್ಯ ಪರಿಸ್ಥಿತಿಯಿಂದಾಗಿ ಶ್ಮಶಾನದ ಆವರಣದ ಒಳಗಡೆ 8 ತಿಂಗಳ ಅವಧಿಯಲ್ಲಿ 7-8 ಶವಗಳ ಸಂಸ್ಕಾರ ನಡೆಸಲು ಗ್ರಾ.ಪಂ. ಅವಕಾಶ ನೀಡಿತ್ತು.

ಧರ್ಮಸ್ಥಳದಿಂದಲೂ ನೆರವು
ಶವ ಸಂಸ್ಕಾರ ನಡೆಸುವ ಲೋಹದ ಪೆಟ್ಟಿಗೆಯನ್ನು 1.20 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಲಾಗುತ್ತಿದೆ. ಗ್ರಾ.ಪಂ. ಆಡಳಿತ ಮಂಡಳಿ ನಿರ್ಣಯ ಅಂಗೀಕರಿಸಿ, ಕ್ಷೇತ್ರಕ್ಕೆ ಬೇಡಿಕೆ ಸಲ್ಲಿಸಿದ್ದು, ಅನುಮೋದನೆ ದೊರೆತಿದೆ. ಸುಮಾರು 2.40 ಲಕ್ಷ ರೂ. ವೆಚ್ಚದಲ್ಲಿ ಕಟ್ಟಿಗೆ ಇಡಲು ಉಗ್ರಾಣ ಕೊಠಡಿ, ನೀರಿನ ಟ್ಯಾಂಕ್‌, ಸ್ನಾನಗೃಹ, ನೀರಿನ ಪೈಪ್‌ ಅಳವಡಿಕೆ ಮುಂತಾದ ಮೂಲ ಸೌಕರ್ಯಗಳೊಂದಿಗೆ ಶ್ಮಶಾನ ನಿರ್ಮಾಣವಾಗುತ್ತಿದೆ. ಶ್ಮಶಾನಕ್ಕೆ ಸಂಪರ್ಕ ಕಲ್ಪಿಸುವ 120 ಮೀ. ಉದ್ದದ ರಸ್ತೆಗೆ ಸುಮಾರು 5.70 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಹಾಕಲಾಗಿದೆ. ವಿದ್ಯುತ್‌ ಸಂಪರ್ಕಕ್ಕೆ ಕಾಲಾವಕಾಶ ಬೇಕಾಗಿರುವುದರಿಂದ ತುರ್ತಾಗಿ ಸೋಲಾರ್‌ ದೀಪ ಅಳವಡಿಸಲಾಗಿದೆ. ರಸ್ತೆ ಸಹಿತ ಶ್ಮಶಾನದ ಒಟ್ಟು ವೆಚ್ಚ 12.50 ಲಕ್ಷ ರೂ. ಆಗಲಿದೆ. ಕಟ್ಟಿಗೆ ತಯಾರಿ, ಶ್ಮಶಾನದ ನಿರ್ವಹಣೆಯನ್ನು ಗ್ರಾ.ಪಂ. ಮಾಡಲಿದ್ದು, ಶವ ಸಂಸ್ಕಾರಕ್ಕೆ ಸಣ್ಣ ಮೊತ್ತದ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ.

ಮಾಸಾಂತ್ಯ ಉದ್ಘಾಟನೆ
ನಮ್ಮಲ್ಲಿ 4 ಕಾಲನಿಗಳಿದ್ದು, 300ಕ್ಕೂ ಹೆಚ್ಚು ಮನೆಗಳಿವೆ. ಇವರೆಲ್ಲರಿಗೂ ಶವ ಸಂಸ್ಕಾರಕ್ಕಾಗಿ ಜಾಗದ ಸಮಸ್ಯೆ ಇದೆ. ಹತ್ತಿರದ ಗ್ರಾಮಗಳ ಜನರು ಕೂಡ ಅಗತ್ಯ ಬಿದ್ದರೆ ಈ ಶ್ಮಶಾನವನ್ನು ಬಳಸಲು ಅವಕಾಶ ನೀಡಲಿದ್ದೇವೆ. ಶವ ಸಂಸ್ಕಾರ ಪೆಟ್ಟಿಗೆಗೆ ಧರ್ಮಸ್ಥಳದ ಸಹಕಾರ ಸಿಕ್ಕಿದೆ. ತಿಂಗಳಾಂತ್ಯದಲ್ಲಿ ಶ್ಮಶಾನದ ಉದ್ಘಾಟನೆ ಗುರಿ ಇರಿಸಲಾಗಿದೆ.
– ಪ್ರಶಾಂತ್‌ ಆರ್‌.ಕೆ., ಅಧ್ಯಕ್ಷರು, ರಾಮಕುಂಜ ಗ್ರಾ.ಪಂ.

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.