ಅಂಗಾರಗೆ ತಪ್ಪಿದ ಸಚಿವ ಸ್ಥಾನ: ಸುಳ್ಯ ಕ್ಷೇತ್ರದ ಬಿಜೆಪಿ ಮುಖಂಡರ ರಾಜೀನಾಮೆ ಸಾಧ್ಯತೆ
Team Udayavani, Aug 20, 2019, 12:10 PM IST
ಸುಳ್ಯ: ಶಾಸಕ ಎಸ್.ಅಂಗಾರರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ಕೈತಪ್ಪಿದ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಗೊಂಡಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.
ಮಂತ್ರಿಸ್ಥಾನ ನಿರಾಕರಣೆಯ ಬೆಳವಣಿಗೆಯ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ತುರ್ತು ಸಭೆ ಸೇರಿದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದು, ತಮ್ಮ ತೀರ್ಮಾನವನ್ನು ಬಿಜೆಪಿ ಜಿಲ್ಲಾಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ತಿಳಿಸಲು ಕಾಯುತ್ತಿದ್ದಾರೆ.
ಸಂಜೀವ ಮಠಂದೂರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು, ಅವರು ಬಂದ ಬಳಿಕ ಸುಳ್ಯದ ಮುಖಂಡರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದು, ತಮ್ಮ ಕಚೇರಿಯಲ್ಲೇ ಇದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ
ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್ ನಕಾರ