ಮರೀಚಿಕೆಯಾದ ಸವಣೂರು ಹೋಬಳಿ ಕೇಂದ್ರ

ಮನವಿಗೆ ಸಿಕ್ಕಿಲ್ಲ ಸೂಕ್ತ ಸ್ಪಂದನೆ‌

Team Udayavani, Jan 12, 2021, 3:10 AM IST

ಮರೀಚಿಕೆಯಾದ ಸವಣೂರು ಹೋಬಳಿ ಕೇಂದ್ರ

ಸವಣೂರು: ವೇಗವಾಗಿ ಬೆಳೆ ಯುತ್ತಿರುವ  ಸವಣೂರನ್ನು ಕೇಂದ್ರ ವಾಗಿಟ್ಟು ಕೊಂಡು ಹೋಬಳಿ ಕೇಂದ್ರ ಮಾಡಬೇಕೆಂಬ ಬೇಡಿಕೆ ಬೇಡಿಕೆಯಾಗಿದೆಯೇ ಹೊರತು ಕಾರ್ಯರೂಪಕ್ಕೆ ಬರುವ ಯಾವುದೇ ಲಕ್ಷಣ ಸದ್ಯಕ್ಕೆ ಗೋಚರಿಸುತ್ತಿಲ್ಲ.

ಈಗ ಕಡಬ ತಾಲೂಕಿಗೆ ಸೇರಿರುವ ಸವಣೂರನ್ನು ಹೋಬಳಿ ಕೇಂದ್ರವನ್ನಾಗಿ ಮಾಡಬೇಕೆಂಬ ಕೂಗು ಕಡಬ ತಾಲೂಕು ಆಗುವುದಕ್ಕೂ ಮೊದಲೇ ಈ ವಲಯದಿಂದ ಕೇಳಿ ಬಂದಿತ್ತು. ಸವಣೂರು ಎಂದರೆ ಈಗ ತಾಲೂಕು ಕಡಬ. ವಿಧಾನಸಭೆ ಸುಳ್ಯ, ಕಂದಾಯ ಹೋಬಳಿ ಕಡಬ, ಪೊಲೀಸ್‌ ಠಾಣೆ ಬೆಳ್ಳಾರೆ ಹೀಗೆ ಅದರದ್ದೇ ಆದ ವಿಶೇಷತೆ ಇದೆ; ಸಮಸ್ಯೆಗಳೂ ಇವೆ.

ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳು, ಕಂದಾಯ ಕಚೇರಿ, ಗ್ರಾ.ಪಂ., ವಸತಿ ಸಮುಚ್ಚಯ ,ಪೆಟ್ರೋಲ್‌ ಪಂಪ್‌, ವಾಣಿಜ್ಯ ಸಂಕೀರ್ಣ, ರಾಷ್ಟ್ರೀಕೃತ ಬ್ಯಾಂಕ್‌, ಸಹಕಾರಿ ಸಂಘಗಳು, ಸಭಾಭವನ, ವಿದ್ಯುತ್‌ ಸಬ್‌ಸ್ಟೇಶನ್‌ ಮೊದಲಾದವುಗಳು ಸವಣೂರಿನ ಬೆಳವಣಿಗೆಗೆ ಪೂರಕವಾಗಿದೆ.

ಕಡಬಕ್ಕೆ ಸೇರ್ಪಡೆಗೇ ಆಕ್ಷೇಪ :

ಸವಣೂರು, ಬೆಳಂದೂರು, ಕಾಣಿ ಯೂರಿನಿಂದ ಪುತ್ತೂರು ಹತ್ತಿರ ಇರುವು ದರಿಂದ ಈ ಗ್ರಾ.ಪಂ. ಅನ್ನು ಕಡಬ ತಾಲೂಕಿಗೆ ಸೇರ್ಪಡೆ ಮಾಡಬಾರದೆಂಬ ಬಲವಾದ ಕೂಗು ಇತ್ತು. ಆದರೆ ಸರಕಾರ ಈ ಗ್ರಾಮಗಳನ್ನೂ ಕಡಬ ತಾಲೂಕಿಗೆ ಸೇರಿಸಿ ರಾಜಪತ್ರ ಹೊರಡಿಸಿತ್ತು. ಅದಕ್ಕಾಗಿ ನ್ಯಾಯಾಲಯ, ಸಚಿವರು ಸೇರಿದಂತೆ ಇತರ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ಸಚಿವರಿಗೆ ಮನವಿ :

ಸವಣೂರನ್ನು ಹೋಬಳಿ ಕೇಂದ್ರ ಮಾಡಬೇಕೆಂಬ ನಿಟ್ಟಿನಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌ ಅವರಿಗೆ ಈ ಭಾಗದ ಜನರು ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಎಸ್‌.ಅಂಗಾರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಮನವಿಗೆ ಪೂರಕ ಉತ್ತರ ಬಾರದ ಕಾರಣ ಜನತೆಯ ಬೇಡಿಕೆ ಸದ್ಯಕ್ಕೆ ಗಗನ ಕುಸುಮವಾಗಿಯೇ ಉಳಿಯುವಂತಾಗಿದೆ.

ಈಗ ಕನಿಷ್ಠ ಸವಣೂರು ಹೋಬಳಿ ಕೇಂದ್ರವಾದರೆ ಬೆಳಂದೂರು, ಕುದ್ಮಾರು, ಕಾçಮಣ, ಪಾಲ್ತಾಡಿ, ಸವಣೂರು, ಪುಣcಪ್ಪಾಡಿ, ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಹಾಗೂ ಸವಣೂರಿನ ಇನ್ನೊಂದು ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.

ನಿವೇಶನ ನೀಡಲು ನಿರ್ಣಯ :

ಪ್ರಸ್ತುತ ಈ ಭಾಗದ ಗ್ರಾಮದ ಜನರಿಗೆ ಕಂದಾಯ ಹೋಬಳಿ ಹಾಗೂ ತಾಲೂಕು ಕೇಂದ್ರ ಕಡಬ. ಇಲ್ಲಿಗೆ ಸಂಪರ್ಕ ಬಹಳ ತ್ರಾಸದಾಯಕ.  ಒಂದೇ ಕೆಲಸಕ್ಕೆ     ಹಲವು ಬಾರಿ ತೆರಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸವಣೂರಿನಲ್ಲಿ ಕಂದಾಯ ಹೋಬಳಿ ಕೇಂದ್ರ (ನಾಡ ಕಚೇರಿ) ತೆರೆಯುವುದು ಆವಶ್ಯಕ. ಸಂಬಂಧಿಸಿದವರು ಈ ಕುರಿತು ಗಮನಹರಿಸುವುದು ಅಗತ್ಯವಾಗಿದೆ ಎಂಬುದು ಜನರ ಆಗ್ರಹ. ಹೋಬಳಿ ಕೇಂದ್ರ ರಚನೆಗೆ ಅವಶ್ಯವಿರುವ ನಿವೇಶನವನ್ನು ನೀಡಲು ಸವಣೂರು ಗ್ರಾ.ಪಂ.ನ ಆಡಳಿತ ಮಂಡಳಿಯಲ್ಲಿ ಈ ಹಿಂದೆಯೇ ನಿರ್ಣಯಿಸಲಾಗಿತ್ತು.

ಕಡಬ ತಾಲೂಕಿನ ಸವಣೂರಿನಲ್ಲಿ ಹೋಬಳಿ ಕೇಂದ್ರ ಆಗಬೇಕು ಎಂಬ ಬೇಡಿಕೆ ಇರುವುದು ನಿಜ. ಸದ್ಯ ಹೊಸ ಹೋಬಳಿ ಕೇಂದ್ರಗಳ ರಚನೆ ಸರಕಾರದ ಮುಂದೆ ಇಲ್ಲ.ಎಸ್‌. ಅಂಗಾರ,  ಶಾಸಕರು, ಸುಳ್ಯ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.