ಸೋಮನಾಥ ನಾಯಕ್‌ ಕೋರ್ಟ್‌ಗೆ ಶರಣು; 3 ತಿಂಗಳ ಸೆರೆವಾಸ

ಧರ್ಮಸ್ಥಳ, ಡಾ| ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಪ್ರಕರಣ

Team Udayavani, Oct 31, 2022, 11:38 PM IST

ಸೋಮನಾಥ ನಾಯಕ್‌ ಕೋರ್ಟ್‌ಗೆ ಶರಣು; 3 ತಿಂಗಳ ಸೆರೆವಾಸ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ, ಸಂಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಬರವಣಿಗೆ ಮತ್ತು ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ್‌ ನಾಯಕ್‌ (71) ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯವು ಅವರಿಗೆ 3 ತಿಂಗಳ ಸಜೆ ಹಾಗೂ 4.5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ಮಂಗಳೂರು ಕಾರಾಗೃಹಕ್ಕೆ ಕಳುಹಿಸಿತು.

ಸೋಮನಾಥ ಮಧ್ಯಾಹ್ನ ವಕೀಲರೊಂದಿಗೆ ಬೆಳ್ತಂಗಡಿಯ ನ್ಯಾಯಾಧೀಶ ವಿಜಯೇಂದ್ರ ಅವರ ಮುಂದೆ ಹಾಜರಾದರು. ಶರಣಾಗತಿ ವೇಳೆ 70ಕ್ಕೂ ಅಧಿಕ ಬೆಂಬಲಿಗರು ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ, ಚಿಂತಕರಾದ ಲಕ್ಷ್ಮೀಶ ತೋಳ್ಪಾಡಿ, ರಂಜನ್‌ ರಾವ್‌ ಯರ್ಡೂರು, ಡಿಎಸ್‌ಎಸ್‌ ಮುಖಂಡರು, ಕೆಲವು ಸಂಘಟನೆಗಳ ಕಾರ್ಯಕರ್ತರು ಜತೆಯಲ್ಲಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಅಥವಾ ಸಂಸ್ಥೆಯ ಕುರಿತು ಹಾಗೂ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಗೌರವಕ್ಕೆ ಚ್ಯುತಿ ತರುವಂತ ಯಾವುದೇ ರೀತಿಯಲ್ಲಿ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಬೆಳ್ತಂಗಡಿ ಸಿವಿಲ್‌ ನ್ಯಾಯಾಲಯವು ಸೋಮನಾಥ ನಾಯಕ್‌ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ನೀಡಿತ್ತು. ಆದರೂ ನಾಯಕ್‌ ಸುಳ್ಳು ಆರೋಪಗಳನ್ನು ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮುಖೇನ ಮಾಡುತ್ತಲೇ ಇದ್ದರು. ಈ ವಿಚಾರವನ್ನು ಕ್ಷೇತ್ರದ ಪರವಾಗಿ ನ್ಯಾಯಾಲಯದ ಮುಂದಿರಿಸಿದಾಗ ಸುದೀರ್ಘ‌ ವಿಚಾರಣೆ ನಡೆದು ಸೋಮನಾಥ ನಾಯಕ್‌ ದೋಷಿ ಎಂದು ಪರಿಗಣಿಸಿದ ನ್ಯಾಯಾಲಯ ಅವರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ರೂ. ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿತ್ತು.

ಈ ಆದೇಶದ ವಿರುದ್ಧ ನಾಯಕ್‌ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸಿದ್ದರು. ಅಪೀಲಿನಲ್ಲಿ ನಿಜಾಂಶವಿಲ್ಲವೆಂದು ತೀರ್ಪಿತ್ತು ತನಿಖಾ ನ್ಯಾಯಾಲಯ ನೀಡಿದ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ಸೋಮನಾಥ ಪಾವತಿಸಬೇಕಿರುವ 4.5 ಲಕ್ಷ ರೂ.ಗಳನ್ನು 90 ದಿನದ ಒಳಗಾಗಿ ಪಾವತಿಸುವುದಾಗಿ ಅವರ ಪರ ವಕೀಲರು ಮಾಡಿದ ಮನವಿಗೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ಬಳಿಕ ಕೋರ್ಟ್‌ನ ಅಮೀನರ ಮೂಲಕ ಮಂಗಳೂರು ಕಾರಾಗೃಹಕ್ಕೆ ತೆರಳಿದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.