
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
Team Udayavani, Feb 7, 2023, 9:12 AM IST

ಬೆಳ್ತಂಗಡಿ: ತಾಲೂಕಿನ ಉಜಿರೆಯ ಆಸುಪಾಸುಗಳಲ್ಲಿ ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ಫೆ.6 ರಂದು ರಾತ್ರಿ ಇಪ್ಪತ್ತಕ್ಕೂ ಅಧಿಕ ಮಂದಿ ಪೊಲೀಸರಿಂದ ದಾಳಿ ನಡೆಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಎಲ್ಲಾ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.
ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ್, ಇತರೆ ದಾಖಲೆಗಳನ್ನು ಪರಿಶೀಲಿಸಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ. ಇನ್ನು ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಭಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿದ್ದಾರೆ.
ದಾಳಿ ವೇಳೆ 7 ಕ್ಕೂ ಅಧಿಕ ವಾಹನಗಳಲ್ಲಿ 20 ಕ್ಕೂ ಅಧಿಕ ಮಂದಿಯ ತಂಡ ಕಾರ್ಯಾಚರಿಸಿತ್ತು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್