ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೇಗ; ಕಟ್ಟಡಗಳ ತೆರವು

ಕಾಶಿಕಟ್ಟೆ ರಥಬೀದಿ ರಸ್ತೆ ಸಂಚಾರ ಸ್ಥಗಿತ; ಪರ್ಯಾಯ ವ್ಯವಸ್ಥೆ; ಇಂಜಾಡಿಯಲ್ಲೂ ಕೆಲಸ

Team Udayavani, Mar 14, 2020, 4:32 AM IST

ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೇಗ; ಕಟ್ಟಡಗಳ ತೆರವು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ವತಿಯಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತಗೊಳಿಸಿ ಪರ್ಯಾಯ ವ್ಯವಸ್ಥೆಗೆ ಸೂಚಿಸಲಾಗಿದೆ.

ಕುಮಾರಧಾರಾ, ಕಾಶಿಕಟ್ಟೆ, ಸವಾರಿ ಮಂಟಪ, ಇಂಜಾಡಿ, ಆಂಜನೇಯ ದೇವಾಲಯ ರಸ್ತೆ, ರಥಬೀದಿಯ ಎದರು ಭಾಗದ ಮತ್ತಿತರ ಕಡೆ ರಸ್ತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಶಿಕಟ್ಟೆ ರಥಬೀದಿ ರಸ್ತೆ ಕಾಮಗಾರಿ ನಿರ್ವಹಿಸುವ ಸಲುವಾಗಿ ಕಾಶಿಕಟ್ಟೆ ರಥಬೀದಿ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕಾಶಿಕಟ್ಟೆಯಿಂದ ಆಂಜನೇಯ ದೇವಸ್ಥಾನ ರಸ್ತೆಯಾಗಿ ಸವಾರಿ ಮಂಟಪ ಬಳಿ ಸಂಚರಿಸುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸುಳ್ಯದಿಂದ ತೆರಳುವವರು ಕೂಡಾ ಇದೇ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಕಟ್ಟಡಗಳ ತೆರವು
ರಸ್ತೆ ವಿಸ್ತರಿಸಲು ರಸ್ತೆ ಬದಿಯ ಪ್ರಮುಖ ಕಟ್ಟಡಗಳ ತೆರವು ಕಾರ್ಯಾಚರಣೆ ಕೂಡ ಭರದಿಂದ ಸಾಗಿದೆ. ಮುಖ್ಯವಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ನ ರಥಬೀದಿಯ ಎದುರು ಭಾಗದಲ್ಲಿರುವ ಕಟ್ಟಡದ ಹಲವು ಅಂಗಡಿಗಳು, ಡಿಸಿಸಿ ಬ್ಯಾಂಕಿನ ಸುಬ್ರಹ್ಮಣ್ಯ ಶಾಖೆ, ಮೆಡಿಕಲ್‌ ಶಾಪ್‌ ಮತ್ತಿತರ ಅಂಗಡಿಗಳು ಕಾರ್ಯಾಚರಿಸುತ್ತಿದ್ದವು. ಈ ಕಟ್ಟಡದ ತೆರವಿನ ಹಿನ್ನೆಲೆಯಲ್ಲಿ ಇಲ್ಲಿದ್ದ ಅಂಗಡಿಗಳು ಬೇರೆಡೆಗೆ ಸ್ಥಳಾಂತರಗೊಂಡಿವೆ. ಅಲ್ಲದೇ ಇದೇ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಕಾಮಗಾರಿಯೂ ನಡೆಯುತ್ತಿದೆ.

ಇಂಜಾಡಿಯಲ್ಲೂ ಕೆಲಸ
ಇಂಜಾಡಿ ಭಾಗದಲ್ಲಿ ರಸ್ತೆ ಕೆಲಸಗಳು ಭರದಿಂದ ಸಾಗಿದೆ. ವರ್ಷದ ಹಿಂದೆ ಶಿಫ್ಟ್‌ ಮಾಡಿದ ವಿದ್ಯುತ್‌ ಕಂಬಗಳನ್ನು ಮತ್ತೆ ತೆರವುಗೊಳಿಸಿ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆಗೆ ಮಣ್ಣು ಹಾಕಿ ಸಮತಟ್ಟು ಮಾಡಲಾಗುತ್ತಿದೆ.

ಧೂಳುಮಯ
ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಣ್ಣು ಸಾಗಾಟ ವಾಹನಗಳ ಸಂಚಾರ, ಇತರ ವಾಹನಗಳ ಸಂಚಾರದಿಂದ ನಗರದ ರಸ್ತೆಗಳು ಪೂರ್ತಿ ಧೂಳುಮಯಗೊಂದಿದ್ದು, ಪರ್ಯಾಯವಾಗಿ ನೀರು ಹಾಯಿಸಿ ಧೂಳನ್ನು ದೂರ ಮಾಡಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಸ್ತೆ ಕಾಮಗಾರಿ ಕೆಲಸಗಳು ಶೀಘ್ರಗತಿಯಲ್ಲಿ ನಡೆಯುತ್ತಿದೆ. ಧೂಳಿನ ಸಮಸ್ಯೆಗೆ ನೀರು ಹಾಯಿಸಿ, ಧೂಳು ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಬಂದ್‌ ಮಾಡಿದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಎಂಜಿನಿಯರ್‌ ಪ್ರತಿಕ್ರಿಯಿಸಿದ್ದಾರೆ.

ಜಾಗ ಅತಿಕ್ರಮಣ?
ಈಗ ನಡೆಯುತ್ತಿರುವ ರಸ್ತೆಯ ಇಕ್ಕೆಲಗಳ ಮಾರ್ಜಿನ್‌ನಲ್ಲಿ ಎರಡು ಮೀಟರ್‌ ಬಿಡಬೇಕೆಂಬ ನಿಯಮ ವಿದೆ. ಆದರೆ ಕೆಲವು ಕಡೆ ಈ ಜಾಗ ದಲ್ಲಿ ಅತಿಕ್ರಮಣ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಸುಬ್ರಹ್ಮಣ್ಯ ಗ್ರಾಮಸಭೆಯಲ್ಲೂ ಈ ಬಗ್ಗೆ ಆರೋಪ ಕೇಳಿ ಬಂದಿದೆ. ಅತಿಕ್ರಮಣವಾದಲ್ಲಿ ಕಟ್ಟಡ ತೆರವುಗೊಳಿಸಿ ಜಾಗ ವಶಪಡಿಸಿ ಕೊಳ್ಳ ಬೇಕು ಎನ್ನುವ ಆಗ್ರಹ ವ್ಯಕ್ತ ವಾಗಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.