ಶಾಲಾ ಮೈದಾನದಲ್ಲೇ ಗದ್ದೆ, ನೇಜಿ ನಾಟಿ

ಹಳೆನೇರೆಂಕಿ ಶಾಲೆಯ ಮುಂಭಾಗದಲ್ಲಿ ಭತ್ತದ ಕೃಷಿಯ ಪ್ರಾಯೋಗಿಕ ಪಾಠ

Team Udayavani, Jul 27, 2019, 5:00 AM IST

v-30

ಕಡಬ: ಭತ್ತದ ಗದ್ದೆಗಳು ಮಾಯವಾಗುತ್ತಿರುವ ಕರಾವಳಿ ಭಾಗದ ಬಹುತೇಕ ಶಾಲೆಗಳಲ್ಲಿ ಕೃಷಿಗೆ ಸಂಬಂಧಿಸಿದ ಪ್ರಾತ್ಯಕ್ಷಿಕೆಗಳು ನಡೆಯುತ್ತಿವೆ. ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮೂರ ಕೃಷಿಕರ ಗದ್ದೆಗಳಲ್ಲಿ ಭತ್ತ ಬೇಸಾಯದ ಪ್ರಾಯೋಗಿಕ ಪಾಠದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ತಾಲೂಕಿನ ಹಳೆನೇರೆಂಕಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟದ ಮೈದಾನದ ಒಂದು ಭಾಗವನ್ನು ಗದ್ದೆ ಬೇಸಾಯಕ್ಕೆ ಮೀಸಲಿಟ್ಟು ವಿದ್ಯಾರ್ಥಿಗಳಿಗೆ ಕೃಷಿ ಪಾಠ ನಡೆಯುತ್ತಿರುವುದು ವಿಶೇಷ.

ಹಳೆನೇರೆಂಕಿ ಶಾಲೆಯಲ್ಲಿ ಗದ್ದೆ ಬೇಸಾಯ, ತೆನೆ ಹಬ್ಬ, ಹೊಸಕ್ಕಿ ಊಟ ಮುಂತಾದ ತುಳುನಾಡ ಆಚರಣೆಗಳನ್ನು ಮೆಲುಕು ಹಾಕುವ ಪ್ರಾಯೋಗಿಕ ಪ್ರಯತ್ನ ಮೂರು ವರ್ಷಗಳಿಂದ ನಡೆಯುತ್ತಿದೆ. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉಳುಮೆ, ನೇಜಿ ನಾಟಿ ಮಾಡಿ ಕೊನೆಗೆ ಭತ್ತದ ಪೈರನ್ನು ಕಟಾವು ಮಾಡುವ ತನಕ ಭತ್ತ ಬೇಸಾಯದ ಇಡೀ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ.

ಬಿಸಿಯೂಟಕ್ಕೆ ತರಕಾರಿ
ಗದ್ದೆ ಬೇಸಾಯವಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಶಾಲಾ ಕೈತೋಟದಲ್ಲಿ ತರಕಾರಿಯನ್ನೂ ಬೆಳೆಯುತ್ತಿದ್ದಾರೆ. ಸ್ಥಳೀಯ ಶಿಕ್ಷಣ ಪ್ರೇಮಿಗಳು ಹಾಗೂ ಹೆತ್ತವರ ಸಹಯೋಗದಲ್ಲಿ ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ಅಗತ್ಯವಾದ ತರಕಾರಿ ಬೆಳೆಯಲಾಗುತ್ತಿದೆ. ಬೆಳೆಗಳ ಪೋಷಣೆಯ ಸಂಪೂರ್ಣ ಹೊಣೆಯನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಿದ್ದಾರೆ.

ಪೇಜಾವರ ಶ್ರೀಗಳು ಬಾಲ್ಯದಲ್ಲಿ ಬರುತ್ತಿದ್ದ ಶಾಲೆ
ಉಡುಪಿಯ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಹುಟ್ಟಿದ ಮನೆ ಈ ಶಾಲೆಯ ಕೂಗಳತೆಯಲ್ಲಿದೆ. ಬಾಲ್ಯದ ದಿನಗಳಲ್ಲಿ ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ತನ್ನ ಅಕ್ಕನ ಜೊತೆ ಅವರೂ ಈ ಶಾಲೆಗೆ ಬರುತ್ತಿದ್ದರಂತೆ. ಹಾಗಾಗಿ ಈ ಶಾಲೆಗೂ ಸ್ವಾಮೀಜಿಗೂ ಹತ್ತಿರದ ನಂಟಿದೆ.

ಅನುರಣಿಸಿದ ಓ ಬೇಲೆ…
ಮುಖ್ಯ ಶಿಕ್ಷಕ ಸಾಂತಪ್ಪ ಗೌಡ ಹಾಗೂ ಇತರ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಲೆಗೆ ಮುಂಡಾಸು, ವಿದ್ಯಾರ್ಥಿನಿಯರು ಅಡಿಕೆ ಹಾಳೆಯ ಮುಟ್ಟಾಲೆ ಧರಿಸಿ ಸಾಂಪ್ರದಾಯಿಕವಾಗಿ ಗದ್ದೆಗಿಳಿದು ನೇಜಿ ನಾಟಿ ಮಾಡಿ ಪಕ್ಕಾ ಕೃಷಿಕರಂತೆ “ಓ ಬೇಲೆ’ ಪಾಡªನ ಹಾಡಿ ಖುಷಿಪಟ್ಟರು. ಗದ್ದೆಯ ಎಲ್ಲ ಕೆಲಸವನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಾರೆ. ಶಾಲೆಯಲ್ಲಿ ಬೆಳೆದ ತರಕಾರಿ, ಭತ್ತದ ಪೈರಿಗೆ ನವಿಲುಗಳು ದಾಳಿ ನಡೆಸುವುದು ನಮಗೆ ಸವಾಲಾಗಿ ಪರಿಣಮಿಸಿದೆ ಎನ್ನುತ್ತಾರೆ ಶಿಕ್ಷಕ ನವೀನ್‌.

ಉತ್ತಮ ಸಹಕಾರ
ಕೃಷಿ ನಮ್ಮ ಹಿರಿಯರ ಜೀವನಾಡಿಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಆಧುನಿಕತೆಯ ಹೆಸರಿನಲ್ಲಿ ಯಾಂತ್ರೀಕೃತ ಬದುಕಿಗೆ ಒಗ್ಗಿಕೊಂಡು ಕೃಷಿ ಪದ್ಧತಿಯನ್ನು ಮುಂದುವರಿಸುವ ಮಂದಿ ಕಡಿಮೆ ಯಾಗಿದ್ದಾರೆ. ಪ್ರಾಯೋಗಿಕ ಕೃಷಿ ಪಾಠದಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೃಷಿಯತ್ತ ಒಲವು ತೋರಿಸಲಿ ಎನ್ನುವುದು ನಮ್ಮ ಆಶಯ. ಈ ಕಾರ್ಯಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಕ್ಕಳ ಹೆತ್ತವರು ಹಾಗೂ ಶಿಕ್ಷಣ ಪ್ರೇಮಿಗಳಿಂದ ಉತ್ತಮ ಸಹಕಾರ ಸಿಗುತ್ತಿದೆ.
 - ಸಾಂತಪ್ಪ ಗೌಡ, ಮುಖ್ಯ ಶಿಕ್ಷಕ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.