Udayavni Special

ಮುಖ್ಯರಸ್ತೆಯ ಬದಿಯಲ್ಲೇ ಟಾಯ್ಲೆಟ್‌ ಬ್ಲಾಕ್‌!


Team Udayavani, Jul 22, 2018, 3:04 PM IST

22-july-13.jpg

ಬೊಳುವಾರು: ಹೊಸದಾಗಿ ನಿರ್ಮಿಸಿದ ಇ – ಟಾಯ್ಲೆಟ್‌ ಪಕ್ಕದಲ್ಲೇ ಶೌಚಾಲಯ ಗುಂಡಿ ಬ್ಲಾಕ್‌ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಬೊಳುವಾರು ಜಂಕ್ಷನ್‌ನಲ್ಲಿದ್ದ ಸಾರ್ವಜನಿಕ ಶೌಚಾಲಯ ನಿರ್ವಹಣೆಯಿಲ್ಲದೆ ಸೊರಗಿತ್ತು. ಶೌಚಾಲಯದ ಒಳಗೆ ಹೋಗುವುದೇ ಕಷ್ಟ ಎನ್ನುವ ಸ್ಥಿತಿ ಇತ್ತು. ನಗರಸಭೆ ವತಿಯಿಂದ ಇದಕ್ಕೊಂದು ವ್ಯವಸ್ಥೆ ಮಾಡಲಾಯಿತು. ಮಾತ್ರವಲ್ಲ, ಇದರ ಪಕ್ಕದಲ್ಲೇ ಇ – ಟಾಯ್ಲೆಟ್‌ ಇಡಲಾಗಿದೆ. ಆದರೆ, ಪಕ್ಕದಲ್ಲಿರುವ ಪಿಟ್‌ ತುಂಬಿ ಹೋಗಿದ್ದು, ದುರ್ನಾತ ಬೀರುತ್ತಿದೆ.

ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಹಾಗೂ ಬೊಳುವಾರು ಜಂಕ್ಷನ್‌ ನಲ್ಲಿ ಇ – ಟಾಯ್ಲೆಟ್‌ ಇಡಲಾಗಿದೆ. ಪ್ರತಿಯೊಂದಕ್ಕೆ 12 ಲಕ್ಷ ರೂ.ಗಳಂತೆ 21 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಆದರೆ, ಮಳೆ ನೀರು ಹರಿದು ಪಕ್ಕದಲ್ಲಿರುವ ಶೌಚಾಲಯದ ಪಿಟ್‌ ಸೇರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಮಾಡಿದರೆ, ಈ ಸಮಸ್ಯೆ ಇರುವುದಿಲ್ಲ. ಸದ್ಯದ ಸ್ಥಿತಿಯಲ್ಲಿ ಶೌಚಾಲಯ ಪಿಟ್‌ ತುಂಬಿ ಹೋಗಿರುವುದರಿಂದ, ಸಾಮಾನ್ಯ ಜನರಿಗೆ ಸಮಸ್ಯೆಯಾಗಿದೆ. ಮಾತ್ರವಲ್ಲ, ಶೌಚಾಲಯವನ್ನು ಬಳಸಲು ಹಿಂದೆ- ಮುಂದೆ ನೋಡುವಂತಾಗಿದೆ. ಶೌಚಾಲಯ ಇದ್ದು, ಬಳಕೆಗೆ ಯೋಗ್ಯವಾಗಿಲ್ಲವಾದರೆ, ಮುಂದೆ ಅಶುಚಿತ್ವ ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ.

ಪರಿಶೀಲಿಸಿ ಕ್ರಮ
ಇ-ಟಾಯ್ಲೆಟನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಇದರ ಪಿಟ್‌ ತುಂಬಿ ಹೋಗಿಲ್ಲ. ಸಮೀಪದಲ್ಲಿರುವ ಶೌಚಾಲಯದ
ಪಿಟ್‌ ತುಂಬಿದೆ. ಇದಕ್ಕೆ ಕಾರಣ ಮಳೆ ನೀರು. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
 - ರೂಪಾ ಶೆಟ್ಟಿ ಪೌರಾಯುಕ್ತೆ,
    ಪುತ್ತೂರು ನಗರಸಭೆ

ಅಸಹನೀಯ ವಾಸನೆ ಟಾಯ್ಲೆಟ್‌ ಪಿಟ್‌ ತುಂಬಿರುವುದರಿಂದ, ಕೆಟ್ಟ ವಾಸನೆ ಬರುತ್ತಿದೆ. ಇದರ ಪಕ್ಕವೇ ರಿಕ್ಷಾ ಸರತಿ ಸಾಲು ಇದೆ. ದಿನವಿಡೀ ಇದೇ ವಾಸನೆಯನ್ನು ಸಹಿಸಿಕೊಂಡು ಕುಳಿತುಕೊಳ್ಳಬೇಕು. ಸಾರ್ವಜನಿಕರು ಮೂಗಿಗೆ ಬಟ್ಟೆ ಕಟ್ಟಿಕೊಂಡು ನಡೆದಾಡುತ್ತಿದ್ದಾರೆ. ಹರಿದು ಹೋಗುವ ಮಳೆನೀರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದರೆ, ಸಮಸ್ಯೆ ತಪ್ಪುತ್ತದೆ.
 - ಇಸ್ಮಾಯಿಲ್‌ ಬೊಳುವಾರು
   ಅಧ್ಯಕ್ಷ, ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ- ಮಾಲಕ ಸಂಘ

ಟಾಪ್ ನ್ಯೂಸ್

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

Children’s education

ಆದಿವಾಸಿ ಮುಖಂಡರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ :ಡಿವೈಎಸ್ ಪಿ ರವಿಪ್ರಸಾದ್ ಮನವಿ

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.