ಉಜಿರೆ: ಅಜ್ಜನ ಕಣ್ಣೆದುರೇ ಮೊಮ್ಮಗನ ಅಪಹರಣ; 24 ತಾಸು ಕಳೆದರೂ ಸಿಗದ ಜಾಡು !

ಹಣಕಾಸು ವ್ಯವಹಾರ ತಂದಿತ್ತ ಕುತ್ತು. ಜಿಲ್ಲೆಯಲ್ಲೇ ಸಂಚಲನ ಮೂಡಿಸಿದ ಮಗುವಿನ ಅಪಹರಣ ಪ್ರಕರಣ

Team Udayavani, Dec 18, 2020, 8:18 PM IST

belthangady-2

ಬೆಳ್ತಂಗಡಿ: ಉಜಿರೆ ರಥಬೀದಿ ನಿವಾಸಿಯಾಗಿರುವ ಉದ್ಯಮಿ, ನಿವೃತ್ತ ನೇವಿ ಅಧಿಕಾರಿ ಎ.ಕೆ. ಶಿವನ್ ಅವರ 8 ವರ್ಷದ ಮೊಮ್ಮಗ ಅನುಭವ್ ನ ಅಪಹರಣ ನಡೆದು 24 ತಾಸುಗಳು ಕಳೆದರೂ ಪೊಲೀಸರಿಗೆ ಆರೋಪಿಗಳ ಜಾಡು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮಗುವಿನ ಅಪಹರಣ ಪ್ರಕರಣ ಡಿ.17ರ ಸಂಜೆ 6.30 ಹೊತ್ತಿಗೆ ನಡೆದು ಅರ್ಧ ತಾಸಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಗುವಿನ‌ ಚಿತ್ರ ಸಹಿತ ಸಂದೇಶ ಹರಿದಾಡಲು ಆರಂಭಿಸಿದೆ. ಸಾಮಾಜಿಕ ಜಾಲತಾಣದ ಸಂದೇಶಗಳು ವಿಶ್ವಾಸಾರ್ಹ ಅಲ್ಲ ಎಂಬ ಚರ್ಚೆಗಳು ಒಂದೆಡೆಯಾದರೆ, ಸ್ಥಳೀಯರು ಹಾಗೂ  ಪೋಷಕರು ಮಾಹಿತಿ ಖಚಿತ ಪಡಿಸುತ್ತಿದ್ದಂತೆ, ಇದು  ಉಜಿರೆ ಗ್ರಾಮಲ್ಲಿ ಜನತೆಗೆ ಅರಗಿಸಿಕೊಳ್ಳದಷ್ಟು ಹೃದಯವಿದ್ರಾವಕ ಘಟನೆಯಾಗಿ ಬದಲಾಗಿತ್ತು.

ಮೊಮ್ಮಗ ಅನುಭವ್ ಜತೆ ಶಿವನ್ ಪ್ರತಿನಿತ್ಯ ರಥಬೀದಿ ಮುಂಭಾಗ ವಾಕಿಂಗ್ ತೆರಳುತ್ತಿದ್ದರು. 3ನೇ ತರಗತಿ ಓದುತ್ತಿರುವ ಅನುಭವ್ ಕೂಡ ತರಗತಿ ಇಲ್ಲದಿರುವುದರಿಂದ ಪ್ರತಿನಿತ್ಯ ಮೈದಾನದಲ್ಲಿ ಸಂಜೆ ಆಟವಾಡುತ್ತ ಮನೆ ಸೇರುತ್ತಿದ್ದ. ಆದರೆ ಡಿ.17ರ ಗುರುವಾರ ಸಂಜೆ 6.30ರ ವೇಳೆಗೆ ಅಜ್ಜ ಮತ್ತು ಮೊಮ್ಮಗ ರಥಬೀದಿಯಿಂದ ವಾಕಿಂಗ್ ಮುಗಿಸಿ ಮನೆ ಗೇಟು ಮುಂಭಾಗ ತಲುಪಿದ್ದಾರೆ. ಅಜ್ಜನ ಮುಂದೆ  ಮೊಮ್ಮಗ ನಡೆದು ಹೋಗುತ್ತಿದ್ದ. ಗೇಟಿನ ಸಮೀಪ ಬಿಳಿ ಕಾರು ಹಾಗೂ ಇಬ್ಬರು ಹೊರ ನಿಂತಿದ್ದರು. ಅನುಭವ್ ಕಾರಿನ ಸಮೀಪ ಬರುತ್ತಿದ್ದಂತೆ ಓರ್ವ ಮಗುವನ್ನು ಎತ್ತಿಕೊಂಡು ಕಾರಿನೊಳಕ್ಕೆ ಹಾಕಿ ಪರಾರಿಯಾಗಿದ್ದಾರೆ.

ಕಾರಿನೊಳಕ್ಕೆ ಮೂವರು ಅಥವಾ ನಾಲ್ವರು ಇದ್ದು, ಹಳದಿ ನಂಬರ್ ಪ್ಲೇಟ್ ಇರುವಿಕೆಯನ್ನು ಶಿವನ್ ಅವರು ಗಮನಿಸಿದ್ದಾರೆ. ತಕ್ಷಣ ಅನುಭವ್ ತಾಯಿ ಸರಿತಾ ಸ್ಥಳಕ್ಕೆ  ಓಡಿಬಂದರೂ, ಅಷ್ಟರಲ್ಲಾಗಲೇ ದುಷ್ಕರ್ಮಿಗಳು  ಕಾರಿನಲ್ಲಿ ಪರಾರಿಯಾಗಿದ್ದರು. ಸ್ವಲ್ಪ ಸಮಯದ ಬಳಿಕ ಅಪಹರಣಕಾರರು ಮಗುವಿನ‌ ತಾಯಿಗೆ ಕರೆಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇಷ್ಟೆಲ್ಲ ಮಾಹಿತಿಗಳು ರಾತ್ರಿಯಾಗುತ್ತಿದ್ದಂತೆ ಊರೆಲ್ಲ ವಿಷಯ ತಿಳಿದು ಸ್ಥಳೀಯರು ಹಾಗು ಮೈದಾನದಲ್ಲಿ ದಿನನಿತ್ಯ ಆಟವಾಡಲು ಬರುತ್ತಿರುವವರು ಪೊಲೀಸರ ತನಿಖೆಗೆ ಸಹಕರಿಸಿದ್ದಾರೆ.

ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ನಡೆಸಿದ ಘಟನೆ ತಾಲೂಕಿನಲ್ಲಿ ಮಾತ್ರವಲ್ಲದೆ ಜಿಲ್ಲೆಯಲ್ಲೇ ಕಳೆದ ಎರಡು ವರ್ಷಗಳಿಂದ ನಡೆದಿರಲಿಲ್ಲ ಎಂಬುದು ಪೊಲೀಸ್ ದಾಖಲೆಯಿಂದ ಸ್ಪಷ್ಟವಾಗುತ್ತಿದೆ. ಹೆಚ್ಚಾಗಿ ಪೋಷಕರು ಗದರಿರುವುದು, ತಪ್ಪು ಮಾಡಿದ ವಿಚಾರಕ್ಕೆ ಹೊಡೆದಿರುವ ಕೋಪದಲ್ಲೊ ಮನೆ ಬಿಟ್ಟು ಹೋಗಿರುವ ಪ್ರಕರಣ ಸರ್ವೇ ಸಾಮಾನ್ಯ. ಗ್ರಾಮಾಂತರ ಭಾಗದಲ್ಲಿ ಅಪಹರಣ ನಡೆಸಿ 17 ಕೋಟಿಗೆ ಬೇಡಿಕೆ ಇಟ್ಟಿರುವುದು ರಾಷ್ಟ್ರದ ಮಟ್ಟದ ಸುದ್ದಿಯಾಗಿದೆ.

ಬೆಂಗಳೂರು, ಮುಂಬೈ ಸೇರಿದಂತೆ ಮಹಾನಗರಗಳಲ್ಲಿ ದಿನಕ್ಕೊಂದರಂತೆ ಇಂತಹ ಪ್ರಕರಣಗಳು ನಡೆಯುವ ಸಾಧ್ಯತೆ ಇರುತ್ತದೆ. ಆದರೆ ಇದೊಂದು ಹೊಸ ಪ್ರಕರಣದಲ್ಲಿ ಹಣದ ವ್ಯವಹಾರದ ಕೆಲ ವದಂತಿಗಳು ಪೊಲೀಸ್ ಅಧಿಕಾರಿಗಳಿಗೆ ಸವಾಲಾಗಿದೆ. ಎಸ್.ಪಿ. ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ಐದು ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಧ್ಯಾಹ್ನ ಅಪಹರಣಕಾರರು ಪೊಲೀಸ್ ದೂರು ನೀಡಿರುವ ಬಗ್ಗೆ ಮಗುವಿನ ತಂದೆಗೆ ಎಚ್ಚರಿಕೆ ನೀಡಿದ್ದರಿಂದ ಮಾಧ್ಯಮದೊಂದಿಗೆ ಮಾತನಾಡಲು ಕೂಡ ಪೋಷಕರು ಹೆದರಿದ್ದರು. ಹಿಂದಿ ಭಾಷೆಯಲ್ಲಿ ವ್ಯವಹಾರ ನಡೆಸುತ್ತಿರುವ ಮಂದಿ, ಬಿಟ್ ಕಾಯಿನ್ ವಿಚಾರ ಪ್ರಸ್ತಾಪವಾಗಿರಿವುದರಿಂದ ತನಿಖೆ ದಿಕ್ಕು ಬದಲಾಗಿದೆ. ನಾನಾ ಆಯಾಮಗಳಿಂದ ತನಿಖೆ ಮುಂದುವರಸಲಾಗಿದೆ.

ಅಪಹರಣಕ್ಕೊಳಗಾದ ಮಗುವಿನ ತಂದೆ ಬಿಜೊಯ್ ಅವರಿಗೆ ನಿರಂತರ ಸಾಮಾಜಿಕ ಜಾಲತಾಣದಲ್ಲಿ ಅಪಹರಣಕಾರರ ಸಂದೇಶ ರವಾನೆಯಾಗುತ್ತಿದೆ. ಶುಕ್ರವಾರ ಮಧ್ಯಾಹ್ನ ವೇಳೆಗೆ 100 ಬಿಟ್ ಕಾಯಿನ್ ವಿಚಾರ 60 ಬಿಟ್ ಕಾಯಿನ್ ಅಂದರೆ 10 ಕೋಟಿ. ರೂ. ಗೆ ಬಂದು ನಿಂತಿದ್ದು ಮತ್ತಷ್ಟು ಕಡಿಮೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಸಂಜೆ ವೇಳೆಗೆ ಲಭ್ಯವಾಗಿದೆ.

ಮಧ್ಯಾಹ್ನ ಎಸ್.ಪಿ.ಲಕ್ಷ್ಮೀಪ್ರಸಾದ್ ಹಾಗೂ ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮನೆಮಂದಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ:  ಉಜಿರೆ ಮಗು ಅಪಹರಣ ಪ್ರಕರಣ: 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು, ತೀವ್ರಗೊಂಡ ಶೋಧ

ಬಿಟ್ ಕಾಯಿನ್ ಎಂದರೇನು ?

ಅಪಹರಣಕಾರರು ಬಿಟ್ ಕಾಯಿನ್ ವಿಚಾರ ಪ್ರಸ್ತಾಪಿಸಿದ್ದರಿಂದ ಘಟನೆ ಮತ್ತೊಂದು ಸ್ವರೂಪ ಪಡೆದಿದೆ. ಬಿಟ್ ಕಾಯಿನ್ ಡಿಜಿಟಲ್ ಹಣಕಾಸು ಅಥವಾ ಡಿಜಿಟಲ್ ಕರೆನ್ಸಿ ಆಗಿದೆ. ಅಂದರೆ ಆನ್ ಲೈನ್ ಮೂಲಕ ಪಾವತಿಸಲು ನಿಜವಾದ ನಾಣ್ಯವನ್ನು ನೀಡಬೇಕಾಗಿಲ್ಲ. ಇಂದು ಸುಮಾರು 800ರಷ್ಟು ಇಂತಹ ಕ್ರಿಪ್ಟೋಕರೆನ್ಸಿ (cryptocurrency) ಗಳಿವೆ. ಈ ತಂತ್ರಜ್ಞಾನವನ್ನು ಬ್ಲಾಕ್ಚೈನ್ (blockchain) ಎಂಬ ನೂತನ ವಿಧಾನದ ಆಧಾರದಲ್ಲಿ ಸಾರ್ವಜನಿಕರಿಗೆ ಮಿಥ್ಯಾಹಣದ ಮೂಲಕ ಸುಲಭವಾಗಿ ತಮ್ಮ ಹಣಕಾಸಿನ ವ್ಯವಹಾರಗಳನ್ನು ವಿಶ್ವಮಟ್ಟದಲ್ಲಿ ನಡೆಸಲು ಸಾಧ್ಯವಾಗುತ್ತದೆ.

ಕ್ರಿಪ್ಟೋಕರೆನ್ಸಿಯನ್ನು ಬಳಸಿ ಹಣದ ವ್ಯವಹಾರ ನಡೆಸುವ ವೀಸಾ, ಮಾಸ್ಟರ್ ಕಾರ್ಡ್ ಮೊದಲಾದ ವ್ಯವಸ್ಥೆಗಳು ಈಗಾಗಲೇ ಇವೆ. ಆದರೆ ಇವು ಒಂದು ದೇಶದಿಂದ ಇನ್ನೊಂದು ದೇಶದ ನಡುವಣ ವ್ಯವಹಾರದಲ್ಲಿ ಮೊದಲು ಈ ದೇಶದ ಹಣವನ್ನು ಡಾಲರುಗಳಿಗೂ, ಬಳಿಕ ಡಾಲರುಗಳಿಂದ ಆ ದೇಶದ ಹಣಕ್ಕೂ ಪರಿವರ್ತಿಸಿ ವಹಿವಾಟು ನಡೆಸುತ್ತವೆ. ಆದರೆ ಈ ಎರಡೂ ಪರಿವರ್ತನೆಗಳಲ್ಲಿ ಸಂಸ್ಥೆಗಳು ಅಪಾರವಾದ ಕಮೀಶನ್ ಅಥವಾ ದಲ್ಲಾಳಿ ಹಣವನ್ನು ಪಡೆಯುತ್ತವೆ. ಅಲ್ಲದೇ ಈ ವಹಿವಾಟು ಸರಕಾರದ ಆಧೀನದಲ್ಲಿಯೇ ಬ್ಯಾಂಕುಗಳ ಮುಖಾಂತರ ನಡೆಯುತ್ತದೆ. ಆದರೆ ಬಿಟ್ ಕಾಯಿನ್ ಗೆ ಯಾವುದೇ ನಿರ್ಬಂಧವಿಲ್ಲ. ನಮ್ಮ ದೇಶದ ವಿತ್ತ ಸಚಿವಾಲಯ ಹಾಗೂ ಆರ್ ಬಿಐ  ಸದ್ಯಕ್ಕೆ ಈ ಹಣಕ್ಕೆ ಭಾರತದಲ್ಲಿ ಸರಕಾರದ ಮಾನ್ಯತೆ ಇಲ್ಲ ಎಂದಿದೆ.

ಇದನ್ನೂ ಓದಿ: ಉಜಿರೆ ಮಗು ಕಿಡ್ನಾಪ್ ಫಾಲೋಅಪ್: 17 ಕೋಟಿ ಬದಲು 10 ಕೋಟಿ ರೂ. ಬೇಡಿಕೆಯಿಟ್ಟ ಅಪಹರಣಕಾರರು

ತನಿಖೆ ಮುಂದುವರೆದಿದೆ: 

ಮಗುವನ್ನು ಸುರಕ್ಷಿತವಾಗಿ ಕರೆತರಬೇಕಾಗಿದ್ದರಿಂದ ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶಗಳು ರವಾನೆಯಾಗುತ್ತಿದ್ದು, ಸ್ಪಷ್ಟಮಾಹಿತಿ ಇಲ್ಲದೆ ಸಂದೇಶಗಳನ್ನು ಹರಿಬಿಡುತ್ತಿರುವುದರಿಂದ ತನಿಖೆಗೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರು ಸಂಯಮದಿಂದ ವರ್ತಿಸಿ ತನಿಖೆಗೆ ಸಹಕರಿಸುವಂತೆಯೂ ದ.ಕ.ಪೊಲೀಸ್ ವರಿಷ್ಠಾಧಿಕಾರಿ ಲಕ್ಣ್ಮೀಪ್ರಸಾದ್ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.