ಇಂದು ಡಾ| ಹೆಗ್ಗಡೆ 75ನೇ ಜನ್ಮದಿನಾಚರಣೆ
Team Udayavani, Nov 25, 2022, 6:29 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು.
ದೇವಸ್ಥಾನದ ನೌಕರರು, ಊರಿನ ನಾಗರಿಕರು, ಶಿಕ್ಷಣ ಸೇರಿದಂತೆ ವಿವಿಧ ಸಂಸ್ಥೆಗಳ ಸಿಬಂದಿ, ಶ್ರದ್ಧಾ ಭಕ್ತಿಯಿಂದ ಡಾ| ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯ ಸಲ್ಲಿಸುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ ತರಬೇತಿ ಕೇಂದ್ರಗಳು, ಕೆಜಿಯಿಂದ ಪಿಜಿ ವರೆಗಿನ ಶಿಕ್ಷಣ ಸಂಸ್ಥೆಗಳು, ವೃತ್ತಿಶಿಕ್ಷಣ ಸಂಸ್ಥೆಗಳು, ಉಜಿರೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಹಾಸನ, ಉಡುಪಿಯಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ಕ್ರೀಡೆ, ಸಾಂಸ್ಕೃತಿಕ ರಂಗ, ಪರೀಕ್ಷಾ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲೇ ವಿಶೇಷ ಮನ್ನಣೆ ಮತ್ತು ಗೌರವಕ್ಕೆ ಪಾತ್ರವಾಗುವಂತೆ ಶೈಕ್ಷಣಿಕ ಕ್ಷೇತ್ರವನ್ನು ಬೆಳೆಸಿದ ಹೆಗ್ಗಳಿಕೆ ಅವರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ನ್ಪೋಟ್ಸ್‌ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್