ವಿಟ್ಲ: ಪ್ರೀತಿಸುವ ನಾಟಕವಾಡಿ ಅತ್ಯಾಚಾರ: ಆರೋಪಿ ಬಂಧನ
Team Udayavani, Nov 4, 2022, 6:58 AM IST
ವಿಟ್ಲ: ವಿಟ್ಲ ಅಡ್ಡದ ಬೀದಿಯಲ್ಲಿ ಯುವತಿಯರಿಗೆ ಹಲ್ಲೆ ನಡೆಸಿದ ಪ್ರಕರಣದ ಮುಂದುವರಿದ ಭಾಗವಾಗಿ ಇಬ್ಬರ ಬಂಧನವಾಗಿದೆ. 17 ವರ್ಷದ ಯುವತಿಯನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ ವಿಚಾರದಲ್ಲಿ ಕಬಕ ನಿವಾಸಿ ಸಂಶೀರ್ (21), ಕನ್ಯಾನ ಸಜಾದ ಯಾನೆ ಸಜ್ಜು (22) ಬಂಧಿತ ಆರೋಪಿಗಳು.
ಇನ್ನೋರ್ವ ಆರೋಪಿ ಶಾಫಿ ತಲೆಮರೆಸಿಕೊಂಡಿದ್ದಾನೆ. ಇದೇ ಪ್ರಕರಣದ ಆರೋಪಿಯಾಗಿರುವ ಆಸಿಫ್ ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಅಡ್ಯನಡ್ಕಕ್ಕೆ ಹೋದ ಯುವತಿ ಅಲ್ಲಿಂದ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಕನ್ಯಾನ ಮೂಲದ ಸಜಾದನೊಂದಿಗೆ ತೆರಳಿದ್ದಳು. ಆತನು ಆಕೆಯನ್ನು ಅಜ್ಞಾತ ಜಾಗದಲ್ಲಿ ಇರಿಸಿದ್ದ. ಬಳಿಕ ಆಕೆಯೊಂದಿಗೆ ಮಂಗಳೂರಿನಲ್ಲಿ ಓಡಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ಕಬಕದ ಸಂಶೀರ್ ಆಕೆಯನ್ನು ಪ್ರೀತಿಸಿ ಅತ್ಯಾಚಾರ ಎಸಗಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಅ. 10ರಂದು ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರ ಮೇಲೆ ತಪ್ಪು ಗ್ರಹಿಕೆಯಿಂದ ವಿಟ್ಲದ ಅಡ್ಡದ ಬೀದಿಯಲ್ಲಿ ತಂಡವೊಂದು ಹಿಗ್ಗಾಮುಗ್ಗ ಹಲ್ಲೆ ನಡೆಸಿತ್ತು. ಯುವತಿಯರು ದೂರು ನೀಡದ ಹಿನ್ನೆಲೆಯಲ್ಲಿ ಕರೈ ನಿವಾಸಿ ಮಹಮ್ಮದ್ ಆರೀಫ್ ವಿರುದ್ಧ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್