
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತಗೊಂಡು ರಿಕ್ಷಾ ಚಾಲಕ ಸಾವು
Team Udayavani, Nov 9, 2022, 12:04 PM IST

ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9ರಂದು ಮಾಣಿ ಸಮೀಪ ನಡೆದಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು.
ಜಯಕರ ಪೂಜಾರಿ ಅವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ನೇಪಾಳದಲ್ಲಿ ಪ್ರಬಲ ಭೂಕಂಪ, ಹಲವಾರು ಮನೆ ಕುಸಿತ; ದೆಹಲಿಯಲ್ಲೂ ನಡುಗಿದ ಭೂಮಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ