Belthangady ಹೆದ್ದಾರಿಯಲ್ಲಿ ಎದುರಾದ ಕಾರನ್ನು ಎತ್ತಿ ನೆಲಕ್ಕೊಗೆದ ಕಾಡಾನೆ!

ಕಕ್ಕಿಂಜೆಯ ಬಸ್ತಿಯಲ್ಲಿ ಘಟನೆ ; ಕಾರಿನಲ್ಲಿದ್ದ ಇಬ್ಬರಿಗೆ ಗಾಯ ; ಇತರರು ಅಪಾಯದಿಂದ ಪಾರು

Team Udayavani, Nov 28, 2023, 12:00 AM IST

Belthangady ಹೆದ್ದಾರಿಯಲ್ಲಿ ಎದುರಾದ ಕಾರನ್ನು ಎತ್ತಿ ನೆಲಕ್ಕೊಗೆದ ಕಾಡಾನೆ!

ಬೆಳ್ತಂಗಡಿ: ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಒಂಟಿ ಸಲಗವು ಕಾರಿಗೆ ಹಾನಿ ಮಾಡಿ ಇಬ್ಬರ‌ನ್ನು ಗಾಯಗೊಳಿಸಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಪುತ್ತೂರು ಮೂಲದ ಅಬ್ದುಲ್‌ ರೆಹಮಾನ್‌ (40) ಮತ್ತು ನಾಸಿಯಾ (30) ಗಾಯಾಳುಗಳು. ರೆಹಮಾನ್‌ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದೆ. ಇವರಿಗೆ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಾರಿನಲ್ಲಿ ಮಗು ಸಹಿತ ಏಳು ಮಂದಿ ನೆರಿಯದ ಸಂಬಂಧಿಕರ ಮನೆಗೆ ಪ್ರಯಾ ಣಿಸುತ್ತಿದ್ದರು. ಆನೆಯು ರಸ್ತೆಯಲ್ಲಿ ಸಂಚರಿ ಸುತ್ತಿರುವುದನ್ನು ತಿಳಿದಿದ್ದ ಸ್ಥಳೀಯರು ಆಗ ಆ ದಾರಿಯಾಗಿ ಬಂದ ಕಾರನ್ನು ಮುನ್ನೆಚ್ಚರಿಕೆ ದೃಷ್ಟಿಯಿಂದ ನಿಲ್ಲಿಸುವಂತೆ ಸೂಚಿಸಿದರು. ಕಾರನ್ನು ಕಟ್ಟಡವೊಂದರ ಬದಿ ನಿಲ್ಲಿಸುವಷ್ಟರಲ್ಲಿ ಆನೆ ಅದೇ ಪರಿಸರಕ್ಕೆ ಆಗಮಿಸಿತ್ತು. ಕಾರಿನಲ್ಲಿದ್ದ ಕೆಲವರು ಅಷ್ಟರಲ್ಲಿ ಕೆಳಗೆ ಇಳಿದು ಪಕ್ಕದ ಮನೆಯಲ್ಲಿ ರಕ್ಷಣೆ ಪಡೆದರು.

ಆನೆಯು ದಾಡೆಯ ಮೂಲಕ ಕಾರನ್ನು ಕಟ್ಟಡದ ಗೋಡೆಗೆ ಗುದ್ದಿ ಜಖಂಗೊಳಿಸಿ ಅನಂತರ ಅಲ್ಲಿಂದ ಮನೆಯ ಕಾಂಪೌಂಡ್‌ಗೆ ನುಗ್ಗಿ ಅಲ್ಲಿಂದ ತೋಟಕ್ಕೆ ಹೋಗಿದೆ. ಬಳಿಕ ನದಿಯ ಪರಿಸರದಲ್ಲಿ ಕಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬಂದಿ ಪಟಾಕಿ ಸಿಡಿಸುವ ಮೂಲಕ ಆನೆಯನ್ನು ಕಾಡಿನತ್ತ ಅಟ್ಟಲು ಕ್ರಮ ಕೈಗೊಂಡಿದ್ದಾರೆ.

ಈ ಘಟನೆಗೆ ಪೂರ್ವದಲ್ಲಿ ಆನೆಯು ಪರಿಸರದ ಜನನಿಬಿಡ ಪ್ರದೇಶಗಳಲ್ಲಿ ಓಡಾಟ ನಡೆಸಿದ್ದು ಒಬ್ಬರ ಮನೆಯಂಗಳಕ್ಕೂ ಹೋಗಿತ್ತು ಹಾಗೂ ರಸ್ತೆ ಬದಿ ಇರುವ ಮನೆಯೊಂದರ ಗೇಟನ್ನು ಮುರಿಯಲು ಯತ್ನಿಸಿತ್ತು. ಆಗ ಸುತ್ತಮುತ್ತಲ ಮನೆಯವರು ಬೊಬ್ಬೆ ಹೊಡೆದ ಕಾರಣ ಮತ್ತೆ ರಸ್ತೆಗೆ ಬಂದಿತ್ತು.

ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳಿಂದ ನಿರಂತರ ಕೃಷಿ ಹಾನಿ ಉಂಟಾಗುತ್ತಿದ್ದು, ಇದೇ ಮೊದಲ ಬಾರಿಗೆ ವಾಹನದ ಮೇಲೆ ದಾಳಿ ನಡೆದಿದೆ.

ಬೆಳಗ್ಗೆ ಶಾಂತ, ರಾತ್ರಿ ರೌದ್ರ!
ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಪರಿಸರದಲ್ಲಿ ಸೋಮವಾರ ಬೆಳಗ್ಗೆ ಇದೇ ಕಾಡಾನೆ ಕಂಡುಬಂದಿತ್ತು. ಆಗ ಆನೆ ಶಾಂತವಾಗಿತ್ತು. ಆ ಪರಿಸರದಲ್ಲಿ ಓಡಾಡಿ ಯಾವುದೇ ಹಾನಿ ಎಸಗದೆ ಕಾಡಿಗೆ ತೆರಳಿತ್ತು.
ರಾತ್ರಿಯ ವೇಳೆ ನೆರಿಯದ ಬಯಲು ಶಾಲೆಯ ಬಳಿ ಕಾಣಿಸಿಕೊಂಡ ರಸ್ತೆಗೆ ಇಳಿಯುವ ವೇಳೆ ಜೀಪ್‌ ಒಂದು ಸಾಗಿದ್ದು, ಅದರ ಬೆಳಕು ಕಂಡ ಬಳಿಕ ರೌದ್ರವಾತಾರ ತಾಳಿತು. ಈ ನಡುವೆ ಜನರು ಕೂಡ ಗೊಬ್ಬೆ ಹಾಕಿ, ಪಟಾಗಿ ಸಿಡಿಸಿದ್ದು ಆನೆಯ ಸಿಟ್ಟಿಗೆ ಕಾರಣವಾಯಿತು. ಆನೆ ಬರುವ ವೇಳೆ ಯಾವುದೇ ವಾಹನ ಎದುರಾಗದಿದ್ದರೆ ಅದು ತನ್ನಷ್ಟಕ್ಕೆ ಹೋಗುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.