ನೇತ್ರಾವತಿ ನದಿಯಲ್ಲಿ ಮಹಿಳೆ ಆತ್ಮಹತ್ಯೆ ಶಂಕೆ: ಮುಳುಗುತಜ್ಞರಿಂದ ಹುಡುಕಾಟ
Team Udayavani, Jul 11, 2020, 11:14 AM IST
ಬಂಟ್ವಾಳ: ಮಹಿಳೆಯೊಬ್ಬರು ಪಾಣೆಮಂಗಳೂರು ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳೀಯ ಮುಳುಗುತಜ್ಞರಿಂದ ಮಹಿಳೆಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಅವರು ಅಕ್ಕನ ಮನೆ ಬಿಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ಕೆಲದಿನಗಳಿಂದ ತಂಗಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಮುಂಜಾನೆ 5 ಗಂಟೆಯ ವೇಳೆ ಮನೆಯಲ್ಲಿ ಇಲ್ಲದೆ ಕಾಣೆಯಾಗಿದ್ದಾರೆ.
ಮನೆಯವರು ಹುಡುಗಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಯ ಮೇಲೆ ಮಹಿಳೆ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿದೆ. ಹಾಗಾಗಿ ಅವರು ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಆ ಮಹಿಳೆ ಅವರು ಈ ಹಿಂದೆಯೂ ಮನೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು