78 ವರ್ಷದ ವೃದ್ದೆಯ ಮೇಲೆ ಹೇಯ ಕೃತ್ಯ ; ಅಪರಾಧಿಗೆ ಕಠಿಣ ಶಿಕ್ಷೆ
ಉಡುಪಿಯಲ್ಲಿ ನಡೆದಿದ್ದ ಹೇಯ ಕೃತ್ಯ ; ಸೆಷನ್ಸ್ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ
Team Udayavani, Dec 1, 2022, 6:42 PM IST
ಉಡುಪಿ : ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ದೈಹಿಕ ದೌರ್ಜನ್ಯವೆಸಗಿ ಆಕೆಯ ಬಳಿಯಿದ್ದ ನಗದನ್ನು ಅಪಹರಿಸಿದ್ದ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
ಶಿವಮೊಗ್ಗ ಮೂಲದ ಇರ್ಫಾನ್ ಹೇಯ ಕೃತ್ಯ ನಡೆಸಿದ ಅಪರಾಧಿಯಾಗಿದ್ದು, ಸುದೀರ್ಘ ವಿಚಾರಣೆಯ ಬಳಿಕ ಆರೋಪಿಗೆ ಪ್ರಕರಣದಲ್ಲಿ 10 ವರ್ಷದ ಕಠಿಣ ಸಜೆ, ಐವತ್ತು ಸಾವಿರ ದಂಡ ಹಾಗೂ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಸಾದಾ ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಸಂತ್ರಸ್ತ ವೃದ್ಧೆಗೆ ನೀಡಲು ನ್ಯಾಯಾಲಯ ಆದೇಶ ನೀಡಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇರ್ಫಾನ್ ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ, 2017 ಜೂನ್ 5 ರಂದು ಉಡುಪಿ ಪರಿಸರದಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಹೇಯ ಕೃತ್ಯ ನಡೆಸಿ ಆಕೆಯ ಬಳಿಯಿದ್ದ ರೂ 30,000 ರೂ. ನಗದನ್ನು ಕೂಡ ದೋಚಿಕೊಂಡು ಹೋಗಿದ್ದ ಎನ್ನಲಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್