
ಉಡುಪಿ: ಮಾನಭಂಗ ನಡೆಸಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ
Team Udayavani, Dec 1, 2022, 8:55 PM IST

ಉಡುಪಿ: ಎಂಟು ವರ್ಷಗಳ ಹಿಂದೆ ಕೊಲೆ ಪ್ರಕರಣದ ಸಾಕ್ಷಿಗೆ ಹಲ್ಲೆಗೈದು ಮಾನಭಂಗ ನಡೆಸಿದ ಆರೋಪಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಗುರುವಾರ ಆದೇಶಿಸಿದೆ.
ಧನಂಜಯ್(35) ಶಿಕ್ಷೆಗೆ ಗುರಿಯಾದ ಆರೋಪಿ. 2013ರ ನ.27ರಂದು ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯೋಗೀಶ್ ಎಂಬಾತ ರಂಜಿತಾ ಅವರನ್ನು ಕಡೆಕಾರು ಗ್ರಾಮದ ಪಟೇಲರ ತೋಟ ಎಂಬಲ್ಲಿ ಕೊಲೆ ಮಾಡಿದ್ದನು. ಈ ಬಗ್ಗೆ ರಂಜಿತಾ ಅವರ ಸಂಬಂಧಿ ಹಾಗೂ ನೆರೆಮನೆಯ ಅಶ್ವಿನಿ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಮುಖ ಸಾಕ್ಷಿಯಾಗಿದ್ದರು.
ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿ ಯೋಗೀಶ್‌ನ ಸಂಬಂಧಿ ಧನಂಜಯ್ ಎಂಬಾತ 2014ರ ಸೆ.10ರಂದು ಅಶ್ವಿನಿ ಅವರ ಮನೆಗೆ ಅಕ್ರಮ ವಾಗಿ ಪ್ರವೇಶಿಸಿ, ಕೈಯಿಂದ ಹಲ್ಲೆ ನಡೆಸಿ ಬಟ್ಟೆಯನ್ನು ಹರಿದು ಮಾನಕ್ಕೆ ಕುಂದು ಉಂಟು ಮಾಡಿದ್ದನು. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ರಂಜಿತಾಳ ಕೊಲೆ ಪ್ರಕರಣದಲ್ಲಿ ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ಆರೋಪಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರೋಪಿಗೆ ಅಕ್ರಮ ಪ್ರವೇಶಕ್ಕೆ 6ತಿಂಗಳು ಸಾದಾ ಜೈಲು ಶಿಕ್ಷೆ, ಹಲ್ಲೆಗೆ 6 ತಿಂಗಳು ಸಾದಾ ಜೈಲುಶಿಕ್ಷೆ, ಮಾನಭಂಗಕ್ಕೆ 3ವರ್ಷ ಜೈಲುಶಿಕ್ಷೆ ಮತ್ತು 20ಸಾವಿರ ರೂ. ದಂಡ, ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ 6 ತಿಂಗಳು ಜೈಲು ಶಿಕ್ಷೆ ಮತ್ತು ಕೊಲೆ ಬೆದರಿಕೆಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಷನ್ ಜಯರಾಮ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರ್ವ ಆರೋಗ್ಯ ಮಾತಾ ದೇವಾಲಯ :ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ

ಜಾಗತಿಕವಾಗಿ ಕನ್ನಡ ಸಾಹಿತ್ಯ ಹೆಸರು ಗಳಿಸಿದರೂ ಪುಸ್ತಕೋದ್ಯಮ ಬಡಕಲು; ಮುನಿಯಾಲು ಗಣೇಶ್ ಶೆಣೈ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
