
ಚೆಕ್‌ಪೋಸ್ಟ್‌ಗಳಲ್ಲಿ ಕಣ್ತಪ್ಪಿಸಿ ಬಂದರೆ ಕ್ವಾರಂಟೈನ್: ಡಿಸಿ
Team Udayavani, May 13, 2020, 11:22 AM IST

ಉಡುಪಿ: ಕೋವಿಡ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಡುವೆ ಗಡಿ ಭಾಗಗಳಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ತಪ್ಪಿಸಿಕೊಂಡು ಬಂದರೆ ಅಂತಹವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಒಳ ಪಡಿಸುತ್ತೆವೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಗಡಿಭಾಗದ ಚೆಕ್‌ಪೋಸ್ಟ್ ಗಳಲ್ಲಿ ಯಾರೂ ನಿಯಮ ಮೀರಿ ಅನುಮತಿಯಿಲ್ಲದೆ ಜಿಲ್ಲೆಯ ಒಳಗೆ ಬರುವುದಕ್ಕೆ, ಹೊರ ಹೋಗುವುದಕ್ಕೆ ಅವಕಾಶವಿಲ್ಲ. ಅಂತಹವರನ್ನು
ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಹಳ್ಳಿಗಳಲ್ಲಿ ಗ್ರಾ.ಪಂ ಕಾರ್ಯಪಡೆಗೆ ನಗರ ಪ್ರದೇಶದಲ್ಲಿ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಕ್ವಾರಂಟೈನ್‌ಗೆ ಒಳಪಡಿಸುವ ಜವಾಬ್ದಾರಿ ಹೊರುತ್ತಾರೆ. ಹೊರ ರಾಜ್ಯಗಳಿಂದ ಯಾರಾದರೂ ತಪ್ಪಿಸಿ ಬಂದಿದ್ದರೆ ಸಾರ್ವಜನಿಕರು ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಬಂದ ತತ್‌ಕ್ಷಣ ಕ್ರಮ ಕೈಗೊಳ್ಳಲಾಗುವುದು. ಕಣ್ತಪ್ಪಿಸಿ ಬಂದವರ ಆರೋಗ್ಯ ಪರೀಕ್ಷೆ ನಡೆಸಿ ಕ್ವಾರಂಟೈನ್ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
