ಶಾಲೆ ಮೇಲ್ಛಾವಣಿ, ಫುಟ್‌ಪಾತ್‌ನಲ್ಲಿ ಮಲಗಿದ ಅಭ್ಯರ್ಥಿಗಳು

Team Udayavani, Mar 20, 2021, 5:30 AM IST

Candidates sleeping in the footpath

ಉಡುಪಿ: ಭಾರತೀಯ ಸೇನೆಗೆ ಸೇರಲು ನಿತ್ಯ ಉಡುಪಿಗೆ ಆಗಮಿಸು ತ್ತಿರುವ ಸಾವಿರಾರು ಮಂದಿ ಅಭ್ಯರ್ಥಿಗಳು ಪಾರ್ಕ್‌, ಫ‌ುಟ್‌ಪಾತ್‌, ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಅಭ್ಯರ್ಥಿಗಳಿಗೆ ಸರಿಯಾದ ವಸತಿ ವ್ಯವಸ್ಥೆ ಮಾಡಿಲ್ಲ ಎನ್ನುವ ದೂರು ಕೇಳಿಬರುತ್ತಿದೆ.

ಭಾರತೀಯ ಸೇನೆಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಮೂರು ದಿನ ಪೂರ್ಣಗೊಂಡಿದೆ. ನಗರಕ್ಕೆ ನಿತ್ಯ 3000-4000 ಅಭ್ಯರ್ಥಿಗಳು ಆಗಮಿಸುತ್ತಿದ್ದಾರೆ. ಇವರು ಆರ್ಥಿಕ ಸಮಸ್ಯೆಯಿಂದಾಗಿ ಎಲ್ಲೆಂದರಲ್ಲಿ ಆಶ್ರಯ ಪಡೆದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರ್ಯಾಲಿಯ ದೈಹಿಕ ಪರೀಕ್ಷೆ ಮುಂಜಾನೆ 4.30ರಿಂದ ಪ್ರಾರಂಭವಾಗುವುದರಿಂದ ಅಭ್ಯರ್ಥಿಗಳು ನೀಡಿದ ದಿನಾಂಕದಿಂದ ಮುಂಚಿತವಾಗಿಯೇ ಬರುತ್ತಿದ್ದಾರೆ. ವಸತಿ ವ್ಯವಸ್ಥೆ ಬಗ್ಗೆ ತಿಳಿಯದೆ ಯುವಕರು ಬೆಳಗ್ಗೆ ಸ್ನಾನ, ಕುಡಿಯುವ ನೀರಿಗೂ ರಸ್ತೆಯ ತುಂಬಾ ಅಲೆದಾಡುತ್ತಿರುವ ದೃಶ್ಯಗಳು ಕಂಡು ಬಂತು.

ಸ್ವತ್ಛತೆಗೆ ಪ್ರಾಮುಖ್ಯ

ನಗರಸಭೆಯ ವತಿಯಿಂದ 20 ಮಂದಿ ಪೌರಕಾರ್ಮಿಕರು ಸ್ವತ್ಛತೆಗೆ ಗಮನ ಹರಿಸುತ್ತಿದ್ದಾರೆ. ಅಭ್ಯರ್ಥಿಗಳಿಗೆ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣದ ಒಳಗೆ ಮತ್ತು ಹೊರಭಾಗದಲ್ಲಿ 10 ಬಯೋ ಡೈಜೆಸ್ಟರ್‌ ಶೌಚಾಲಯ ಮತ್ತು 10 ಮೊಬೈಲ್‌ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಆರೋಗ್ಯಾಧಿಕಾರಿ ಕರುಣಾಕರ್‌ ತಿಳಿಸಿದರು.

ಮಲಗಲು ವ್ಯವಸ್ಥೆ ಇಲ್ಲ

ಪರೀಕ್ಷೆಗೆ ಮುಂಜಾನೆಯೇ ಹಾಜರಾಗಬೇಕು. ಆದ್ದ‌ರಿಂದ ಮಾ. 19ರ ಬೆಳಗ್ಗೆ ಬೇಗನೆ ಉಡುಪಿಗೆ ಬಂದಿದ್ದೇನೆ. ಊಟ- ಕುಡಿಯಲು ನೀರಿನ ವ್ಯವಸ್ಥೆ ಇದೆ. ಆದರೆ ವಸತಿ ವ್ಯವಸ್ಥೆ ಇಲ್ಲ. 2019ರಲ್ಲಿ ಗದಗದಲ್ಲಿ ನಡೆದ ರ್ಯಾಲಿಯಲ್ಲಿ ಅಲ್ಲಿನ ದೇವಸ್ಥಾನದ ಛತ್ರಗಳಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಇಲ್ಲಿ ಮಾಡಿದ ಬಗ್ಗೆ ಮಾಹಿತಿ ಇಲ್ಲ. ಪಾರ್ಕ್‌ ನಲ್ಲೇ ಮಲಗಬೇಕೆಂದಿದ್ದೇನೆ ಎಂದು ಅಭ್ಯರ್ಥಿಯೊಬ್ಬರು ತಿಳಿಸಿದರು. ರ್ಯಾಲಿಗೆ ಬಂದ ಯುವಕರು ಶಾಲೆಯೊಂದರ ಹೆಂಚಿನ ಮಹಡಿ ಮೂಲಕ ತೆರಳಿ ಶಾಲೆಯ ಆರ್‌ಸಿಸಿ ಮೇಲ್ಛಾವಣಿಯಲ್ಲಿ ಆಶ್ರಯ ಪಡೆದುಕೊಂಡರು. ಈ ಸಂದರ್ಭ ಶಾಲೆಯ ಕೆಲವು ಹೆಂಚುಗಳು ತುಂಡಾಗಿವೆ ಎಂದು ತಿಳಿದುಬಂದಿದೆ.

ವ್ಯವಸ್ಥೆ ಮಾಡಿದೆ

ಭೂ ಸೇನೆ ಸಂಘಟಿಸಿದ ಸೇನಾ ನೇಮಕಾತಿ ರ್ಯಾಲಿಗೆ ಜಿಲ್ಲಾಡಳಿತ ಸಹಕಾರ ನೀಡಿದೆ. ಅಭ್ಯರ್ಥಿಗಳಿಗೆ 6 ಕಡೆಗಳಲ್ಲಿ ಉಳಿಯುವ ವ್ಯವಸ್ಥೆ ಮಾಡಿದೆ. ಯಾವುದೇ ಜಿಲ್ಲೆಯಲ್ಲಿ ಈವರೆಗೆ ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಿಲ್ಲ. ಅದನ್ನು ನಮ್ಮಲ್ಲಿ ಮಾಡಿದ್ದೇವೆ. ಆದರೆ ಕೆಲವರು ಮಧ್ಯ ರಾತ್ರಿ ಬಂದು ಎÇÉೆಂದರಲ್ಲಿ ಮಲಗಿ ಬೆಳಗ್ಗೆ 4 ಗಂಟೆಗೆ ಕ್ರೀಡಾಂಗಣಕ್ಕೆ ಹೋಗುತ್ತಿದ್ದಾರೆ. ಜಿಲ್ಲಾಡಳಿತ ಊಟ ತಿಂಡಿ ಕುಡಿಯುವ ನೀರು ಮತ್ತು ಉಳಿಯುವ ವ್ಯವಸ್ಥೆಯನ್ನು ಸರಕಾರದ ಒಂದು ರೂಪಾಯಿ ಖರ್ಚಿಲ್ಲದೆ ದಾನಿಗಳ ಸಹಕಾರದಿಂದ ಮಾಡಿದೆ.

-ಜಿ.ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.