ಉಡುಪಿಯಲ್ಲಿ ಮತ್ತೊಂದು ಸೋಂಕು ಪ್ರಕರಣ: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೋಂಕು
Team Udayavani, May 18, 2020, 5:54 PM IST
ಉಡುಪಿ: ಜಿಲ್ಲೆಯ ಮಹಿಳೆಯೋರ್ವರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಪ್ರಮಾಣ 11ಕ್ಕೇರಿದೆ. ಮಹಾರಾಷ್ಟ್ರದ ಮುಂಬೈನಿಂದ ಉಡುಪಿಗೆ ಪ್ರಯಣಿಸಿದ್ದ ಗರ್ಭಿಣಿಗೆ ಸೋಂಕು ದೃಢವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ ಜಗದೀಶ್ ಮಾಹಿತಿ ನೀಡಿದ್ದು, ಈ ಮಹಿಳೆ ಕಳೆದ 12ರಂದು ಮುಂಬೈನಿಂದ ಬಸ್ ಮೂಲಕ ಜಿಲ್ಲೆಗೆ ಪ್ರಯಾಣಿಸಿದ್ದರು. ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು ಸದ್ಯ ಈಕೆಗೆ ಸೋಂಕು ದೃಢವಾಗಿರುವ ಕಾರಣ ಈಕೆಯೊಂದಿಗೆ ಈಕೆಯ ಪತಿಯನ್ನೂ ಐಸಲೋಶನ್ ನಲ್ಲಿ ಇಡಲಾಗಿದೆ ಎಂದಿದ್ದಾರೆ.
ಈಕೆ ಪ್ರಯಾಣಿಸಿದ್ದ ಬಸ್ ನಲ್ಲಿ ಇತರ 25 ಜನರು ಪ್ರಯಾಣಿಸಿದ್ದರು. ಸದ್ಯ ಎಲ್ಲರನ್ನೂ ಗುರುತಿಸಲಾಗಿದ್ದು, ನಿಗಾ ಇಡಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಸೋಂಕು ಪ್ರಕರಣ ದೃಢವಾಗಿದೆ. ಇದಿರಂದ ಸೋಂಕಿತರ ಸಂಖ್ಯೆ ಒಟ್ಟು 1246ಕ್ಕೆ ಏರಿಕೆಯಾಗಿದೆ. ಇದುವರೆಗೆ 530 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 37 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾನೆ. ಆದರೆ ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ