ಕಾರ್ಕಳ ನಗರ ಠಾಣೆ ಎಸ್ ಐ ಮಧು ಅವರಿಗೆ ಕೋವಿಡ್ ಪಾಸಿಟಿವ್
Team Udayavani, May 4, 2021, 4:01 PM IST
ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್ ಐ ಮಧು ಬಿ.ಇ ರವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಇತ್ತೀಚೆಗೆ ಶೀತ ಕಾಣಿಸಿಕೊಂಡಿತ್ತು. ಬಳಿಕ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸೋಮವಾರ ರಾತ್ರಿ ಪರೀಕ್ಷಾ ವರದಿ ಬಂದಿದ್ದು, ಪಾಸಿಟಿವ್ ವರದಿ ಬಂದಿದೆ.
ಭಾನುವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಾಲೂಕು ಆಸ್ಪತ್ರೆಗೆ ಆಗಮಿಸಿದ್ದು, ಈ ವೇಳೆ ಕರ್ತವ್ಯ ನಿರ್ವಹಿಸಿದ್ದರು. ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಠಾಣೆಯ ಮಹಿಳಾ ಸಿಬ್ಬಂದಿಯೋರ್ವರಿಗೂ ಎರಡು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿದ್ದು. ವಾಸಿಟಿವ್ ವರದಿ ಬಂದಿದೆ.