Covid: ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ: ಪ್ರತಿನಿತ್ಯ ತಪಾಸಣೆಗೆ ಸಿದ್ಧತೆ
Team Udayavani, Dec 22, 2023, 6:30 AM IST
ಉಡುಪಿ: ನೆರೆಯ ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರದಿಂದ ಜಿಲ್ಲಾಸ್ಪತ್ರೆ ಸಹಿತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತರ ತಪಾಸಣೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಈಗಾಗಲೇ ಆರೋಗ್ಯ ಇಲಾಖೆಯೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಪ್ರಕರಣಗಳು ಕಂಡುಬಂದ ಬಳಿಕ ಅಥವಾ ಅದಕ್ಕೂ ಮುನ್ನ ಗಡಿಭಾಗಗಳಲ್ಲಿ ತಪಾಸಣೆ ನಡೆಸುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾರ್ಗಸೂಚಿ ಪಾಲನೆ
ಆರೋಗ್ಯ ಇಲಾಖೆ ನೀಡುತ್ತಿರುವ ಎಲ್ಲ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಸೋಂಕು ಲಕ್ಷಣವುಳ್ಳವರನ್ನು ತಪಾಸಣೆ ಮಾಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಗಿದೆ. ಆಕ್ಸಿಜನ್ ಪ್ಲಾಂಟ್‌ಗಳಲ್ಲಿ ಆಕ್ಸಿಜನ್ ದಾಸ್ತಾನು ಇರಿಸಲಾಗಿದೆ. ವೆಂಟಿಲೇಟರ್‌ಗಳ ಪರಿಶೀಲನೆ ನಡೆದಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಜನರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್ ತಿಳಿಸಿದ್ದಾರೆ.
ಇದನ್ನೂ ಓದಿ: Tragedy: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ