ಪರಿಸರ ದಿನದಂದೇ ಮರಗಳಿಗೆ ಕೊಡಲಿ

50-60 ವರ್ಷಗಳಷ್ಟು ಹಳೆಯ ಮರಗಳು; ಪರಿಸರ ಪ್ರೇಮಿಗಳ ಆಕ್ರೋಶ

Team Udayavani, Jun 6, 2020, 7:27 AM IST

ಪರಿಸರ ದಿನದಂದೇ ಮರಗಳಿಗೆ ಕೊಡಲಿ

ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಕಡಿದು ಹಾಕಲಾದ ಮರ.

ಉಡುಪಿ: ಅರಣ್ಯ ಇಲಾಖೆ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಗಿಡಗಳನ್ನು ನೆಟ್ಟು ಒಂದೆಡೆ ಪರಿಸರ ಸಂರಕ್ಷಿಸುತ್ತಿದ್ದು, ಇನ್ನೊಂದೆಡೆ 50-60 ವರ್ಷದ ಹಳೆ ಮರಗಳನ್ನು ಕಡಿದು ಪರಿಸರ ನಾಶ ಮಾಡುತ್ತಿರುವುದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

11 ಮರ ತೆರವಿಗೆ ಮನವಿ
ಉಡುಪಿ ನಗರದ ಮಧ್ಯ ಭಾಗ ದಲ್ಲಿರುವ ಬನ್ನಂಜೆಯಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಇಲ್ಲಿನ ಬೃಹತ್‌ ಮರಗಳು ವಾಹನಗಳ ಸಂಚಾರಕ್ಕೆ ಅಡಚಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅರಣ್ಯ ಇಲಾಖೆಗೆ 11 ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿ ದ್ದರು. ಈ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ಅರಣ್ಯ ಇಲಾಖೆ ಸಿಬಂದಿ ಕಳೆದ ಮೂರು ದಿನಗಳಿಂದ ನಿಲ್ದಾಣದ ಸುತ್ತಲಿನ ಮರಗಳ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ,

ಅರಣ್ಯ ಇಲಾಖೆ ಪರಿಸರ ದಿನಾಚರಣೆ ಅಂಗವಾಗಿ ನಗರದ ವಿವಿಧ ಕಡೆ 500ಕ್ಕೂ ಅಧಿಕ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪರಿಸರ ದಿನಾಚರಣೆಯ ಅರಿವಿಲ್ಲದೇ ಇಲಾಖೆಯವರು ಸುಮಾರು 50-60 ವರ್ಷದಿಂದ ಬದುಕಿದ್ದ ಮರಗಳನ್ನು ಬುಡ ಸಮೇತವಾಗಿ ಕಡಿದಿದ್ದಾರೆ. ಈ ಹಿಂದೆ ಬುಡ ಸಮೇತ ಸ್ಥಳಾಂತರಿಸಲಾದ ಮರಗಳು ಸತ್ತು ಹೋಗಿರುವ ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಗ ಳನ್ನು ಸ್ಥಳಾಂತರಿಸುವ ಕೆಲಸಕ್ಕೆ ಹೋಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪರಿಸರ ಪ್ರೇಮಿಗಳ ಆಕ್ರೋಶ!
ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮರಗಳನ್ನು ನೆಟ್ಟು ಪರಿಸರ ಉಳಿಸುವ ಭಾಷಣ ಮಾಡಿದರೆ ಸಾಲದು. ಪರಿಸರ ಅಮೂಲ್ಯವಾದ ಸಂಪತ್ತು. ಅದನ್ನು ಸಂರಕ್ಷಿಸುವ ಕೆಲಸದಲ್ಲಿ ಅಧಿಕಾರಿಗಳು ಪ್ರಮಾಣಿಕವಾಗಿ ತೊಡಗಿಸಿಕೊಳ್ಳಬೇಕು. ಪರಿಸರ ದಿನದಂದು ಮರಗಳನ್ನು ಕಡಿಯುವ ಮೂಲಕ ಅರಣ್ಯ ಸಂರಕ್ಷಕರು ಭಕ್ಷಕರಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರ ಬೆಳೆಸುವ ಗುರಿ
ಕೆಎಸ್‌ಆರ್‌ಟಿಸಿಯಿಂದ 11 ಮರಗಳ ತೆರವಿಗೆ ಮನವಿ ಬಂದಿತ್ತು. ಮರಗಳ ತೆರವಿನ ಕೆಲಸ ನಾಲ್ಕೈದು ದಿನಗಳಿಂದ ನಡೆಯುತ್ತಿದೆ. ನಮಗೆ ಪರಿಸರ ದಿನಾಚರಣೆಯಂದು ಕಡಿಯುವ ಇರಾದೆ ಇರಲಿಲ್ಲ. ಆದರೆ ಒಮ್ಮೆ ನೀಡಿದ ಆದೇಶವನ್ನು ತಡೆಯಲು ಸಾಧ್ಯವಾಗಿಲ್ಲ. ಒಂದು ಮರದ ಬದಲಾಗಿ 10 ಮರಗಳನ್ನು ಬೆಳೆಸುವ ಗುರಿ ನಮ್ಮದು.
– ಕ್ಲಿಫ‌ರ್ಡ್‌ ಲೋಬೋ,  ಅರಣ್ಯಾಧಿಕಾರಿ, ಉಡುಪಿ

ನಾಚಿಕೆಗೇಡು
ಅರಣ್ಯ ಇಲಾಖೆ ಪರಿಸರ ದಿನದಂದು ಮರ ಕಡಿ ಯುವುದು ನಾಚಿಕೆಗೇಡು. ಈ ಹಿಂದೆ ಅರಣ್ಯ ಇಲಾಖೆಗೆ ಮರ ಗಳನ್ನು ಕಡಿಯದಂತೆ ಮನವಿ ಮಾಡಲಾಗಿತ್ತು. ಮರಗಳ ಕಡಿಯುವ ಬದಲಾಗಿ ಸಂಘ ಸಂಸ್ಥೆಗಳಿಗೆ ಹೇಳಿದರೆ ಅವರೇ ಮುಂದೆ ಬಂದು ಮರಗಳನ್ನು ಸ್ಥಳಾಂತರಿಸುತ್ತಿದ್ದರು.
– ಪ್ರೊ| ಬಾಲಕೃಷ್ಣ ಮುಧ್ದೋಡಿ, ಪರಿಸರ ಪ್ರೇಮಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.