ಅಪಾಯಕಾರಿ ಕಿರುಸೇತುವೆ: ಸುಸಜ್ಜಿತ ಸೇತುವೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ

ಕಾಂತಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಂತಾವರ ಮತ್ತು ಬೋಳ ಗ್ರಾಮ ಸಂಪರ್ಕಿಸುವ ಸೇತುವೆ

Team Udayavani, Jan 19, 2020, 12:09 AM IST

meg-24

ಕಾಂತಾವರ: ಕಾಂತಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಂತಾವರ ಗ್ರಾಮ ಹಾಗೂ ಬೋಳ ಗ್ರಾಮ ಸಂಪರ್ಕಿಸುವ ಸೇತುವೆಯು ಕಿರಿದಾಗಿದ್ದು, ಅಪಾಯಕಾರಿಯಾಗಿದೆ. ಕಾಂತಾವರದ ಬೇಲಾಡಿಯ ಕಿರು ಸೇತುವೆಯು ಮಂಜರಪಲ್ಕೆ ಬೆಳುವಾಯಿ ಸಂಪರ್ಕಿಸುವ ಮುಖ್ಯ ರಸ್ತೆಯಾಗಿದ್ದು, ಬೇಲಾಡಿ ಬಳಿಯ ಕಿರು ಸೇತುವೆಯು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ.

ಬೇಲಾಡಿ ಕಾಂತಾವರ ಮುಖ್ಯ ರಸ್ತೆಯು ಅಗಲೀಕರಣಗೊಂಡಿದ್ದು, ಸೇತುವೆ ಮಾತ್ರ ಕಿರಿದಾಗಿದ್ದು ವಾಹನ ಸವಾರರು ಅತೀ ವೇಗವಾಗಿ ಸಂಚರಿಸಿದಲ್ಲಿ ಕಿರಿದಾದ ಸೇತುವೆಯನ್ನು ಗಮನಿಸದೆ ಅವಘಡ ಸಂಭವಿಸಬಹುದಾಗಿದೆ. ಸೇತುವೆ ಕಿರಿದಾ ಗಿದ್ದು ಎರಡು ವಾಹನಗಳು ಏಕಕಾಲಕ್ಕೆ ಸಂಚರಿಸುವುದು ಕಷ್ಟ ಸಾಧ್ಯವಾಗಿದೆ. ಎದುರಿನಿಂದ ವಾಹನ ಬಂದಲ್ಲಿ ಮತ್ತೂಂದು ಪಾರ್ಶ್ವದಲ್ಲಿರುವ ವಾಹನವು ನಿಲ್ಲಿಸಬೇಕಾಗುತ್ತದೆ.

ಸೇತುವೆಯ ಎರಡು ಪಾರ್ಶ್ವಗಳು ಇಳಿಜಾರಿನಿಂದ ಕೂಡಿದ್ದು ವಾಹನಗಳ ವೇಗವು ಅತಿಯಾಗಿರುವುದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಮೂಡುಬಿದಿರೆ ಸಂಪರ್ಕಿ ಸಲು ಅತೀ ಹತ್ತಿರ ರಸ್ತೆ ಮಂಜರಪಲ್ಕೆಯಿಂದ ಬೋಳ ಬೇಲಾಡಿ ಕಾಂತಾವರ ಮಾರ್ಗವಾಗಿ ಬೆಳುವಾಯಿ ಪೇಟೆ ಹಾಗೂ ಮೂಡುಬಿದಿರೆ ಮುಖ್ಯ ಪೇಟೆ ಯನ್ನು ಸಂಪರ್ಕಿಸಲು ಅತೀ ಹತ್ತಿರದ ರಸ್ತೆಯಾದ ಕಾರಣ ಬಹುತೇಕ ವಾಹನಗಳು ಈ ರಸ್ತೆಯನ್ನೇ ಅವಲಂಬಿಸಿವೆ. ಕಾಂತಾವರ ಬೇಲಾಡಿ ಗ್ರಾಮದ ಗ್ರಾಮಸ್ಥರು ಪಡುಬಿದ್ರಿ, ಬೆಳ್ಮಣ್‌ ಸಂಪರ್ಕಿಸಲು ಅತೀ ಮುಖ್ಯ ರಸ್ತೆಯಾದ ಕಾರಣ ಬಹುತೇಕ ಮಂದಿ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ.

ಈ ಸೇತುವೆ ಅಭಿವೃದ್ಧಿ ಕುರಿತು ಗ್ರಾಮಸ್ಥರು ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಲಾದರೂ ಕಿರು ಸೇತುವೆಗೆ ಮಾತ್ರ ಮುಕ್ತಿ ಇನ್ನೂ ಕಂಡಿಲ್ಲ. ಗ್ರಾಮಸ್ಥರು ಹಲವಾರು ಗ್ರಾಮಸಭೆಗಳಲ್ಲಿ ಕಿರು ಸೇತುವೆ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದರೂ ಸೇತುವೆ ಕಾಮಗಾರಿ ಮಾತ್ರ ಮರೀಚಿಕೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇನ್ನಾದರೂ ಬೇಲಾಡಿ ಗ್ರಾಮಸ್ಥರ ಹಲವಾರು ವರ್ಷಗಳ ಬೇಡಿಕೆಯು ಈಡೇರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಬಿರುಕು ಬಿಟ್ಟ ಸೇತುವೆ
ಕಿರು ಸೇತುವೆಯು ಬಹಳ ಹಳೆಯ ಸೇತುವೆಯಾಗಿದ್ದು ಸೇತುವೆಯ ತಳಭಾಗದ ಕಲ್ಲುಗಳು ನೀರಿನ ರಭಸಕ್ಕೆ ಕೆಳಕ್ಕೆ ಜಾರಿದ್ದು, ಸೇತುವೆಯು ಕೆಲವೆಡೆ ಬಿರುಕು ಬಿಟ್ಟಿದೆ. ಸೇತುವೆಯ ಮೇಲ್ಭಾಗದ ತಡೆಗೋಡೆಯು ಮುರಿದು ಬಿದ್ದಿದೆ.

ಶೀಘ್ರ ಕಾಮಗಾರಿ
ಬೇಲಾಡಿ ಕಿರು ಸೇತುವೆ ವಿಸ್ತರಣೆ ಕುರಿತು ಶಾಸಕರ ಗಮನಕ್ಕೆ ತಂದಿದ್ದು ಶಾಸಕರು ವಿಶೇಷ ಮುತುವರ್ಜಿ ವಹಿಸಿ 70ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು ಟೆಂಡರ್‌ ಪೂರ್ಣಗೊಂಡಿದೆ. ಸೇತುವೆ ನಿರ್ಮಿಸುವ ಸ್ಥಳದ ಮಣ್ಣಿನ ತಪಾಸಣೆಗೆ ಕೊಂಡೊಯ್ದಿದ್ದು ವರದಿ ಕೈ ಸೇರಿದ ಬಳಿಕ ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು.
-ಪ್ರವೀಣ್‌ ಕೋಟ್ಯಾನ್‌, ತಾ.ಪಂ. ಸದಸ್ಯರು

ಬಹು ದಶಕಗಳ ಬೇಡಿಕೆ
ಬೇಲಾಡಿ ಗ್ರಾಮದ ಬಹುಬೇಡಿಕೆಯಾದ ಕಿರು ಸೇತುವೆಯು ಸ್ಥಳೀಯರಿಗೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರ ಸೇತುವೆ ಅಭಿವೃದ್ಧಿ ಕಾಮಗಾರಿಯು ನಡೆಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಬಹು ದಶಕಗಳ ಬೇಡಿಕೆಯನ್ನು ಈಡೇರಿಸುವಂತಾಗಬೇಕು.
-ಪ್ರಭಾಕರ ಕುಲಾಲ್‌, ಅಧ್ಯಕ್ಷರು,  ಪುಂಡರೀಕ ವಿಷ್ಣುಮೂರ್ತಿ ಭಜನ ಮಂಡಳಿ ಬೇಲಾಡಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.