ಕಂಟೈನ್‌ಮೆಂಟ್‌ ವ್ಯಾಪ್ತಿ ಹೆಚ್ಚಳಕ್ಕೆ ಆದೇಶ

ಕೋವಿಡ್ ಪ್ರಕರಣ ನಿಯಂತ್ರಿಸಲು ಡಿಸಿ ಕಟ್ಟುನಿಟ್ಟಿನ ಸೂಚನೆ

Team Udayavani, Jul 25, 2020, 9:25 AM IST

ಕಂಟೈನ್‌ಮೆಂಟ್‌ ವ್ಯಾಪ್ತಿ ಹೆಚ್ಚಳಕ್ಕೆ ಆದೇಶ

ಉಡುಪಿ: ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್‌ಮೆಂಟ್‌ ವ್ಯಾಪ್ತಿ ಯನ್ನೂ ಹೆಚ್ಚಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.  ನಗರ ಪ್ರದೇಶದಲ್ಲಿ ಕೋವಿಡ್ ಕಂಡು ಬಂದರೆ 1 ಕಿ.ಮೀ.ಗಳಷ್ಟು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪೂರ್ತಿ ಗ್ರಾಮವನ್ನೇ ಕಂಟೈನ್‌ಮೆಂಟ್‌ ವಲಯವೆಂದು ಪರಿಗಣಿಸಲಾಗುತ್ತದೆ.

ಕಾಟಾಚಾರಕ್ಕಷ್ಟೇ ಸೀಮಿತಗೊಂಡಿದ್ದ ಕಂಟೈನ್‌ಮೆಂಟ್‌ ವ್ಯಾಪ್ತಿ
ಜಿಲ್ಲೆಯಲ್ಲಿ ಪಾಸಿಟಿವ್‌ ರೋಗಲಕ್ಷಣ ಕಂಡುಬರುವ ರೋಗಿಯ ಮನೆ, ಅಂಗಡಿ, ಅಪಾರ್ಟ್‌ಮೆಂಟ್‌ ಸಹಿತ ಆ ಪ್ರದೇಶವನ್ನೆಲ್ಲ ಕಂಟೈನ್‌ಮೆಂಟ್‌ ಝೋನ್‌ ಮಾಡಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ಇಷ್ಟರವರೆಗೆ ಮನೆಗಳನ್ನಷ್ಟೇ ಸೀಲ್‌ಡೌನ್‌ ಮಾಡಿ ಸುಮ್ಮನಾಗುತ್ತಿದ್ದರು. ಕಂಟೈನ್‌ಮೆಂಟ್‌ ಝೋನ್‌ ಕುರಿತು ಸ್ಥಳೀಯರು ಸಹಿತ ಸಾರ್ವಜನಿಕರಿಗೆ ಮಾಹಿತಿಯನ್ನೇ ನೀಡುತ್ತಿರಲಿಲ್ಲ. ಅಧಿಕಾರಿಗಳಲ್ಲಿಯೂ ನಿಖರ ಮಾಹಿತಿ ಇರುತ್ತಿರಲಿಲ್ಲ. ಈ ಎಲ್ಲ ಅಂಶಗಳು ಕೂಡ ಕೊರೊನಾ ಉಲ್ಬಣಗೊಳ್ಳಲು ಕಾರಣ ಎನ್ನಲಾಗುತ್ತಿದೆ.

ಜಿಲ್ಲೆಯಲ್ಲಿ 490 ಕಂಟೈನ್‌ಮೆಂಟ್‌ ವಲಯಗಳು
ಜಿಲ್ಲೆಯಲ್ಲಿ ಒಟ್ಟು 1,315 ಕಂಟೈನ್‌ಮೆಂಟ್‌ ವ್ಯಾಪ್ತಿಗಳನ್ನು ಮಾಡಲಾಗಿದೆ. 490 ಪ್ರಸ್ತುತ ಸಕ್ರಿಯವಾಗಿದೆ. ಆದರೆ ಹೆಚ್ಚಿನ ಕಂಟೈನ್‌ಮೆಂಟ್‌ ಝೋನ್‌ ಕುರಿತು ತುಂಬಾ ವಿಳಂಬವಾಗಿ ಅಧಿಕೃತ ಸೂಚನೆ ಹೊರ ಬೀಳುತ್ತಿದೆ. ಅದುವರೆಗೂ ಈ ಪ್ರದೇಶದಲ್ಲಿ ಎಂದಿನ ಜನಸಂಚಾರ, ವಹಿವಾಟು ನಡೆಯುತ್ತಿರುತ್ತದೆ. ಈ ಮೂಲಕ ಕೊರೊನಾ ಜನರಿಂದ ಜನರಿಗೆ ಹರಡುತ್ತಲೇ ಇರುತ್ತದೆ.

ನಿಯಮ ಉಲ್ಲಂಘಿಸಿದರೆ ಕ್ರಮ
ಹೆಚ್ಚು ಪ್ರಕರಣಗಳು ದೃಢವಾಗುತ್ತಿರುವ ಕಾರಣದಿಂದಾಗಿ ಇನ್ನು ಮಂದೆ ಸೋಂಕಿತ ವ್ಯಕ್ತಿ ಪತ್ತೆಯಾದ ಪ್ರದೇಶವನ್ನೇ ಸೀಲ್‌ಡೌನ್‌ ಮಾಡಬೇಕು. ನಿಯಂತ್ರಣ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಬಹಳಷ್ಟು ದಿನಗಳಿಂದ ಹೇಳುತ್ತಿದ್ದರೂ ಅದರ ಪಾಲನೆ ಮಾತ್ರ ಜಿಲ್ಲೆಯಲ್ಲಿ ಆಗುತ್ತಿರಲಿಲ್ಲ. ಇನ್ನು ಮುಂದೆ ಕೋವಿಡ್‌ನಿಂದ ಯಾರಾದರೂ ಮೃತಪಟ್ಟರೆ ನಿಯಂತ್ರಿತ ವಲಯ ರಚನೆ ಮಾಡುವ ಅಧಿಕಾರಿಗಳ ಮೇಲೆ ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಇನ್ಸಿಡೆಂಟ್‌ ಕಮಾಂಡರ್‌ಗಳ ನೇಮಕ
ಇದುವರೆಗೆ ಜಿಲ್ಲೆಯ ಎಲ್ಲ ನಿಯಂತ್ರಿತ ವಲಯಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿಗಳೇ ಇನ್ಸಿಡೆಂಟ್‌ ಕಮಾಂಡರ್‌ ಆಗಿದ್ದರು. ಈಗ ಸರಕಾರ ಮತ್ತೆ ಮೂವರು ಇನ್ಸಿಡೆಂಟ್‌ ಕಮಾಂಡರ್‌ಗಳನ್ನು ನಿಯೋಜಿಸಲು ಅನುಮತಿ ನೀಡಿದೆ. ಕಂಟೈನ್‌ಮೆಂಟ್‌ ವ್ಯಾಪ್ತಿ ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ.
-ಜಿ.ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.