ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 4,091 ಮಕ್ಕಳಲ್ಲಿ ಅಪೌಷ್ಟಿಕತೆ

Team Udayavani, Aug 28, 2020, 5:56 AM IST

ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ

ಉಡುಪಿ: ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ಕೊರತೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಪ್ರಸಕ್ತ ಸಾಲಿನ ಅಪೌಷ್ಟಿಕ ಮಕ್ಕಳ ತುಲನಾತ್ಮಕ ಪಟ್ಟಿಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳಲ್ಲಿನ ಅಪೌಷ್ಟಿಕತೆ ಶೇ. 1.75ರಷ್ಟು ಇಳಿಕೆಯಾಗಿದೆ. ಜುಲೈ ಅಂತ್ಯಕ್ಕೆ ಉಭಯ ಜಿಲ್ಲೆಗಳಲ್ಲಿ ಒಟ್ಟು 4,091 ಮಕ್ಕಳು ಅಪೌಷ್ಟಿಕತೆಯಿಂದ ಬಳುತ್ತಿದ್ದಾರೆ.

ರಾಜ್ಯದಲ್ಲಿ 2019ರ ಜುಲೈಯಲ್ಲಿ ಒಟ್ಟು 14,30,483 ಮಕ್ಕಳ ಪರೀಕ್ಷೆ ಮಾಡಿದ್ದು, ಅದರಲ್ಲಿ 21,303 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ಪ್ರಸ್ತಕ ಸಾಲಿನಲ್ಲಿ 2,89,338 ಮಕ್ಕಳ ಪರೀಕ್ಷೆ ಮಾಡಿದ್ದು, 20,350 ಮಕ್ಕಳು ಅಪೌಷ್ಟಿಕತೆ ಎದುರಿಸುತ್ತಿದ್ದಾರೆ. ಒಂದು ವರ್ಷದಲ್ಲಿ ರಾಜ್ಯದ ಮಕ್ಕಳಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ. 5.54ರಷ್ಟು ಕಡಿಮೆಯಾಗಿದೆ.

ಪೌಷ್ಟಿಕಾಂಶಯುಕ್ತ ಆಹಾರ
ಕರಾವಳಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಲ ಮಕ್ಕಳಿಗೆ ವಾರದಲ್ಲಿ 5 ದಿನ ಹಾಲು, ನೆಲಗಡಲೆ ಮಿಠಾಯಿ, 2 ದಿನ ಮೊಟ್ಟೆ, ವಾರದಲ್ಲಿ 6 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ (ಪೌಷ್ಟಿಕ ಆಹಾರ) ನೀಡಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರದಲ್ಲಿ 5 ದಿನ ಮೊಟ್ಟೆ, 200 ಮಿ.ಲೀ. ಹಾಲು, ನೆಲಗಡಲೆ ಮಿಠಾಯಿ, 6 ದಿನ ಬಿಸಿಯೂಟ ಕೊಡಲಾಗುತ್ತಿದೆ. ಇಲಾಖೆಯ ವತಿಯಿಂದ ವಾರ್ಷಿಕ ಸುಮಾರು 2 ಸಾವಿರ ರೂ. ಮೊತ್ತದ ನ್ಯೂಟ್ರಿಮಿಕ್ಸ್‌ ಪೌಷ್ಟಿಕ ಆಹಾರದ ಪೊಟ್ಟಣವನ್ನು 3 ವರ್ಷದೊಳಗಿನ ಅಪೌಷ್ಟಿಕ ಮಕ್ಕಳ ಮನೆಗೆ ಕಳುಹಿಸಿಕೊಡಲಾಗುತ್ತಿದೆ.

ಉಡುಪಿಯಲ್ಲಿ 1,351
ಉಡುಪಿ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆಯ ಪ್ರಮಾಣ ತೀರಾ ಕಡಿಮೆ ಇದೆ. 2019ರ ಜುಲೈಯಲ್ಲಿ ಜಿಲ್ಲೆಯಲ್ಲಿ 54,557 ಮಕ್ಕಳನ್ನು ಪರೀಕ್ಷೆ ಮಾಡಲಾಗಿದ್ದು, 2,006 ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಿತ್ತು. ಪ್ರಸ್ತಕ ಸಾಲಿನಲ್ಲಿ 60,777 ಮಕ್ಕಳನ್ನು ಪರೀಕ್ಷಿಸಿದ್ದು, 1,351 ಮಕ್ಕಳಲ್ಲಿ ಅಪೌಷ್ಟಿಕತೆ ಪತ್ತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಕ್ಕಳಲ್ಲಿನ ಅಪೌಷ್ಟಿಕತೆ ಪ್ರಮಾಣ ಶೇ. 1.45 ಇಳಿಕೆಯಾಗಿದೆ.

ದ.ಕ.ದಲ್ಲಿ 2,740
2019ರ ಜುಲೈಯಲ್ಲಿ ದ.ಕ. ಜಿಲ್ಲೆಯಲ್ಲಿ 91,674 ಮಕ್ಕಳನ್ನು ಪರೀಕ್ಷೆ ಮಾಡಲಾಗಿತ್ತು. 2,800 ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದಿತ್ತು. ಪ್ರಸ್ತಕ ಸಾಲಿನಲ್ಲಿ 99,542 ಮಕ್ಕಳನ್ನು ಪರೀಕ್ಷೆ ಮಾಡಿದ್ದು, 2,740 ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಲ್ಲಿಯ ಅಪೌಷ್ಟಿಕತೆ ಪ್ರಮಾಣ ಶೇ. 0.30ರಷ್ಟು ಕಡಿಮೆಯಾಗಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಾಕಷ್ಟು ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಕ್ಕಳಿಗೆ ಯಾವೆಲ್ಲ ಆಹಾರ ನೀಡಬೇಕು ಎನ್ನುವ ಕುರಿತು ಪೋಷಕರಿಗೆ ಅಂಗನವಾಡಿ ಕಾರ್ಯಕರ್ತರ ಮೂಲಕ ತಿಳಿಸಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್‌ಆರ್‌ಸಿ ಕೇಂದ್ರಕ್ಕೆ ದಾಖಲಿಸಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ.
– ಸೇಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಉಪನಿರ್ದೇಶಕ, ಉಡುಪಿ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.