ದ.ಕ., ಉಡುಪಿ ಜಿಲ್ಲೆಗೆ ತಟ್ಟದ ಬಂದ್‌ ಬಿಸಿ

Team Udayavani, Jan 26, 2018, 10:35 AM IST

26-26.jpg

ಮಂಗಳೂರು/ಉಡುಪಿ: ಮಹಾದಾಯಿ ನದಿ ನೀರು ಸಮಸ್ಯೆ ಇತ್ಯರ್ಥ ಆಗ್ರಹಿಸಿ ಕನ್ನಡಪರ ಒಕ್ಕೂಟ ಹಾಗೂ ಕೆಲವು ರೈತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತಿಕ್ರಿಯೆ ನೀರಸವಾಗಿತ್ತು.

ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ದಲ್ಲಿ ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾ ಣಿಕರು ಕೊಂಚ ಆತಂಕಕ್ಕೆ ಒಳಗಾಗಿದ್ದರು. ಮೈಸೂರು, ಬೆಂಗಳೂರು ಸಹಿತ ವಿವಿಧೆಡೆಗಳಲ್ಲಿ ಬಸ್‌ ಸಂಚಾರ ಸ್ಥಗಿತಗೊಂಡಿದ್ದು, ಈ ಕಡೆಗಳಿಗೆ ಮಂಗಳೂರು ವಿಭಾಗದಿಂದ ತೆರಳುವ ಕೆಲವು ಬಸ್‌ಗಳು ಸಂಚ ರಿಸಲಿಲ್ಲ. ವಿದ್ಯಾರ್ಥಿಗಳು, ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಬೆಳಗ್ಗೆ 10.30ರ ಬಳಿಕ ಕೆಎಸ್‌ಆರ್‌ಟಿಸಿ ಸಂಚಾರ ಸಹಜ ಸ್ಥಿತಿಗೆ ಮರಳಿತು.

ಇದೇ ಸ್ಥಿತಿ ಉಡುಪಿ, ಕುಂದಾಪುರದಲ್ಲಿಯೂ ಉಂಟಾಗಿತ್ತು. ಉಡುಪಿ ಜೆನರ್ಮ್ ಸರಕಾರಿ ಬಸ್‌ ನಿಲ್ದಾಣದಿಂದ ಯಾವುದೇ ಬಸ್‌ಗಳು ಸಂಚರಿಸದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳನ್ನು ಅವಲಂಬಿಸ ಬೇಕಾಯಿತು. ಮಧ್ಯಾಹ್ನದ ಬಳಿಕ ಉಡುಪಿ ಯಿಂದ ಹೆಬ್ರಿ, ಕಾರ್ಕಳ ಕಡೆಗೆ ಹೋಗುವ ಕೆಲವು ಬಸ್‌ಗಳು ಸಂಚರಿಸಿದವು.

ಕುಂದಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬೆಳಗ್ಗೆ ಕೆಲಕಾಲ ತಡೆಹಿಡಿದದ್ದರಿಂದ ವಿದ್ಯಾರ್ಥಿಗಳು, ನಿತ್ಯ ಸಂಚರಿಸುವ ಜನರು ಸಂಕಷ್ಟ ಅನುಭವಿಸಿದರು. ಗಂಗೊಳ್ಳಿ, ಸಿದ್ದಾಪುರ, ಹಾಲಾಡಿ ಭಾಗಗಳಿಗೆ ಮಧ್ಯಾಹ್ನದ ಬಳಿಕ ಸಂಚಾರ ಆರಂಭಗೊಂಡಿತು. ಹುಬ್ಬಳ್ಳಿ, ಉತ್ತರ ಕನ್ನಡ, ಶಿರಸಿ, ಯಲ್ಲಾಪುರ ಭಾಗಗಳಿಗೆ ಸಂಚರಿಸುವ ಸರಕಾರಿ ಬಸ್‌ಗಳೆಲ್ಲ ಕುಂದಾಪುರ ಬಸ್‌ ನಿಲ್ದಾಣದಲ್ಲಿ ನಿಂತಿದ್ದವು. ಸಂಜೆ ಬಳಿಕ ಅಂತರ್‌ ಜಿಲ್ಲಾ ಬಸ್‌ ಸಂಚಾರ ಆರಂಭಗೊಂಡಿತು. ಸಿಟಿ, ಖಾಸಗಿ ಬಸ್‌, ಆಟೋ ರಿಕ್ಷಾ ಸಹಿತ ಅನ್ಯ ವಾಹನ ಸಂಚಾರ ಎಂದಿನಂತೆಯೇ ಇತ್ತು. 

ರೈಲು ತಡೆದು ಪ್ರತಿಭಟನೆ
ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣ ಗೌಡ ಬಣದ ದ.ಕ. ಘಟಕವು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಕೇರಳಕ್ಕೆ ತೆರಳುವ ರೈಲನ್ನು ತಡೆದು ಪ್ರತಿಭಟನೆ ನಡೆಸಿತು.ಈ ಸಂದರ್ಭದಲ್ಲಿ ತುಳು ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಸ್ಥಳೀಯರು ಕರವೇ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು, ನೇತ್ರಾವತಿ ತಿರುವು ಯೋಜನೆ ವಿರುದ್ಧ ಪ್ರತಿಕ್ರಿಯಿಸದ ನೀವು ಈಗೇಕೆ ಬೆಂಬಲ ನೀಡಿದ್ದೀರಿ ಎಂದು ಪ್ರಶ್ನಿಸಿದರು.

ಬಸ್‌ ನಿಲುಗಡೆಗೆ ಆದೇಶಿಸಿಲ್ಲ
ಮಹಾದಾಯಿ ನದಿ ನೀರಿನ ಸಮಸ್ಯೆ ನಿವಾ ರಣೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ ಹಿನ್ನೆಲೆಯಲ್ಲಿ ಕರಾವಳಿ ಸಹಿತ ಎಲ್ಲೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ರದ್ದು ಮಾಡುವಂತೆ ಕೆಎಸ್‌ಆರ್‌ಟಿಸಿ ನಿಗಮ ದಿಂದ ಯಾವುದೇ ಅಧಿಕೃತ ಆದೇಶ ನೀಡಿಲ್ಲ. ಆದರೆ ಬೆಂಗಳೂರು ಮತ್ತಿತರ ಭಾಗ ಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್‌ಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮುಂಚಿತ ವಾಗಿ ಬಸ್‌ ಸಂಚಾರ ರದ್ದುಗೊಳಿಸಲಾಗಿತ್ತು.
ಕೆ. ಗೋಪಾಲ ಪೂಜಾರಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.