ವಾರಾಂತ್ಯ, ದೀಪಾವಳಿಯ ಸರಣಿ ರಜೆ : ಮಲ್ಪೆ ಬೀಚ್‌, ಐಲ್ಯಾಂಡ್‌ನ‌ಲ್ಲಿ ಜನದಟ್ಟಣೆ

Team Udayavani, Oct 24, 2022, 10:11 AM IST

ವಾರಾಂತ್ಯ, ದೀಪಾವಳಿಯ ಸರಣಿ ರಜೆ : ಮಲ್ಪೆ ಬೀಚ್‌, ಐಲ್ಯಾಂಡ್‌ನ‌ಲ್ಲಿ ಜನದಟ್ಟಣೆ

ಮಲ್ಪೆ : ವಾರಾಂತ್ಯ, ದೀಪಾವಳಿಯ ಸರಣಿ ರಜೆಯ ಹಿನ್ನೆಲೆಯಲ್ಲಿ ಮಲ್ಪೆ ಕಡಲತೀರದಲ್ಲಿ ಜನಸಂದಣಿ ತೀವ್ರವಾಗಿದೆ. ಬೀಚ್‌ನಲ್ಲಿ ರವಿವಾರ ಜನದಟ್ಟಣೆ ಕಂಡು ಬಂದಿದ್ದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ನಾಲ್ಕನೇ ಶನಿವಾರ, ರವಿವಾರ, ನರಕ ಚತುರ್ದಶಿ, ಬಲಿಪಾಡ್ಯ ಸೇರಿದಂತೆ ಬಧವಾರದವರೆಗೆ ಸರಣಿ ರಜೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬಹುತೇಕ ಮಂದಿ ಹಬ್ಬ ಆಚರಿಸಲು ಊರಿಗೆ ಬಂದಿದ್ದರು. ಬಹುತೇಕ ಪ್ರವಾಸಿಗರು ಕುಟುಂಬ ಸಮೇತರಾಗಿ ಪ್ರವಾಸಿ ತಾಣಗಳಿಗೆ ಹೊರಟಿದ್ದರು. ರವಿವಾರ ಬೆಳಗ್ಗಿನಿಂದ ವಾಹನಗಳ ಸಾಲು ಮಲ್ಪೆ ಕಡೆಗೆ ಬರುತ್ತಿದ್ದವು. ಬಹುತೇಕ ಬೆಂಗಳೂರು, ಮೈಸೂರು, ಕೇರಳ ಹಾಗೂ ತಮಿಳುನಾಡಿನಿಂದ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದಾರೆ. ಸೈಂಟ್‌ ಮೇರಿಸ್‌ ಐಲ್ಯಾಂಡ್‌, ಸೀವಾಕ್‌ ವೇನಲ್ಲೂ ಜನಸಂದಣಿ ಕಂಡು ಬಂದಿದೆ.

ರವಿವಾರ 20 ಸಾವಿರ ಮಂದಿ ಬೀಚ್‌ಗೆ ಬಂದು ಹೋಗಿದ್ದರೆನ್ನಲಾಗಿದೆ. ಬೀಚ್‌ನಲ್ಲಿ ಬುಧವಾರದವರೆಗೆ ಪ್ರವಾಸಿಗರು ಸೇರುವುದರಿಂದ ಸುರಕ್ಷೆಗಾಗಿ ಜೆಸ್ಕೀ ಸ್ಕೂಟರ್‌ ಹಾಗೂ ಹೆಚ್ಚುವರಿ ಜೀವರಕ್ಷಕರನ್ನು ನೇಮಿಸಲಾಗಿದೆ.

ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು, ಸಂಜೆ ಒಂದೇ ಸವನೆ ಸುರಿದ ಮಳೆ ಬೀಚ್‌ನಲ್ಲಿ ಸೇರಿದ್ದ ಪ್ರವಾಸಿಗರನ್ನು ಚದುರಿ ಹೋಗುವಂತೆ ಮಾಡಿದೆ.

ವಸತಿ ಗೃಹಕ್ಕೆ ಬೇಡಿಕೆ
ಸಾಲು ರಜೆಯಿಂದಾಗಿ ಕೆಲವೊಂದು ಪ್ರಮುಖ ಪ್ರವಾಸಿ ತಾಣಗಳಲ್ಲಿ ವಸತಿ ಗೃಹಗಳ ಸಮಸ್ಯೆ ಎದುರಾಗಿದೆ. ವಸತಿ ಗೃಹಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು ಕೆಲವರು ತಿಂಗಳ ಮೊದಲೇ ಹೋಮ್‌ಸ್ಟೇ, ವಸತಿಗೃಹ, ಕೊಠಡಿಯನ್ನು ಕಾಯ್ದಿರಿಸಿಕೊಂಡಿದ್ದರೆ ಕೆಲವರು ರೂಮಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ.

ಟ್ರಾಫಿಕ್‌ ಜಾಮ್‌
ನಿತ್ಯ ಟ್ರಾಫಿಕ್‌ ಜಾಮ್‌ ಸಮಸ್ಯೆಯನ್ನು ಎದುರಿಸುತ್ತಿರುವ ಮಲ್ಪೆ ರಸ್ತೆಯಲ್ಲಿ ಇದೀಗ ಪ್ರವಾಸಿಗರ ವಾಹನ ಸಂಚಾರದಿಂದಾಗಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗಿ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಟ್ರಾಫಿಕ್‌ ಜಾಮ್‌ ಸಮಸ್ಯೆ ಬುಧವಾರದ ವರೆಗೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಪೊಲೀಸರು ವಾಹನ ನಿಯಂತ್ರಣದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ : ಇಂದಿನಿಂದ ಎಲ್ಲೆಡೆ ದೀಪಾವಳಿ ಸಂಭ್ರಮ : ಕರಾವಳಿಯಲ್ಲೆಡೆ ಸಕಲ ತಯಾರಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.