ಹಸಿ ತ್ಯಾಜ್ಯದಿಂದ ಆದಾಯ; ಉಡುಪಿ ನಗರಸಭೆ ಯೋಜನೆ

ಬೆಂಗಳೂರಿನ ತೋಟಗಾರಿಕೆ ಇಲಾಖೆ ಬಯೋಸೆಂಟರ್‌ ತಜ್ಞರು ಪರಿಶೀಲಿಸಿ ಅನುಮೋದನೆಯನ್ನು ನೀಡಿದ್ದಾರೆ.

Team Udayavani, Jan 17, 2023, 5:16 PM IST

ಹಸಿ ತ್ಯಾಜ್ಯದಿಂದ ಆದಾಯ; ಉಡುಪಿ ನಗರಸಭೆ ಯೋಜನೆ

ಉಡುಪಿ: ನಗರದಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯದಿಂದ ಆದಾಯಗಳಿಸುವ ನಿಟ್ಟಿನಲ್ಲಿ ನಗರಸಭೆ ಯೋಜನೆ ರೂಪಿಸಿದ್ದು, ವಿಂಡ್ರೊ ಕಂಪೋಸ್ಟ್‌ ಘಟಕ ನಿರ್ಮಾಣದ ಅಂತಿಮ ಘಟ್ಟದ ಕೆಲಸಗಳು ನಡೆಯುತ್ತಿವೆ. ತಿಂಗಳಾಂತ್ಯಕ್ಕೆ ಘಟಕದಲ್ಲಿ ಯಂತ್ರೋಪಕರಣ ಅಳವಡಿಕೆಯಾಗಲಿದೆ.

ಆಹಾರ ಪದಾರ್ಥ, ತರಕಾರಿ, ಮೀನು, ಮಾಂಸ ಇತ್ಯಾದಿಗಳ ತ್ಯಾಜ್ಯದಿಂದ ನಿತ್ಯ ಸರಾಸರಿ 35ರಿಂದ 38ಟನ್‌ ಹಸಿ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದನ್ನು ವ್ಯವಸ್ಥಿತವಾಗಿ ಗೊಬ್ಬರವಾಗಿಸುವ ಬಗ್ಗೆ ಅಧ್ಯಯನ ನಡೆಸಿ ವಿಂಡ್ರೊ ಕಾಂಪೋಸ್ಟ್‌ ಘಟಕ ನಿರ್ಮಾಣದ ಮೂಲಕ ಸಾವಯವ ಗೊಬ್ಬರ ಪಡೆಯುವ ಯೋಜನೆ ಇದು.

ಅಲೆವೂರು ಸಮೀಪದಲ್ಲಿರುವ ಕರ್ವಾಲು ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಹಸಿ ಕಸವನ್ನು ಒಂದೆಡೆ ಸುರಿದು ದಿಬ್ಬಗಳ ಮಾದರಿಯಲ್ಲಿ ವಿಂಗಡಿಸಲಾಗಿದೆ. ಹೆಚ್ಚು ಸಂಸ್ಕರಿತವಲ್ಲದ 150 ಟನ್‌ ಗೊಬ್ಬರವನ್ನು ಈಗಾಗಲೇ ಪ್ರಾಯೋಗಿಕವಾಗಿ ಉತ್ಪಾದಿಸಿ ರೈತರಿಗೆ ನೀಡಲಾಗಿದ್ದು, ಕೃಷಿಕರು ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

68 ಲ.ರೂ. ಮೌಲ್ಯದ ಯಂತ್ರೋಪಕರಣ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನವಿರುವ ಅಳವಡಿಸಲಾಗುತ್ತಿದ್ದು, ಈ ಯಂತ್ರಗಳಿಗೆ 68 ಲ. ರೂ.ವೆಚ್ಚವಾಗಲಿದೆ. ಯಂತ್ರೋಪಕರಣ ಸಹಾಯದಿಂದ ಕಾಂಪೋಸ್ಟ್‌ ಆದ ಗೊಬ್ಬರವನ್ನು ಒಣಗಿಸಿ ಬಳಿಕ ಒಂದೇ ಒಂದು ಪ್ಲಾಸ್ಟಿಕ್‌ನ ಸಣ್ಣ ತುಂಡು ಗೊಬ್ಬರಕ್ಕೆ ಹೋಗದಂತೆ ಸಂಸ್ಕರಿಸಲಾಗುತ್ತದೆ. 36 ಎಂಎಂ, 16 ಎಂಎಂ, 4 ಎಂಎಂನಲ್ಲಿ ಸಂಸ್ಕರಿಸಿ, ಪುಡಿಯಾಗಿಸುವ ಯಂತ್ರಗಳನ್ನು ಘಟಕದಲ್ಲಿ ಅಳವಡಿಸಲಾಗುತ್ತದೆ. ಅನಂತರ ಗೊಬ್ಬರದ ಪುಡಿಯನ್ನು ಬ್ಯಾಗ್‌ನಲ್ಲಿ ತುಂಬಿ ಉತ್ತಮ ದರದಲ್ಲಿ ಮಾರಾಟ ಮಾಡುವ ಪ್ರಕ್ರಿಯೆ ನಡೆಯಲಿದೆ. ವಿಂಡ್ರೊ ಕಾಂಪೋಸ್ಟ್‌ನ ಪ್ರಾಯೋಗಿಕ ಗೊಬ್ಬರದ ಮಾದರಿಯನ್ನು ಬೆಂಗಳೂರಿನ ತೋಟಗಾರಿಕೆ ಇಲಾಖೆ ಬಯೋಸೆಂಟರ್‌ ತಜ್ಞರು ಪರಿಶೀಲಿಸಿ ಅನುಮೋದನೆಯನ್ನು ನೀಡಿದ್ದಾರೆ.

ಫೆಬ್ರವರಿ ತಿಂಗಳಾಂತ್ಯದೊಳಗೆ ಕಾರ್ಯಾರಂಭ
ಉಡುಪಿ ನಗರಸಭೆ ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಮಾದರಿಯಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಮಾರ್ಪಡಿಸಿ ಅದರಿಂದ ಆದಾಯ ಪಡೆಯುವ ನಿಟ್ಟಿನಲ್ಲಿ ವಿಂಡ್ರೋ ಕಂಪೋಸ್ಟ್‌ ಘಟಕ ನಿರ್ಮಿಸಲಾಗುತ್ತಿದೆ. ಫೆಬ್ರವರಿ ತಿಂಗಳಾಂತ್ಯದೊಳಗೆ ಕಾರ್ಯಾರಂಭ ಮಾಡಲಿವೆ.
– ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷರು. ಉಡುಪಿ ನಗರಸಭೆ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.