ಕ್ವಾರಂಟೈನ್ ನಿಂದ ಬಂದು ಓಡಾಡಿದ್ದ ವ್ಯಕ್ತಿಗೆ ಸೋಂಕು ದೃಢ: ಕಾರ್ಕಳದ ಇನ್ನಾಗ್ರಾಮ ಸೀಲ್ ಡೌನ್
Team Udayavani, May 31, 2020, 2:36 PM IST
ಬೆಳ್ಮಣ್: ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಯುವಕನೋರ್ವನಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಈ ಸಂಬಂಧ ಇಂದು ಗ್ರಾಮದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಿದ್ದು, ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ ಈತ ಹೆಬ್ರಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ. ಮೂರು ದಿನದ ಹಿಂದೆ ಈತ ಮನೆಗೆ ಆಗಮಿಸಿದ್ದ. ಅಂದರೆ ಕೋವಿಡ್ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈಸೇರುವ ಮೊದಲೇ ಈತನನ್ನು ಕ್ವಾರಂಟೈನ್ ನಿಂದ ಬಿಡುಗಡೆ ಮಾಡಲಾಗಿತ್ತು. ಮನೆಗೆ ಬಂದ ಈತ ನಂತರ ಇಲ್ಲಿ ಕೆಲವು ಕಡೆ ಓಡಾಡಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಈತನಿಗೆ ಕೋವಿಡ್ ಪಾಸಿಟಿವ್ ಇರುವ ಬಗ್ಗೆ ದೃಢವಾಗಿದೆ. ಸದ್ಯ ಈತನನ್ನು ನಿಗಧಿತ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗ್ರಾಮದ ಮಡ್ಮಣ್, ಬಗ್ಗರಗುತ್ತು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T