ಕಾರ್ಕಳ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Sep 27, 2020, 7:24 PM IST
ಕಾರ್ಕಳ: ತಾಲೂಕಿನ ಹಿರ್ಗಾನ ಚಿಕ್ಕಲ್ ಬೆಟ್ಟು ನಿವಾಸಿ ಸುನೀಲ್ ಎನ್ನುವವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.27 ರಂದು ನಡೆದಿದೆ.
ಪುಣೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಲಾಕ್ ಡೌನ್ ಅವಧಿಯಲ್ಲಿ ಊರಿಗೆ ಮರಳಿದ್ದರು ಎಂದು ಮಾಹಿತಿ ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.