ಕಟಪಾಡಿ: ಬೈಕ್ ಢಿಕ್ಕಿಯಾಗಿ ಪಾದಾಚಾರಿ ಮೃತ್ಯು
Team Udayavani, Dec 10, 2022, 12:28 PM IST
ಕಟಪಾಡಿ: ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಶನಿವಾರ (ಡಿ.10) ನಡೆದಿದೆ.
ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಮೃತ ದುರ್ದೈವಿ.
ಪಾದಾಚಾರಿ ಸತೀಶ್ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು.
ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.