ಬನ್ನಂಜೆ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ಕಾರ್ಯಾರಂಭ

ಮಲ್ಟಿಸ್ಕ್ರೀನ್‌, ಹೊಟೇಲ್‌ಗೆ ಇನ್ನಷ್ಟೇ ಟೆಂಡರ್‌

Team Udayavani, Jun 26, 2022, 5:59 PM IST

22

ಉಡುಪಿ: ಪ್ರಯಾಣಿಕರ ಅನುಕೂಲಕ್ಕಾಗಿ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ| ವಿ.ಎಸ್‌. ಆಚಾರ್ಯ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಿಂದ ಉಡುಪಿ ನಗರ, ಜಿಲ್ಲೆ, ಅಂತರ್‌ ಜಿಲ್ಲೆ ಮತ್ತು ಅಂತಾರಾಜ್ಯ ವ್ಯಾಪ್ತಿಯ ಸ್ಥಳಗಳಿಗೆ ನಿಗಮದ ಎಲ್ಲ ಸಾರಿಗೆಗಳ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಈಗಾಗಲೇ ಅಂಗಡಿ-ಮುಂಗಟ್ಟುಗಳಿಗೆ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, 8 ಅಂಗಡಿಗಳು ಕಾರ್ಯಾರಂಭ ಮಾಡಲಿವೆ. ಹೊಟೇಲ್‌, ಸಿನೇಮಾ ಮಲ್ಟಿಸ್ಕ್ರೀನ್‌ ಚಿತ್ರಮಂದಿರ ಆರಂಭಕ್ಕೆ ಇನ್ನಷ್ಟೇ ಟೆಂಡರ್‌ ತೆರೆಯಬೇಕಿದೆ. ಮುಂದಿನ ವಾರ ಇದಕ್ಕೆ ಟೆಂಡರ್‌ ಕರೆಯುವ ಸಾಧ್ಯತೆಗಳಿವೆ.

ಸುಸಜ್ಜಿತ ತಂಗುದಾಣ 2.50 ಎಕರೆ ಪ್ರದೇಶದಲ್ಲಿ ಸುಮಾರು 30 ಕೋ. ರೂ. ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣಗೊಂಡಿದೆ. ಅಂಗಡಿಗಳು, ಶೌಚಾಲಯ, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು, ನೋಂದಣಿ ಕೇಂದ್ರಗಳು ಇರಲಿವೆ. ಕಟ್ಟಡದ ಒಳಗೆ ಎಸ್ಕಲೇಟರ್‌ ಹಾಗೂ ಲಿಫ್ಟ್ ವ್ಯವಸ್ಥೆ, ಮೆಟ್ಟಿಲು ಇರಲಿದೆ. ಕರಾವಳಿಯಲ್ಲಿ ಎಸ್ಕಲೇಟರ್‌ ವ್ಯವಸ್ಥೆ ಹೊಂದಿರುವ ಮೊದಲ ಬಸ್‌ ತಂಗುದಾಣ ಇದಾಗಿದೆ. ಮಹಿಳಾ ಪ್ರಯಾಣಿಕರಿಗಾಗಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ಹಾಗೂ ಬೇಬಿ ಕೇರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ವಿಐಪಿ ಲಾಂಚ್‌, ರಿಸರ್ವೇಶನ್‌ ಕೌಂಟರ್‌, ಪಿಸಿ ಕೊಠಡಿಗಳನ್ನೂ ಮಾಡಲಾಗಿದೆ.

ಸಿಬಂದಿ ನೇಮಕ ಶೀಘ್ರ ನೂತನ ಬಸ್‌ ತಂಗುದಾಣದಲ್ಲಿ ಸಿಬಂದಿ ಕೊರತೆ ಇದ್ದು, ಶೀಘ್ರದಲ್ಲಿ ನೇಮಕಾತಿ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ನಿರ್ವಹಣೆ ಹಾಗೂ ಭದ್ರತೆಗೆ ಹೋಂ ಗಾರ್ಡ್‌ಗಳನ್ನು ಕೂಡ ನಿಯೋಜಿಸಲು ಉದ್ದೇಶಿಸಲಾಗಿದೆ. ಈಗಾಗಲೇ ನಗರಸಭೆ ಕಟ್ಟಡದಲ್ಲಿರುವ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣವೂ ಕಾರ್ಯಾರಂಭ ಮಾಡುತ್ತಿದೆ. ಇದನ್ನು ತೆಗೆದ ಬಳಿಕ ಇಲ್ಲಿನ ಸಿಬಂದಿ ಬನ್ನಂಜೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಆದರೆ ಈ ಪ್ರಕ್ರಿಯೆಗೆ ಮತ್ತಷ್ಟು ಸಮಯಾವಕಾಶ ತಗಲಲಿದೆ ಎನ್ನುತ್ತಾರೆ ಅಧಿಕಾರಿಗಳು.

ಡಿವೈಡರ್‌ ಸಮಸ್ಯೆ: ಹೆದ್ದಾರಿ ಇಲಾಖೆಗೆ ಪತ್ರ

ನೂತನ ಬಸ್‌ ತಂಗುದಾಣಕ್ಕೆ ಈಗ ಎಲ್ಲ ಬಸ್‌ಗಳೂ ಬಂದು ನೋಂದಣಿ ಮಾಡಿಕೊಂಡು ಆಯಾ ಊರುಗಳಿಗೆ ತೆರಳುತ್ತಿವೆ. ಆದರೆ ವೋಲ್ವೋ ಬಸ್‌ಗಳು ಮಾತ್ರಬರುತ್ತಿಲ್ಲ. ಇದಕ್ಕೆ ಕಾರಣ ಕಿರಿದಾದ ಸರ್ಕಲ್‌ ವ್ಯವಸ್ಥೆ. ಬನ್ನಂಜೆ ಬಳಿ ಇರುವ ಸರ್ಕಲ್‌ ಮೂಲಕ ತಿರುವು ಪಡೆಯಲು ಸಮಸ್ಯೆಯಾಗುತ್ತಿದೆ. ಬೈಪಾಸ್‌ ಮೂಲಕವೂ ತಿರುವು ಪಡೆಯುವುದು ಸುಲಭವಲ್ಲ. ಈ ಸಮಸ್ಯೆ ನಿವಾರಿಸಿ ಸರ್ಕಲ್‌ ವಿಸ್ತರಣೆ ಮಾಡುವುದು ಅಥವಾ ಡಿವೈಡರ್‌ ತೆರವುಗಳಿಸಿ ಬಸ್‌ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೆಎಸ್ಸಾರ್ಟಿಸಿಯಿಂದ ಹೆದ್ದಾರಿ ಇಲಾಖೆಗೆ ಪತ್ರ ಬರೆಯಲಾಗಿದೆ.

ಹಲವು ಸೌಲಭ್ಯ: ಬನ್ನಂಜೆಯಲ್ಲಿ ನೂತನ ಕೆಎಸ್ಸಾರ್ಟಿಸಿ ಬಸ್‌ತಂಗುದಾಣದಲ್ಲಿ ಎಲ್ಲ ಬಸ್‌ಗಳು ಬಂದು ನೋಂದಣಿ ಮಾಡಿಸಿಕೊಳ್ಳುತ್ತಿವೆ. ಸಿಬಂದಿ ನೇಮಕವೂ ಶೀಘ್ರದಲ್ಲಿ ನಡೆಯಲಿದೆ. –ರಾಜೇಶ್‌, ಕ.ರಾ.ರ.ಸಾ.ಸಂ. ವಿಭಾಗೀಯ ನಿಯಂತ್ರಣಾಧಿಕಾರಿ, ಮಂಗಳೂರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.