ಮಣಿಪಾಲ: ಅಡುಗೆ ಅನಿಲ ಸಿಲಿಂಡರ್ ಸ್ಫೋಟ; ಅಪಾರ ಹಾನಿ
Team Udayavani, Jun 24, 2021, 11:31 AM IST
ಸಾಂಧರ್ಭಿಕ ಚಿತ್ರ
ಮಣಿಪಾಲ: ಮಣಿಪಾಲ ಅನಂತ ನಗರದ ಸೋನಿ ಕ್ಲಿನಿಕ್ ನ ಹಿಂಬದಿಯಲ್ಲಿ ಇರುವ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .
ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು. ಮನೆಯವರು ಒದ್ದೆ ಬಟ್ಟೆಗಳನ್ನು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅದು ನಿಯಂತ್ರಣಕ್ಕೆ ಬಂದಿಲ್ಲ. ಏಕಾಏಕಿಯಾಗಿ ಸಿಲಿಂಡರ್ ಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ಮನೆಯವರು ಮನೆಯಿಂದ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಅದಾದ ಬಳಿಕ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿರುವ ವಸ್ತುಗಳಿಗೆ ಹಾನಿಯಾಗಿದೆ. ತಕ್ಷಣವೇ ಅಗ್ನಿ ಶಾಮಕ ಇಲಾಖೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ